ಭಟ್ಕಳದಲ್ಲಿ ಮತ್ತೊಂದು ಸೋಂಕು ಪತ್ತೆ: ರಾಜ್ಯದಲ್ಲಿ ಒಟ್ಟು 55 ಮಂದಿ ಸೋಂಕಿತರು
Team Udayavani, May 17, 2020, 5:50 PM IST
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಕೋವಿಡ್-19 ಸೋಂಕು ಪತ್ತೆಯಾಗಿದೆ. ಉತ್ತರ ಕನ್ನಡದ ಭಟ್ಕಳದಲ್ಲಿ ವೃದ್ಧರೋರ್ವರಿಗೆ ಸೋಂಕು ಪತ್ತೆಯಾಗಿದ್ದು, ರಾಜ್ಯದ ಸೋಂಕಿತ ಸಂಖ್ಯೆ 1147ಕ್ಕೆ ಏರಿಕೆಯಾಗಿದೆ.
ಸೋಂಕಿತ ಸಂಖ್ಯೆ 740ರ ಸಂಪರ್ಕದಿಂದ 68 ವರ್ಷದ ವ್ಯಕ್ತಿಗೆ ಸೋಂಕು ತಾಗಿರುವುದು ದೃಢವಾಗಿದೆ. ಇದಿರಿಂದ ಉತ್ತರ ಕನ್ನಡದ ಒಟ್ಟು ಸೋಂಕಿತರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 55 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1147ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಿಂದ ಗುಣಮುಖರಾಗಿ ಇದುವರೆಗೆ 509 ಜನರು ಬಿಡುಗಡೆಯಾಗಿದ್ದಾರೆ. 37 ಜನರು ಸೋಂಕಿನ ಕಾರಣದಿಂದ ಗುಣಮುಖರಾಗಿದ್ದು, ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣಕ್ಕೆ ಮರಣಹೊಂದಿದ್ದಾನೆ.