ಬೆಳಗಾವಿ : ಆಕ್ಸಿಜನ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತ
Team Udayavani, May 7, 2021, 10:18 AM IST
ಬೆಳಗಾವಿ : ಬಳ್ಳಾರಿಯಿಂದ ಮೆಡಿಕಲ್ ಆಕ್ಸಿಜನ್ ಹೊತ್ತು ಬೆಳಗಾವಿ ಆಸ್ಪತ್ರೆಯತ್ತ ಸಾಗುತ್ತಿದ್ದ ಟ್ಯಾಂಕರ್ ಅಪಘಾತಕ್ಕೀಡಾಗಿದೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪದ ಮುತ್ನಾಳ ಗ್ರಾಮದ ಬಳಿಯ ಪೂನಾ-ಬೆಂಗಳೂರು ರಾ.ಹೆ-4ರಲ್ಲಿ ಈ ಘಟನೆ ನಡೆದಿದೆ. ಮುಂದೆ ಹೋಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಲಾರಿಗೆ ಈ ಟ್ಯಾಂಕರ್ ಅಪ್ಪಳಿಸಿದೆ.
ಡಿಕ್ಕಿ ರಭಸಕ್ಕೆ ಆಕ್ಸಿಜನ್ ಟ್ಯಾಂಕರ್ ಟೈರ್ ಬ್ಲಾಸ್ಟ್ ಆಗಿದ್ದು, ಎಕ್ಸಲ್ ತುಂಡಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಸಂಬಂಧಿತ ಅಧಿಕಾರಿಗಳು ಭೇಟಿ ನೀಡಿದ್ದು, ಬೆಳಗಾವಿಗೆ ಆಕ್ಸಿಜನ್ ಸ್ಥಳಾಂತರಿಸುವ ಕಾರ್ಯ ನಡೆದಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.