ಆಮ್ಲಜನಕ ಮತ್ತು ರೆಮ್ ಡಿಸಿವರ್ ಹೆಚ್ಚುವರಿ ಪೂರೈಕೆ : ಪ್ರಧಾನಿ ಭರವಸೆ


Team Udayavani, Apr 23, 2021, 2:24 PM IST

ಹಗ್ದ್ವ

ಬೆಂಗಳೂರು : ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ರಾಜ್ಯ ಸರ್ಕಾರಗಳೂ ಪರಸ್ಪರ ಸಹಕರಿಸುವ ಮೂಲಕ  ಸವಾಲನ್ನು ಸಮರ್ಥವಾಗಿ ಎದುರಿಸುವಂತೆ ಪ್ರಧಾನಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಕ್ರವಾರ ಕರೆ ನೀಡಿದರು.

ಅವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ವಿಷಯ ತಿಳಿಸಿದರು. ಈಗ ಎದುರಾಗಿರುವ ವಿಪತ್ತನ್ನು ಎದುರಿಸಲು  ಆರೋಗ್ಯ ಸೇವಾ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡುವುದು, ಮುನ್ನೆಚ್ಚರಿಕೆಯ ಕ್ರಮಗಳ ಕಟ್ಟುನಿಟ್ಟಿನ ಪಾಲನೆ, ಅನಗತ್ಯ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸುವುದು ಹಾಗೂ ಆಮ್ಲಜನಕದ ಸಮರ್ಪಕ ಹಾಗೂ ಮಿತಬಳಕೆಗೆ ಆದ್ಯತೆ ನೀಡುವುದು ಹಾಗೂ ಜನರಲ್ಲಿ ವಿಶ್ವಾಸ ಮೂಡಿಸುವುದು ಅತಿ ಅಗತ್ಯ ಎಂದು ಪ್ರಧಾನ ಮಂತ್ರಿಯವರು ತಿಳಿಸಿದರು.

ಆಮ್ಲಜನಕದ ದುರ್ಬಳಕೆ ಯಾಗದಂತೆ ಎಲ್ಲ ರಾಜ್ಯಗಳಲ್ಲೂ ಆಕ್ಸಿಜನ್ ಆಡಿಟ್ ಮಾಡಿಸುವಂತೆ ಪ್ರಧಾನ ಮಂತ್ರಿಯವರು ಸಲಹೆ ನೀಡಿದರು. ಜೊತೆಗೆ ಆಮ್ಲಜನಕದ ಟ್ಯಾಂಕರುಗಳ ಸುಗಮ ಸಂಚಾರಕ್ಕೆ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಆಮ್ಲಜನಕ ಮತ್ತು ರೆಮ್ ಡಿಸಿವಿರ್ ಸದ್ಬಳಕೆಯಾಗುವ ನಿಟ್ಟಿನಲ್ಲಿ ಆತಂಕದ ಕೊಳ್ಳುವಿಕೆಯನ್ನು ನಿಯಂತ್ರಿಸುವಂತೆ ಅವರು ಸಲಹೆ ಮಾಡಿದರು. ಹೆಚ್ಚುತ್ತಿರುವ ಪ್ರಕರಗಳಿಂದಾಗ ಮಾನವ ಸಂಪನ್ಮೂಲ ಅಗತ್ಯತೆಯೂ ಹೆಚ್ಚುತ್ತಿದ್ದು, ಇತ್ತೀಚೆಗೆ ನಿವೃತ್ತರಾದ ಸಿಬ್ಬಂದಿಯ ಸೇವೆ ಬಳಕೆ ಮಾಡಿಕೊಳ್ಳಿ ಎಂದು ಪ್ರಧಾನ ಮಂತ್ರಿಯವರು ತಿಳಿಸಿದರು.

ಆಮ್ಲಜನಕ ಪೂರೈಕೆಗೆ ಮನವಿ:

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳುತ್ತಿರುವ ಕ್ರಮಗಳು ಹಾಗೂ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಿದರು.

ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರಾಜ್ಯಕ್ಕೆ ದಿನಕ್ಕೆ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಆಮ್ಲಜನಕದ ಬಳಕೆ ದಿನೇ ದಿನೇ ಹೆಚ್ಚುತ್ತಿದ್ದು, ನಿನ್ನೆ ರಾಜ್ಯದಲ್ಲಿ 500 ಟನ್ ಬಳಕೆಯಾಗಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಹಲವು ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗುವುದು.

ಭಾರತ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯಕ್ಕೆ ಏಪ್ರಿಲ್ 25 ರಿಂದ 1142 ಟನ್ ಆಮ್ಲಜನಕ ಅಗತ್ಯವಿದೆ ಹಾಗೂ ಏಪ್ರಿಲ್ 30ರ ನಂತರ 1471 ಟನ್ ಆಮ್ಲಜನಕದ ಅಗತ್ಯವಿದೆ. ಆಮ್ಲಜನಕ ಕೊರತೆ ನೀಗಿಸಿ, ಕೂಡಲೇ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿಗಳು ಪ್ರಧಾನಿಯವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪಾಸಿಟಿವಿಟಿ ದರ ಶೇ. 16 ರಷ್ಟಿದೆ.  ಬೆಂಗಳೂರು ನಗರ ಅತಿ ಹೆಚ್ಚು ಪೀಡಿತವಾಗಿದ್ದು, ತುಮಕೂರು, ಬಳ್ಳಾರಿ, ಮೈಸೂರು, ಹಾಸನ ಮತ್ತು ಕಲಬುರಗಿ ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ.

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ತಡೆಯಲು ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಜೊತೆಗೆ ಇತರ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ರಾಜ್ಯದ ಆರ್ಥಿಕ ಚಟುವಟಿಕೆಗಳ ಮೇಲೆ ಕನಿಷ್ಠ ಪರಿಣಾಮವಾಗುವ ರೀತಿಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಕಳೆದ ಆರು ತಿಂಗಳಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ವಹಿಸಿದ್ದು, ಇದೀಗ ಅನುಕೂಲವಾಗಿದೆ. ಸರ್ಕಾರದ ಶಿಫಾರಸಿನ ಮೇರೆಗೆ ರೋಗಿಗಳನ್ನು ದಾಖಲಿಸಲು ಖಾಸಗಿ ಆಸ್ಪತ್ರೆಗಳ ಶೇ. 50 ರಷ್ಟು ಹಾಸಿಗೆಗಳನ್ನು ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಬಂದರೆ ಅನುವಾಗುವಂತೆ ಖಾಸಗಿ ಆಸ್ಪತ್ರೆಗಳು ಸಮೀಪದ ಹೋಟೆಲ್ ಗಳ ಸಹಯೋಗದೊಂದಿಗೆ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ. ಐಸಿಯು ಸೌಲಭ್ಯಗಳಿರುವ ಫೀಲ್ಡ್ ಆಸ್ಪತ್ರೆಗಳನ್ನು ಸ್ಥಾಪಿಸಲು ಸಹ ಚಿಂತನೆ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ರೆಮ್ ಡಿಸಿವಿರ್ ಕೊರತೆಯಾಗದಂತೆ ಎಚ್ಚರ ವಹಿಸಲಾಗುತ್ತಿದ್ದು, ಮುಂದಿನ 10 ದಿನಗಳಿಗೆ 2 ಲಕ್ಷ ಡೋಸ್ ಗಳಷ್ಟು ರೆಮ್ ಡಿಸಿವಿರ್ ಒದಗಿಸುವಂತೆ ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಮುಖ್ಯಮಂತ್ರಿಗಳು, ನಗರದ 8 ವಲಯಗಳ ಕೋವಿಡ್ ನಿರ್ವಹಣೆ ಉಸ್ತುವಾರಿಗೆ ಸಚಿವರನ್ನು ನೇಮಕ ಮಾಡಲಾಗಿದೆ. ಹಿರಿಯ ಐಎಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಲಸಿಕೆ ಕಾರ್ಯಕ್ರಮದ ಪ್ರಗತಿಯೂ ಉತ್ತಮವಾಗಿದ್ದು, ಈ ವರೆಗೆ 82 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಮೇ 1 ರಿಂದ ಹೊಸ ಲಸಿಕಾ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೂ ಲಸಿಕೆಗಳು ಸಮಾನವಾಗಿ ಹಂಚಿಕೆಯಾಗುವಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಟಾಪ್ ನ್ಯೂಸ್

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.