ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ತೆರೆ ಎರಡೂ ಕ್ಷೇತ್ರಗಳ ಮತದಾನಕ್ಕೆ ಸಕಲ ಸಿದ್ಧತೆ ; ಮತದಾರರ ಮನ ಗೆಲ್ಲಲು ಜನನಾಯಕರ ಕಸರತ್ತು

Team Udayavani, May 17, 2019, 6:03 AM IST

16hub-14

ಬೆಂಗಳೂರು: ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಶುಕ್ರವಾರ ಸಂಜೆ ತೆರೆ ಬೀಳಲಿದ್ದು, ಮೇ 19ರಂದು ನಡೆಯುವ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಮಧ್ಯೆ, ಉಭಯ ಕ್ಷೇತ್ರಗಳಲ್ಲಿ ಪ್ರಚಾರದ ಕಾವು ಜೋರಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷದ ನಾಯಕರು ಗುರುವಾರ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿ, ಮತದಾರರ ಒಲವು ಗಳಿಸುವ ಯತ್ನ ನಡೆಸಿದರು.

ಮತದಾನಕ್ಕೆ ಸಕಲ ಸಿದ್ಧತೆ: ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌, ಎರಡೂ ಕ್ಷೇತ್ರಗಳ ಮತದಾನಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗಿದೆ. ಬಹಿರಂಗ ಪ್ರಚಾರಕ್ಕೆ ಮೇ 17ರ ಸಂಜೆ 6 ಗಂಟೆಗೆ ತೆರೆ ಬೀಳಲಿದ್ದು, ಕ್ಷೇತ್ರದ ಮತದಾರರಲ್ಲದ ರಾಜಕೀಯ ವ್ಯಕ್ತಿಗಳು ಹಾಗೂ ಇತರರಿಗೆ ಕ್ಷೇತ್ರ ಬಿಟ್ಟು ತೆರಳುವಂತೆ ಸೂಚನೆ ನೀಡಲಾಗಿದೆ ಎಂದರು.

ಚುನಾವಣೆ ನಡೆಯಲಿರುವ ಎರಡೂ ಕ್ಷೇತ್ರಗಳಲ್ಲಿ ಮತದಾನಕ್ಕೆ ಮೊದಲಿನ ಕೊನೆಯ 48 ಗಂಟೆಗಳಲ್ಲಿ ನೀತಿ ಸಂಹಿತೆ ಜಾರಿ ಇನ್ನಷ್ಟು ಬಿಗಿಗೊಳ್ಳಲಿದೆ. ಈಗಾಗಲೇ ಚಿಂಚೋಳಿ ಮತ್ತು ಕುಂದಗೋಳದಲ್ಲಿ ತಲಾ 15 ಫ್ಲಾಯಿಂಗ್‌ ಸ್ಕ್ವಾಡ್‌ ತಂಡಗಳು ಕಾರ್ಯಾಚರಿಸುತ್ತಿವೆ. ಇದಲ್ಲದೇ ಚಿಂಚೋಳಿಯಲ್ಲಿ 30, ಕುಂದಗೋಳದಲ್ಲಿ 18 ರಾಜ್ಯ ವಿಚಕ್ಷಣಾ ತಂಡಗಳು, ಚಿಂಚೋಳಿಯಲ್ಲಿ 22, ಕುಂದಗೋಳದಲ್ಲಿ 18 ಸೆಕ್ಟರ್‌ ಅಧಿಕಾರಿಗಳು, ಕ್ರಮವಾಗಿ 4 ಮತ್ತು 5 ಅಬಕಾರಿ ತಂಡಗಳು, 4ಮತ್ತು 3 ವಾಣಿಜ್ಯ ತೆರಿಗೆ ತಂಡಗಳನ್ನು ನಿಯೋ ಜಿಸಲಾಗಿದೆ. ಚಿಂಚೋಳಿಯಲ್ಲಿ 10 ಮತ್ತು ಕುಂದಗೋಳದಲ್ಲಿ 6 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸ ಲಾಗಿದೆ. ಎರಡೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೇ 17ರ ಸಂಜೆ 6 ಗಂಟೆಯಿಂದ ಮೇ 19ರ ಸಂಜೆ 6 ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಈ ನಿಷೇಧ ಕ್ಷೇತ್ರದ 5 ಕಿ.ಮೀ ಗಡಿ ಭಾಗದವರೆಗೆ ವಿಸ್ತರಣೆ ಯಾಗಿರುತ್ತದೆ ಎಂದು ಮಾಹಿತಿ ನೀಡಿದರು.

80 ಲಕ್ಷ ಅಕ್ರಮ ಹಣ ಜಪ್ತಿ
ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ಮೇ 15ರವರೆಗೆ ಚಿಂಚೋಳಿಯಲ್ಲಿ 6.82 ಲಕ್ಷ ರೂ.ನಗದು, 60 ಸಾವಿರ ರೂ. ಮೌಲ್ಯದ ಅಕ್ರಮ ಮದ್ಯ ಸೇರಿ ಒಟ್ಟು 7.42 ಲಕ್ಷ ರೂ.ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಅಲ್ಲದೇ, ಕುಂದಗೋಳದಲ್ಲಿ 42 ಲಕ್ಷ ರೂ.ನಗದು, 21 ಸಾವಿರ ರೂ.ಮೌಲ್ಯದ ಅಕ್ರಮ ಮದ್ಯ ಸೇರಿ 72.22 ಲಕ್ಷ ರೂ.ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಎರಡೂ ಕ್ಷೇತ್ರಗಳಲ್ಲಿ ವಶಪಡಿಸಿಕೊಳ್ಳಲಾದ ಅಕ್ರಮ ಹಣದ ಮೊತ್ತ 79.64 ಲಕ್ಷ ರೂ.ಆಗಿದೆಎಂದು ರಾಜ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.