ಶೇ. 62ರಷ್ಟು ಮಂದಿಗೆ ಲಸಿಕೆ ವಿತರಣೆ: ಡಾ| ಸುಧಾಕರ್
Team Udayavani, Jan 17, 2021, 1:22 AM IST
ಬೆಂಗಳೂರು: ರಾಜ್ಯದಲ್ಲಿ ಮೊದಲ ದಿನ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ. 62ರಷ್ಟು ಮಂದಿ ಪಡೆದಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ತಿಳಿಸಿದರು.
ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್ ಅವರೊಂದಿಗೆ ವೀಡಿಯೋ ಸಂವಾದ ನಡೆದ ಬಳಿಕ ಮಾತನಾಡಿದ ಅವರು, ಶೇ.62 ರಷ್ಟು ಮಂದಿ ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಮೊದಲ ದಿನ 21,658 ಮಂದಿಗೆ ಲಸಿಕೆ ನೀಡಬೇಕೆಂದು ನಿಗದಿಯಾಗಿದ್ದು, 13,408 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಯಾರಲ್ಲೂ ಗಂಭೀರ ಸಮಸ್ಯೆ ಅಥವಾ ಅಡ್ಡ ಪರಿಣಾಮ ಕಂಡುಬಂದಿಲ್ಲ ಎಂದರು.
ಸೋಮವಾರದಿಂದ ಮತ್ತೆ ಹೆಚ್ಚು ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ರವಿವಾರ ಹೆಚ್ಚಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ. ನಾನು ವಿವಿಧೆಡೆ ಸಂಚರಿಸಿ ಲಸಿಕೆ ಪಡೆಯುವಂತೆ ಉತ್ತೇಜಿಸಲಿದ್ದೇನೆ.
ರಾಜ್ಯದಲ್ಲಿ 7.43 ಲಕ್ಷ ಮಂದಿಯನ್ನು ಗುರುತಿಸಲಾಗಿದ್ದು, 8 ಲಕ್ಷ ಲಸಿಕೆ ಬಂದಿದೆ. ಇನ್ನೂ 8 ಲಕ್ಷ ಲಸಿಕೆ ಕಳುಹಿಸಿಕೊಡಬೇಕೆಂದು ಕೇಂದ್ರ ಸರಕಾರಕ್ಕೆ ಕೋರಲಾಗಿದೆ. ಪೌರಕಾರ್ಮಿಕರೊಬ್ಬರಿಗೆ ಮೊದಲ ಲಸಿಕೆ ನೀಡುವ ಪ್ರಧಾನಿಯವರ ಪರಿಕಲ್ಪನೆ ವಿಪಕ್ಷಗಳಿಗೆ ಅರ್ಥವಾಗಿಲ್ಲ. ಆದರೆ ಸಾಮಾನ್ಯ ಜನರಿಗೆ ಅರ್ಥವಾಗಿದೆ ಎಂದರು.
ಬೆರಳೆಣಿಕೆ ಮಂದಿಗೆ ಅಡ್ಡ ಪರಿಣಾಮ :
ರಾಜ್ಯದಲ್ಲಿ ಲಸಿಕೆ ಪಡೆದವರ ಪೈಕಿ ಬೆರಳಿಕೆಯಷ್ಟು ಮಂದಿಗೆ ಮಾತ್ರ ಲಸಿಕೆ ಪಡೆದ ಸ್ಥಳದಲ್ಲಿ ಕೆಂಪಾಗಿ, ನೋವು ಹೆಚ್ಚು ಕಾಣಿಸುಕೊಂಡಿದೆ. ಸಂಜೆ ವೇಳೆಗೆ ಸರಿಹೋಗಿದ್ದು, ಇವುಗಳನ್ನು ಹೊರತು ಪಡಿಸಿ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು
ರಾಜ್ಯದಲ್ಲಿ ಕೋವಿಡ್ ಕಾಟಕ್ಕೆ ಒಂದು ವರ್ಷ :ಮಾ. 8ರಂದು ಮೊದಲ ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
ಬೆಳ್ಳೂಟಿ ಗೇಟ್ ಬಳಿ ನೀಲಗಿರಿ ತೋಪಿನಲ್ಲಿ ಬೆಂಕಿ ಅವಘಡ : ಬೆಂಕಿ ನಂದಿಸಲು ಹರಸಾಹಸ
ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು