ಚಿಕ್ಕಮಗಳೂರಿನಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ : ಡಿಸಿಎಂ ಸವದಿ

Team Udayavani, May 16, 2021, 1:35 PM IST

ಬದ್ಗದಸ್ದ

ಚಿಕ್ಕಮಗಳೂರು : ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ. ಎಸ್. ಆರ್. ಟಿ.ಸಿ.ಯ ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಾಳೆಯಿಂದ ( ಸೋಮವಾರ) ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರು ತಿಳಿಸಿದ್ದಾರೆ.

ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗುತ್ತಿದೆ. ಅಷ್ಟೇ ಅಲ್ಲ, ಆಸ್ಪತ್ರೆಯಲ್ಲಿ ಸ್ಥಳಾಭಾವದಿಂದ ರೋಗಿಗಳಿಗೆ ಅಲ್ಲಿ ಕುಳಿತು ಕಾಯುವುದಕ್ಕೂ ಕಷ್ಟವಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಉಚಿತವಾಗಿ ಬಸ್ಸಿನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ನೂತನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಸವದಿಯವರು ವಿವರಿಸಿದ್ದಾರೆ.

ಆಕ್ಸಿಜನ್ ಪೂರೈಸಲು ಅನುಕೂಲವಾಗುವಂತೆ ವಿಶೇಷವಾಗಿ ವಿನ್ಯಾಸಗೊಳಿಸಿರುವ ಈ ಕೆ.ಎಸ್. ಆರ್. ಟಿ. ಸಿ. ಬಸ್ಸನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಲಾಗುವುದು. ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಕ್ಸಿಜನ್ ಸಿಗದಿದ್ದರೆ ಆತಂಕ ಪಡದೇ ಈ ಆಕ್ಸಿಜನ್ ಮೊಬೈಲ್ ಬಸ್ಸಿನಲ್ಲಿಯೇ ತುರ್ತಾಗಿ ವಿಶ್ರಮಿಸಿ ಅಗತ್ಯ ಆಕ್ಸಿಜನ್ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಇದರಲ್ಲಿ ಅಳವಡಿಸಲಾಗಿದೆ.
ಕೆ. ಎಸ್. ಆರ್. ಟಿ. ಸಿ. ಯ ಈ ನೂತನ ಸೇವೆಯನ್ನು ಖಾಸಗಿ ಸಂಸ್ಥೆಗಳಾದ ನಾಯೋನಿಕ ಐ ಕೇರ್ ಟ್ರಸ್ಟ್, ಸಿಟ್ರಿಕ್ ಇಂಡಿಯಾ ಮತ್ತು ಜಿಲ್ಲಾ ಆಡಳಿತಗಳ ಸಹಯೋಗದಿಂದ ಪ್ರಾರಂಭಿಸಲಾಗುತ್ತಿದೆ.

ಏಕಕಾಲಕ್ಕೆ ಒಟ್ಟು 8 ಮಂದಿ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸವದಿಯವರು ಸ್ಪಷ್ಟಪಡಿಸಿದ್ದಾರೆ. ಚಾಲಕರು ಮತ್ತು ಸಿಬ್ಬಂದಿಗಳಿಗೆ ಸೋಂಕು ಹರಡದಂತೆ ವಿಶೇಷ ವಿನ್ಯಾಸದೊಂದಿಗೆ ಈ ‘ಆಕ್ಸಿಜನ್ ಆನ್ ವ್ಹೀಲ್ಸ್’ ಬಸ್ಸನ್ನು ಸಜ್ಜುಗೊಳಿಸಲಾಗಿದೆಯಲ್ಲದೇ, ಸ್ಯಾನಿಟೈಸರ್, ಮಾಸ್ಕ್ ಗಳನ್ನು ಇದರಲ್ಲಿ ಒದಗಿಸಲಾಗುವುದು. ಪ್ರತಿ ರೋಗಿಗಳೂ ಸಾಮಾನ್ಯವಾಗಿ 2ರಿಂದ 4 ಗಂಟೆಯ ಅವಧಿಯಲ್ಲಿ ಈ ಸೌಲಭ್ಯ ದಿಂದ ತಮಗೆ ಬೇಕಾದ ಅಗತ್ಯ ಪ್ರಮಾಣದ ಆಕ್ಸಿಜನ್ ಪಡೆದುಕೊಳ್ಳಬಹುದಾಗಿದೆ.

ಈ ರೀತಿಯ ವಿಶೇಷ ‘ಆಕ್ಸಿಜನ್ ಬಸ್ ಸೇವೆಯನ್ನು ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸಲು ಸಾರಿಗೆ ನಿಗಮಗಳು ಸಿದ್ಧವಿದೆ ಎಂದು ಶ್ರೀ ಸವದಿಯವರು ತಿಳಿಸಿದ್ದಾರೆ. ಕೋವಿಡ್ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತ ಆಕ್ಸಿಜನ್ ಗಾಗಿ ಜನರು ಪರಿತಪಿಸುವುದನ್ನು ತಪ್ಪಿಸಲು ಈ ಆಕ್ಸಿಜನ್ ಬಸ್ ಸೇವೆಯು ಸಂಜೀವಿನಿಯಂತೆ ವರದಾನವಾಗಲಿದೆ ಎಂದು ಶ್ರೀ ಸವದಿಯವರು ಆಶಾವಾದ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.