ಮಾನಸಿಕ ಖಿನ್ನತೆ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಆತ್ಮಹತ್ಯೆ
Team Udayavani, May 16, 2022, 7:19 PM IST
ಬೆಂಗಳೂರು: ಜಾಮೀನು ನೀಡಲು ಕುಟುಂಬ ಸದಸ್ಯರು ಬರಲಿಲ್ಲ ಎಂದು ಮಾನಸಿಕ ಖಿನ್ನತೆಗೊಳಗಾದ ಕೈದಿಯೊಬ್ಬ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ.
ಆಜಾದ್ ನಗರದ ಮನೋಜ್ ಅಲಿಯಾಸ್ ಹೂವು(36) ಆತ್ಮಹತ್ಯೆ ಮಾಡಿಕೊಂಡ ಕೈದಿ. ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ 8ನೇ ಬ್ಯಾರಕ್‌ನ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಮನೋಜ್ ಪದೇ ಪದೇ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ. ರಂಜಾನ್ ಸಮಯದಲ್ಲಿ ಕೆಲವು ಹುಡುಗರನ್ನು ಗುಂಪು ಸೇರಿಸಿಕೊಂಡು ಚಾಮರಾಜ ಪೇಟೆ ಠಾಣೆ ವ್ಯಾಪ್ತಿಯಲ್ಲಿ ಗಲಾಟೆ ಮಾಡುತ್ತಿದ್ದ. ಅಲ್ಲದೇ, ಬೈಕ್ ಕಳವು ಪ್ರಕರಣವೊಂದರಲ್ಲಿ ಚಾಮರಾಜ ಪೇಟೆ ಪೊಲೀಸರು ಮನೋಜ್‌ನನ್ನು ಮೇ 1ರಂದು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಸೋಮವಾರ ಬೆಳಗ್ಗೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದರು.
ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ ಬಳಿಕ ಮನೋಜ್ ಖಿನ್ನತೆಗೊಳಗಾಗಿದ್ದ. ತನ್ನ ಪೋಷಕರು ಅಥವಾ ಕುಟುಂಬಸ್ಥರ ಜಾಮೀನು ನೀಡಿ ಜೈಲಿನಿಂದ ಕರೆದುಕೊಂಡು ಹೋಗುತ್ತಾರೆ ಎಂದು ತಿಳಿದುಕೊಂಡಿದ್ದೆ. ಆದರೆ, ಯಾರೊಬ್ಬರು ಜಾಮೀನು ನೀಡಲು ಮುಂದಾಗಿಲ್ಲ ಎಂದು ಸಹ ಕೈದಿಗಳ ಬಳಿ ಹೇಳಿಕೊಳ್ಳುತ್ತಿದ್ದ. ಜತೆಗೆ ಶನಿವಾರ ಕೂಡ ಕೋರ್ಟ್ ಆವರಣದಲ್ಲಿ ಪೊಲೀಸರು ತನಗೆ ವಂಚಿಸಿದ್ದರು ಎಂದು ಕೂಗಾಡಿದ್ದ ಎಂದು ಹೇಳಲಾಗಿದೆ. ಸೋಮವಾರ ಬೆಳಗ್ಗೆ 8ನೇ ಬ್ಯಾರಕ್‌ನ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಡುಪಿ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಿನಲ್ಲಿ ವಂಚನೆ: ದೂರು ದಾಖಲು
ಮೂರು ದಿನವಾದರೂ ಪತ್ತೆಯಾಗಿಲ್ಲ ಕೊಚ್ಚಿಹೋದ ಚಿಕ್ಕಮಗಳೂರಿನ ಬಾಲಕಿ ಸುಪ್ರೀತ
ವೃದ್ಧೆ ಕೈಕಾಲು ಕಟ್ಟಿ 10 ಲಕ್ಷ ನಗದು, 100 ಗ್ರಾಂ ಚಿನ್ನ ದೋಚಿದವರ ಸೆರೆ
ಕಡಲ್ಕೊರೆತದ ಕುರಿತು ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಿಎಂ ಬೊಮ್ಮಾಯಿ