ಪೈಲ್ವಾನ್ ಸಿನಿಮಾ ಪೈರಸಿ: ಸೈಬರ್ ಕ್ರೈಂ ಠಾಣೆಗೆ ದೂರು
Team Udayavani, Sep 17, 2019, 3:05 AM IST
ಬೆಂಗಳೂರು: ನಟ ಕಿಚ್ಚ ಸುದೀಪ್ ನಟನೆಯ ಪಂಚಭಾಷೆಗಳಲ್ಲಿ ತೆರೆಕಂಡಿದ್ದ “ಪೈಲ್ವಾನ್’ ಚಲನಚಿತ್ರವನ್ನು ಪೈರಸಿ ಮಾಡಿರುವ ಕಿಡಿಗೇಡಿಗಳು ಸಂಪೂರ್ಣ ಸಿನಿಮಾವನ್ನು ಸಾಮಾಜಿಕ ಜಾಲತಾಣ ಫೇಸ್ಬುಕ್ ಹಾಗೂ ಯುಟ್ಯೂಬ್ಗ ಹಾಕಿದ್ದಾರೆಂದು ಆರೋಪಿಸಿ ನಿರ್ಮಾಪಕಿ ಸ್ವಪ್ನ ಕೃಷ್ಣ ಸೋಮವಾರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಳೆದ ಗುರುವಾರ ಪೈಲ್ವಾನ್ ಸಿನಿಮಾ ಐದು ಭಾಷೆಗಳಲ್ಲಿ ತೆರೆ ಕಂಡಿದ್ದು, ರಾಜ್ಯ ಹಾಗೂ ನೆರೆ ರಾಜ್ಯಗಳ ಸಾವಿರಾರು ಚಿತ್ರ ಮಂದಿರದಲ್ಲಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ತೆರೆಕಂಡ ಒಂದೆ ರಡು ದಿನಗಳಲ್ಲೇ ಕಿಡಿಗೇಡಿಗಳು ಚಿತ್ರವನ್ನು ಪೈರಸಿ ಮಾಡಿ ಸಾಮಾ ಜಿಕ ಜಾಲತಾಣಗಳಾದ ಫೇಸ್ಬುಕ್, ಯೂಟ್ಯೂಬ್ನಲ್ಲಿ ಹಾಕಿದ್ದು, ಅದರಿಂದ ಕೋಟ್ಯಂತರ ರೂ. ನಷ್ಟವಾಗಿದೆ ಎಂದು ಸ್ವಪ ಕೃಷ್ಣ ದೂರಿನಲ್ಲಿ ವಿವರಿಸಿದ್ದಾರೆ ಎಂದು ಸೈಬರ್ಕ್ರೈಂ ಪೊಲೀಸರು ಹೇಳಿದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ನಿರ್ಮಾಪಕಿ ಸ್ವಪ್ನಕೃಷ್ಣ, “ಕನ್ನಡ ಚಿತ್ರರಂಗಕ್ಕೆ ಪೈರಸಿ ಒಂದು ಮಾರಕ. ಕಿಡಿಗೇಡಿಗಳು ಚಿತ್ರವನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅದರ ಸಾವಿರಾರು ಲಿಂಕ್ಗಳನ್ನು ಹರಿಬಿಟ್ಟಿದ್ದಾರೆ. ಸದ್ಯ 500 ಲಿಂಕ್ಗಳನ್ನು ಪೊಲೀಸರಿಗೆ ನೀಡಿ, ದೂರು ದಾಖಲಿಸಿದ್ದೇವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ಭರವಸೆ ನೀಡಿದ್ದಾರೆ. ಈ ಕೃತ್ಯದ ಬಗ್ಗೆ ಯಾವುದೇ ನಿರ್ದಿಷ್ಟ ವ್ಯಕ್ತಿಗಳ ಮೇಲೆ ಅನುಮಾನ ಇಲ್ಲ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ