ಪ್ರವಾಸಿಗರಿಗೆ ಆನ್ಲೈನ್ ಟಿಕೆಟ್ ಸೌಲಭ್ಯ
Team Udayavani, Feb 19, 2020, 3:02 AM IST
ಮೈಸೂರು: ಪ್ರವಾಸಿಗರ ನೆಚ್ಚಿನ ತಾಣ ಮೈಸೂರಿಗೆ ದೇಶ, ವಿದೇಶ ದಿಂದ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗು ವಂತೆ ಪ್ರವಾ ಸೋದ್ಯಮ ಇಲಾಖೆಯು ಬುಕ್ ಮೈ ಶೋ ಆ್ಯಪ್ ಸಹಯೋಗ ದಲ್ಲಿ ಸಿಟಿ ಪಾಸ್ ಹಾಗೂ ಸಿಂಗಲ್ ಟಿಕೆಟಿಂಗ್ ವ್ಯವಸ್ಥೆ ಜಾರಿ ಮಾಡಲು ಉದ್ದೇಶಿಸಿದೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ಅಧ್ಯಕ್ಷತೆಯಲ್ಲಿ ಮಂಗಳವಾರ ಈ ಸಂಬಂಧ ಚರ್ಚೆ ನಡೆಸಲಾಯಿತು. ಕುಮಾರ್ ಪುಷ್ಕರ್ ಸಭೆ ಯಲ್ಲಿ ಮಾತನಾಡಿ, ಆನ್ಲೈನ್ ಟಿಕೆಟ್ ಜಾರಿ ಮಾಡುವುದರಿಂದ ಪ್ರವಾಸಿಗರಿಗೆ ಹೆಚ್ಚಿನ ಮಟ್ಟದಲ್ಲಿ ಅನುಕೂಲವಾಗಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ನಗರದ ಅನೇಕ ಪ್ರವಾಸಿ ತಾಣಗಳಿಗೆ ಆನ್ಲೈನ್ ಟಿಕೆಟ್ ಸೇವೆ ಜಾರಿ ಮಾಡಲು ಚಿಂತಿಸಲಾಗಿದೆ ಎಂದು ತಿಳಿಸಿದರು. ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಸಂತ ಫಿಲೋಮಿನಾ ಚರ್ಚ್,ಅರಮನೆ,
ಸ್ಯಾಂಡ್ ಮ್ಯೂಸಿಯಂ, ವ್ಯಾಕ್ಸ್ ಮ್ಯೂಸಿಯಂ, ರೈಲ್ವೆ ಮ್ಯೂಸಿಯಂ, ಲಲಿತ ಮಹಲ್ ಪ್ಯಾಲೇಸ್, ಮೃಗಾಲಯ, ಕಾರಂಜಿ ಕೆರೆ ಮುಂತಾದ ಪ್ರವಾಸಿ ತಾಣಗಳಲ್ಲಿ ಆನ್ಲೈನ್ ಮಾದರಿಯಲ್ಲಿ ಟಿಕೆಟ್ ವ್ಯವಸ್ಥೆ ಕಲ್ಪಿಸಿ, ಸ್ಥಳಗಳನ್ನು ವೀಕ್ಷಿಸಲು ಸುಲಭವಾಗುವಂತೆ ಮಾಡಬೇಕು ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ