ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಪದ್ಮರಾಜ ದಂಡಾವತಿ ನೇಮಕ
Team Udayavani, May 31, 2019, 3:01 AM IST
ಬೆಂಗಳೂರು: ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣ ದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷಗಳ ಅವಧಿಗೆ, ಮುಂದಿನ ಆದೇಶ ದವರೆಗೆ ತಮ್ಮನ್ನು ಮಾಧ್ಯಮ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.