ಆನ್ಲೈನ್ ಮದ್ಯ ಮಾರಾಟ: ಕಾರಣ ಕೇಳಿದ ಹೈಕೋರ್ಟ್
Team Udayavani, Nov 5, 2019, 3:03 AM IST
ಬೆಂಗಳೂರು: ಆನ್ಲೈನ್ ಮೂಲಕ ಮದ್ಯ ಸರಬರಾಜಿಗೆ ಅನುಮತಿ ನೀಡಿ ನಂತರ ಅದನ್ನು ವಾಪಸ್ ಪಡೆದಿರುವುದಕ್ಕೆ ಸೂಕ್ತ ಕಾರಣ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಚಾಟಿ ಬೀಸಿದೆ. ಈ ಸಂಬಂಧ ಚೆನ್ನೈ ಮೂಲದ ಖಾಸಗಿ ಕಂಪನಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ಅರ್ಜಿ ವಿಚಾರಣೆ ವೇಳೆ, “ಆನ್ಲೈನ್ ಮದ್ಯ ಸರಬರಾಜಿಗೆ ಮೊದಲು ಅನುಮತಿ ನೀಡಿ, ಬಳಿಕ ವಾಪಸ್ ಪಡೆಯಲಾಗಿದೆ. ಆದರೆ, ಸಮರ್ಪಕ ಕಾರಣಗಳನ್ನು ನೀಡಿಲ್ಲ. ಸಮಂಜಸ ಕಾರಣ ನೀಡದಿದ್ದರೆ, ಅಬಕಾರಿ ಇಲಾಖೆಯ ಆದೇಶ ರದ್ದುಗೊಳಿಸಬೇಕಾಗುತ್ತದೆ. ಆದ್ದರಿಂದ ಅನುಮತಿ ವಾಪಸ್ ಪಡೆದ ಬಗ್ಗೆ ಕಾರಣ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿತು. ಆನ್ಲೈನ್ ಮೂಲಕ ಮದ್ಯ ಸರಬರಾಜಿಗೆ 2017ರ ಆ.1ರಂದು ಅರ್ಜಿದಾರ ಸಂಸ್ಥೆಗೆ ನೀಡಲಾಗಿದ್ದ ಅನುಮತಿಯನ್ನು ಅಬಕಾರಿ ಇಲಾಖೆ ವಾಪಸ್ ಪಡೆದುಕೊಂಡಿತ್ತು. ಇದನ್ನು ಪ್ರಶ್ನಿಸಿ ಖಾಸಗಿ ಕಂಪನಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ