ಸುಗ್ರೀವಾಜ್ಞೆ ಪ್ರಶ್ನಿಸಿ ಅರ್ಜಿ: ರಾಜ್ಯ ಸರ್ಕಾರಕ್ಕೆ ಕೋರ್ಟ್ ನೋಟಿಸ್
Team Udayavani, May 13, 2020, 7:14 AM IST
ಬೆಂಗಳೂರು: ಕೋವಿಡ್-19 ತಡೆ ಹಾಗೂ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿರುವ ವೈದ್ಯರು ಮತ್ತು ಇತರೆ ಮುಂಚೂಣಿ ಸಿಬ್ಬಂದಿ ಮೇಲೆ ಹಲ್ಲೆ ನಡೆಯುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಯು ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಗೆ ತದ್ವಿರುದ ಮತ್ತು ದುರ್ಬಲವಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ವಕೀಲ ಜಿ.ಆರ್. ಮೋಹನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾ. ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ಈ ಆದೇಶ ಮಾಡಿತು. ಅಲ್ಲದೆ, ಕೇಂದ್ರ ಸರ್ಕಾರವನ್ನು ಪ್ರತಿವಾದಿಯನ್ನಾಗಿ ಸೇರಿಸುವಂತೆ ಅರ್ಜಿದಾರರಿಗೆ ಸೂಚಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಮೇ 22ರೊಳಗೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ ವಿಚಾರಣೆ ಮೇ 26ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!