ಜನ ಈಗ ಸಚಿವ ತಂಗಡಗಿಗೇ ಹೊಡೆಯಿರಿ ಎನ್ನುತ್ತಿದ್ದಾರೆ: ಅಶೋಕ್‌

ಸಚಿವ ತಂಗಡಗಿ ವಿರುದ್ಧ ಪ್ರತಿಪಕ್ಷ ನಾಯಕನ ವಾಗ್ಧಾಳಿ

Team Udayavani, Mar 27, 2024, 11:00 PM IST

ಜನ ಈಗ ಸಚಿವ ತಂಗಡಗಿಗೇ ಹೊಡೆಯಿರಿ ಎನ್ನುತ್ತಿದ್ದಾರೆ: ಅಶೋಕ್‌

ಬೆಂಗಳೂರು: ಸಚಿವ ಶಿವರಾಜ್‌ ತಂಗಡಗಿ ಬಿಜೆಪಿಯಲ್ಲಿದ್ದಾಗ ಸಕ್ಕರೆ ತಿಂದುಕೊಂಡಿರಲಿ ಎಂದು ಅದೇ ಖಾತೆ ಕೊಟ್ಟಿದ್ದೆವು. ಆಗ ಸೋನಿಯಾಗೆ ಹೊಡೆಯಿರಿ ಎನ್ನುತ್ತಿದ್ದರು. ಈಗ ಕಾಂಗ್ರೆಸ್‌ ಸೇರಿ ಮೋದಿಗೆ ಹೊಡೆಯಿರಿ ಎನ್ನುತ್ತಾರೆ. ಆದರೆ, ಜನ ತಂಗಡಗಿಗೆ ಹೊಡೆಯಿರಿ ಎನ್ನುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಆರೋಪಿಸಿದರು.

ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಂಗಡಗಿ ಅವರ ಗುರು ಡಿ.ಕೆ. ಶಿವಕುಮಾರ್‌ ಅವರು ಹಳ್ಳಿ ಭಾಷೆಯಲ್ಲಿ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಾತ್ರವಲ್ಲದೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೂ ಸಿಎಂ ಸಿದ್ದರಾಮಯ್ಯ ಏಕವಚನ ಬಳಸುತ್ತಾರೆ. ಸಂಸ್ಕೃತಿ ಇಲ್ಲದವರು ಸಂಸ್ಕೃತಿ ಸಚಿವರಾಗಿದ್ದಾರೆ. ರಾಜ್ಯದ ಜನರಿಗೆ ನೀರು ಕೊಡಲಾಗದವರು ನೀರಾವರಿ ಸಚಿವರಾಗಿದ್ದಾರೆ. ಒಟ್ಟಾರೆ ಸಂಸ್ಕಾರ, ಸಂಸ್ಕೃತಿ ಇಲ್ಲದ ಕಾಂಗ್ರೆಸ್‌, ನಾವು ಉಚಿತ ಯೋಜನೆಗಳನ್ನು ಕೊಡುತ್ತಿದ್ದೇವೆ ಎಂದು ಎಷ್ಟೇ ಹೇಳಿಕೊಂಡರೂ ಸೋಲು ಮಾತ್ರ ನಿಶ್ಚಿತ ಎಂದು ವಿಶ್ಲೇಷಿಸಿದರು.

ಸುಮಾರು 50 ವರ್ಷಗಳ ಕಾಲ ದೇಶ ಆಳಿದ ಕಾಂಗ್ರೆಸ್‌ ಸರ್ಕಾರಗಳು ಎಷ್ಟು ಉದ್ಯೋಗ ಸೃಷ್ಟಿಸಿದ್ದವು. ಅಧಿಕಾರಕ್ಕೆ ಬಂದ ಕೂಡಲೇ ಪಂಚಗ್ಯಾರಂಟಿ ಎಂದಿದ್ದವರು ಹೇಗೆ ಅನುಷ್ಠಾನ ಮಾಡುತ್ತಿದ್ದೀರಿ ಎಂಬುದನ್ನು ಎಲ್ಲರೂ ಗಮನಿಸುತ್ತಿದ್ದೇವೆ. ಈ ಸರ್ಕಾರದ ಮೊದಲ ಸಂಪುಟಯೂ ಆಯಿತು, ಕೊನೆಯ ಸಂಪುಟ ಸಭೆಯೂ ಮುಗಿಯಿತು. ಯುವನಿಧಿ ಎಷ್ಟು ಜನರಿಗೆ ತಲುಪಿದೆ ಎಂದು ಪ್ರಶ್ನಿಸಿದರು.

ಕಮಲ ಕೆಸರಲ್ಲಿರಬೇಕು, ಹೊರೆ ಗದ್ದೆಯಲ್ಲಿರಬೇಕು ಎಂದಿರುವ ಡಿಸಿಎಂ ಶಿವಕುಮಾರ್‌ ಅವರಿಗೆ ಸಾಮಾನ್ಯ ಜ್ಞಾನವೇ ಇಲ್ಲ. ಕೆಸರಲ್ಲಿ ಅರಳಿದ ಕಮಲ ಸೇರುವುದು ದೇವರ ಮುಡಿಯನ್ನೇ. ಗದ್ದೆಯಲ್ಲಿ ಬೆಳೆದ ಹೊರೆ ಕಣದಿಂದ ಮನೆ ಬರುವಾಗ ಧಾನ್ಯಲಕ್ಷ್ಮೀಯಾಗಿ ಬರುತ್ತದೆ. ಭ್ರಷ್ಟಾಚಾರದ ಕೈ ಮಾತ್ರ ವಿಧಾನಸೌಧದ ಮೂರನೇ ಮಹಡಿಯಲ್ಲಿ ಆಡಳಿತ ನಡೆಸಬೇಕೇ? ಈ ಬಾರಿಯ ಚುನಾವಣೆಯಲ್ಲಿ ಜನ ಒಂದು ಬೆರಳು ತೋರಿಸಿ ಮತ ಒತ್ತುವ ಮೂಲಕ ಇಡೀ ಕೈ ನುಂಗಿ ಹಾಕಲಿದ್ದಾರೆ ಎಂದು ಎಚ್ಚರಿಸಿದರು.

ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಶಾಸಕ ರವಿ ಸುಬ್ರಹ್ಮಣ್ಯ, ಮೇಲ್ಮನೆ ಸದಸ್ಯ ಛಲವಾದಿ ನಾರಾಯಣಸ್ವಾಮಿ, ವಕ್ತಾರರಾದ ಎಚ್‌.ಎನ್‌. ಚಂದ್ರಶೇಖರ್‌, ಸುರಭಿ ಹೊದಿಗೆರೆ ಇದ್ದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.