ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಸಿಎಂ ಸೇರಿ ಎಲ್ಲ ಮಂತ್ರಿಗಳ ಕಾರ್ಯಕ್ರಮದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ

Team Udayavani, Aug 19, 2022, 6:51 PM IST

DKShi

ಚಳ್ಳಕೆರೆ: ಸರ್ಕಾರ ತಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಸರಿ, ಇಲ್ಲದಿದ್ದರೆ ಸಿಎಂ ಸೇರಿದಂತೆ ಎಲ್ಲ ಮಂತ್ರಿಗಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಚಳ್ಳಕೆರೆಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇವಲ ನಮ್ಮ ಪಕ್ಷದ ನಾಯಕರಲ್ಲ. ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಹಕ್ಕಿನಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನ ನೀಡಲಾಗಿದೆ. ಅವರ ಯಾವುದಾದರೂ ಹೇಳಿಕೆ ಸರಿ ಇಲ್ಲ ಎನಿಸಿದ್ದಲ್ಲಿ ಅದನ್ನು ಟೀಕೆ ಮಾಡಬಹುದು. ಅದು ಪ್ರಜಾಪ್ರಭುತ್ವದ ಭಾಗ. ಆದರೆ ನೆರೆ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರು ಸರ್ಕಾರದ ಕಣ್ಣು ತೆರೆಸಲು ಹಾನಿ ಪ್ರದೇಶಕ್ಕೆ ಭೇಟಿ ನೀಡುತ್ತಿರುವಾಗ ಈ ರೀತಿ ಕಪ್ಪು ಬಾವುಟ ಪ್ರದರ್ಶಿಸಿ ಮೊಟ್ಟೆ ಹೊಡೆದಿರುವುದು ಸರಿಯಲ್ಲ ಎಂದರು.

ಸರ್ಕಾರ ಮಾಡಿದ ಅನೇಕ ತಪ್ಪುಗಳನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ತಮಗೆ ಅನ್ಯಾಯ ಆಗಿದೆ ಎಂದು ಪ್ರತಿಭಟಿಸಿದ್ದಾರೆ. ಇದು ಚರ್ಚೆಗೆ ಅವರು ನಮಗೆ ಕೊಟ್ಟಿರುವ ಅಸ್ತ್ರಗಳು. ರಾಜ್ಯದ ಜನ ಸಮಸ್ಯೆಗಳಿಂದ ಪರದಾಡುತ್ತಿರುವಾಗ ಸರ್ಕಾರವನ್ನು ಎಚ್ಚರಿಸುವ ಜವಾಬ್ದಾರಿ ವಿರೋಧ ಪಕ್ಷದ್ದಾಗಿದೆ. ಅದನ್ನು ಮಾಡಲು ಮುಂದಾದರೆ ಕಪ್ಪು ಬಾವುಟ ಹಾರಿಸಿ, ಮೊಟ್ಟೆ ಹೊಡೆಯುತ್ತಿದ್ದಾರೆ. ಈ ರೀತಿ ಸಿದ್ದರಾಮಯ್ಯ ಅವರನ್ನಾಗಲಿ, ಕಾಂಗ್ರೆಸ್ ಪಕ್ಷವನ್ನಾಗಲಿ ಹೆದರಿಸಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ನಾವು ಕಾಂಗ್ರೆಸ್ ಪಕ್ಷದವರು. ನಮಗೆ ಹೋರಾಟದ ಇತಿಹಾಸ ಇದೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್. ವಿರೋಧ ಪಕ್ಷದ ನಾಯಕರು ತಮ್ಮ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಬೊಮ್ಮಾಯಿ ಸಾಹೇಬರೆ, ಕಟೀಲ್ ಸಾಹೇಬರೇ ನಾನು ಯಾವುದೇ ಕರೆ ನೀಡದಿದ್ದರೂ ಅನೇಕ ಕಡೆಗಳಲ್ಲಿ ನಮ್ಮ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಒಂದು ವೇಳೆ ನಾನು ಅಧಿಕೃತವಾಗಿ ಕರೆ ನೀಡಿ ಮಂತ್ರಿಗಳ ಕಾರ್ಯಕ್ರಮದ ಕಡೆಗಳಲ್ಲಿ ನಿಮ್ಮ ಲಂಚ ಹಾಗೂ 40% ಕಮಿಷನ್ ವಿರೋಧಿಸಿ ಅದೇ ಕಪ್ಪು ಬಾವುಟ ಹಿಡಿದು ಅಡ್ಡಿ ಮಾಡಲು ಹೊರಟರೆ ನಿಮ್ಮ ಕಾನೂನು ವ್ಯವಸ್ಥೆ ಏನಾಗುತ್ತದೆ ಎಂದು ಯೋಚಿಸಿದ್ದೀರಾ? ಎಂದರು.

ನೀವು ಈ ಹಿಂದೆ ನೈತಿಕ ಪೊಲೀಸ್ ಗಿರಿಯಲ್ಲಿ ತಪ್ಪೇನಿದೆ ಎಂದು ಹೇಳಿದ್ದಿರಿ. ಮತ್ತೊಂದು ಕಡೆ ನಾವು ಪ್ರತಿಭಟನೆ ಮಾಡಿದ ಸಂದರ್ಭದಲ್ಲಿ 30-40 ಪ್ರಕರಣ ದಾಖಲಿಸಿದ್ದೀರಿ. ನಾವು ಅದಕ್ಕೆ ಹೆದರಲಿಲ್ಲ. ಸರ್ಕಾರ ಇದನ್ನು ತಡೆಯದಿದ್ದರೆ ನಮ್ಮ ನಾಯಕರ ಜತೆ ಚರ್ಚೆ ಮಾಡಿ ಮುಂದಿನ ಹೋರಾಟದ ಹೆಜ್ಜೆ ಇಡಬೇಕಾಗುತ್ತದೆ ಎಂದರು.

ಬೊಪಯ್ಯ ಅವರನ್ನು ಬಂಧಿಸಬೇಕು

ಮೊಟ್ಟೆ ಹೊಡೆದಿರುವವರು ಕಾಂಗ್ರೆಸ್ ಕಾರ್ಯಕರ್ತರು ಎಂಬ ಬೋಪಯ್ಯ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಮೊದಲು ಬೊಪಯ್ಯ ಅವರನ್ನು ಬಂಧಿಸಬೇಕು. ಸುಳ್ಳಿಗೆ ಮತ್ತೊಂದು ಹೆಸರೇ ಬಿಜೆಪಿ. ನಾವು ಮಾಡಿದ ಕೆಲಸವನ್ನು ನಮ್ಮ ಕೆಲಸ ಎಂದು ಹೇಳಿಕೊಳ್ಳಬೇಕು. ತಾವು ಮಾಡಿದ ಕೆಲವನ್ನು ಬೇರೆಯವರ ಮೇಲೆ ಹಾಕುವುದು ಹೇಡಿತನ. ಸರಕಾರ ಎಲ್ಲ ವಿಚಾರಗಳಲ್ಲೂ ವಿಫಲವಾಗಿದ್ದು, ಅವರ ವೈಫಲ್ಯ ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ನಾನು ಪಕ್ಷದ ಅಧ್ಯಕ್ಷನಾಗಿ ಮುಖ್ಯಮಂತ್ರಿಗಳಿಗೆ ನಮ್ಮ ನೋವು, ಭಾವನೆಯನ್ನು ತಿಳಿಸುತ್ತಿದ್ದೇನೆ. ಬೇರೆಯವರ ಹೇಳಿಕೆಗೆ ಉತ್ತರ ನೀಡುವುದಿಲ್ಲ’ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ವಿರೋಧವಿದ್ದರೂ ಕೊಡಗಿಗೆ ಹೋಗಿದ್ದೇಕೆ ಎಂಬ ಪ್ರಶ್ನೆಗೆ, ‘ಅದೇನು ವಿರೋಧ ವ್ಯಕ್ತಪಡಿಸುವವರ ಮನೆಯೇ?’ ಎಂದು ಪ್ರಶ್ನಿಸಿದರು.

2010 ರಿಂದ 2018 ರವರೆಗೆ ಇಂಧನ ಇಲಾಖೆಯಲ್ಲಿ ಸಾಕಷ್ಟು ಒಳಒಪ್ಪಂದಗಳು ಆಗಿದ್ದು ತನಿಖೆ ಮಾಡುತ್ತೇವೆ ಎಂಬ ಸರ್ಕಾರದ ಹೇಳಿಕೆ ಬಗ್ಗೆ ಕೇಳಿದಾಗ, ‘ಅವರು ತಡ ಮಾಡದೇ ತನಿಖೆ ಮಾಡಿಸಲಿ. ಕೇವಲ ಬಾಯಿ ಮಾತಿಗೆ ಹೇಳಿ ಸುಮ್ಮನಾಗಬಾರದು. ಸಿಬಿಐ, ಇಡಿ ಅಥವಾ ಅವರೇ ಮಾಡಲಿ. ಆದಷ್ಟು ಬೇಗ ತನಿಖೆ ಮಾಡಿಸಲಿ’ ಎಂದು ತಿಳಿಸಿದರು.

ಭಾರತ್ ಜೋಡೋ ಕಾರ್ಯಕ್ರಮ ಸ್ಥಳ ಪರಿಶೀಲನೆಗೆ ಪ್ರವಾಸ

ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಸುಧಾಕರ್ ಅವರ ಅಹ್ವಾನದ ಮೇರೆಗೆ ಹಾಗೂ ರಾಹುಲ್ ಗಾಂಧಿ ಅವರ ಭಾರತ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಈ ಮಾರ್ಗದ ಹಾಗೂ ವ್ಯವಸ್ಥೆ ಕಲ್ಪಿಸಲು ಪರಿಶೀಲಿಸಲು ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ್ದೇನೆ. ಭಾರತ್ ಜೋಡೋ ಪಾದಯಾತ್ರೆ ರಾಜ್ಯದಲ್ಲಿ ಸುಮಾರು 510 ಕಿ.ಮೀ. ನಡೆಯಲಿದ್ದು, ಗುಂಡ್ಲುಪೇಟೆಯಿಂದ ಮೈಸೂರು, ಶ್ರೀರಂಗಪಟ್ಟಣ, ಮೇಲುಕೋಟೆ, ನಾಗಮಂಗಲ, ತುರುವೇಕೆರೆ, ಹಿರಿಯೂರು, ಚಳ್ಳಕೆರೆ, ಬಳ್ಳಾರಿ ಮೂಲಕ ರಾಯಚೂರು ಮಾರ್ಗವಾಗಿ ತೆಲಂಗಾಣ ತಲುಪುತ್ತಾರೆ. ಒಟ್ಟು 21 ದಿನಗಳ ಕಾಲ ಈ ಯಾತ್ರೆ ನಡೆಯಲಿದೆ. ರಾಜ್ಯದ ಗಡಿ ಪ್ರವೇಶಿಸುವಾಗ ಅರಣ್ಯ ಪ್ರದೇಶವಿದ್ದು, ಈ ಭಾಗದಲ್ಲಿ ಮಾಡುವುದು ಬೇಡ ಎಂದು ಕೇರಳ ಪೊಲೀಸರು ಮನವಿ ಮಾಡಿದ್ದಾರೆ. ಅದೇ ರೀತಿ ರಾಜ್ಯದ ಭಾಗದಲ್ಲಿ ಯಾವುದಾದರೂ ಸಮಸ್ಯೆಗಳಿವೆಯೇ ಎಂದು ಚರ್ಚೆ ಮಾಡುತ್ತೇವೆ ಎಂದರು.

ಇದೆಲ್ಲದರ ಪರಿಶೀಲನೆಗೆ ದೆಹಲಿಯಿಂದ ಒಂದು ತಂಡ ಆಗಮಿಸುತ್ತಿದ್ದು, ಅವರು ಬರುವ ಮುನ್ನ ನಾನು ಕಣ್ಣಾರೆ ಸ್ಥಳ ಪರಿಸ್ಥಿತಿ ಪರಿಶೀಲಿಸುತ್ತಿದ್ದೇನೆ. ಈ ಭಾಗದಲ್ಲಿ ನಾನು ಪಾದಯಾತ್ರೆ ಮಾಡಿದ್ದು, ನಮ್ಮ ನಾಯಕರ ಜತೆ ಚರ್ಚೆ ಮಾಡುತ್ತಿದ್ದೇನೆ. ಇದು ಪಕ್ಷದ ವಿಚಾರ ಅಷ್ಟೇ ಅಲ್ಲ. ದೇಶ ವಿಭಜನೆ ಆಗುತ್ತಿರುವ ಸಮಯದಲ್ಲಿ ದೇಶವನ್ನು ಒಗ್ಗೂಡಿಸುವ ಸಲುವಾಗಿ ಈ ಪಾದಯಾತ್ರೆ ಮಾಡಲಾಗುತ್ತಿದೆ. ನಮ್ಮ ರಾಜ್ಯದ ಒಂದೊಂದು ಜಿಲ್ಲೆಯವರು ಒಂದೊಂದು ದಿನ ಪಾದಯಾತ್ರೆಗೆ ಬಂದು ಹೆಜ್ಜೆ ಹಾಕಲಿದ್ದಾರೆ ಎಂದರು.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.