ಇಂದಿನಿಂದ ಸಿಇಟಿಗೆ ಅರ್ಜಿ ಸಲ್ಲಿಸಲು ಅವಕಾಶ
Team Udayavani, Feb 5, 2020, 3:00 AM IST
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಏಪ್ರಿಲ್ನಲ್ಲಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಫೆ.5ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಎಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಬಿ- ಫಾರ್ಮಾ, 2ನೇ ವರ್ಷದ ಬಿ-ಫಾರ್ಮಾ, ಫಾರ್ಮಾ-ಡಿ ಮತ್ತು ಕೃಷಿ ವಿಜ್ಞಾನ ಕೋರ್ಸ್ಗಳಿಗೆ ಬುಧವಾರ ಬೆಳಗ್ಗೆ 11ರಿಂದ ಮಾ.2ರ ಸಂಜೆ 5.30ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಅರ್ಜಿಗಳನ್ನು ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನಲ್ಲಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಶುಲ್ಕ ಪಾವತಿಸಲು ಮಾ.6 ಕೊನೆಯ ದಿನವಾಗಿದೆ. ಶುಲ್ಕ ಪಾವತಿ ಮಾಡಿರುವವರು ಅರ್ಜಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಮಾ.19ರಿಂದ 25ರ ವರೆಗೆ ಅವಕಾಶ ನೀಡಲಾಗಿದೆ. ಏ.10ರಿಂದ ಪರೀಕ್ಷಾ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸುವ ವಿಧಾನ, ಷರತ್ತುಗಳು ಹಾಗೂ ಯುಜಿಸಿಇಟಿ-2020ರ ಸಂಪೂರ್ಣ ಮಾಹಿತಿಯನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಆಸಕ್ತರು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…