ದಿ ಎಲಿಫೆಂಟ್ ವಿಸ್ಪರರ್ಸ್’ನ ಬೊಮ್ಮನ್ ಮತ್ತು ಬೆಳ್ಳಿ ಭೇಟಿಯಾದ PM Modi
ವಿಡಿಯೋ ಮತ್ತು ಫೋಟೋಗಳು ವೈರಲ್
Team Udayavani, Apr 9, 2023, 3:16 PM IST
ಚಾಮರಾಜನಗರ: ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭಾನುವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ “ದಿ ಎಲಿಫೆಂಟ್ ವಿಸ್ಪರರ್ಸ್’ನ ಪ್ರಮುಖ ಪಾತ್ರಧಾರಿ ಗಳಾದ ಕಾವಾಡಿ ದಂಪತಿ ಬೊಮ್ಮನ್ ಮತ್ತು ಬೆಳ್ಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮೈಸೂರಿನಲ್ಲಿ ಭಾನುವಾರ ನಡೆದ ‘ಪ್ರಾಜೆಕ್ಟ್ ಟೈಗರ್’ 50 ವರ್ಷಗಳನ್ನು ಪೂರೈಸಿದ ಸಮಾರಂಭದಲ್ಲಿ, ಆಸ್ಕರ್ ಪ್ರಶಸ್ತಿಯನ್ನು ಗೆದ್ದ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರವು ಪ್ರಕೃತಿ ಮತ್ತು ಜೀವಿಗಳ ನಡುವಿನ ಅದ್ಭುತ ಸಂಬಂಧದ ನಮ್ಮ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ಬುಡಕಟ್ಟು ಸಮಾಜದ ಜೀವನ ಮತ್ತು ಸಂಪ್ರದಾಯದಿಂದ ಏನನ್ನಾದರೂ ತೆಗೆದುಕೊಳ್ಳುವಂತೆ ನಾನು ನಿಮ್ಮನ್ನು (ವಿದೇಶಿ ಗಣ್ಯರು) ಒತ್ತಾಯಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಪ್ರಧಾನಿ ಮೋದಿ ಅವರು ಮರಿ ಆನೆಗಳಿಗೆ ಕಬ್ಬನ್ನು ತಿನ್ನಿಸಿದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗುತ್ತಿವೆ. ಅದ್ಭುತವಾದ ಬೊಮ್ಮನ್ ಮತ್ತು ಬೆಳ್ಳಿಯವರನ್ನು ಭೇಟಿಯಾಗಿ ಬಹಳಷ್ಟು ಸಂತೋಷವಾಗಿದೆ ಎಂದರು. ಪ್ರಧಾನಿ ಹುಲಿ ಸಂರಕ್ಷಿತ ಪ್ರದೇಶಗಳ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿದರು.
ಎಲಿಫೆಂಟ್ ವಿಸ್ಪರರ್ಸ್ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರಕ್ಕಾಗಿ ಆಸ್ಕರ್ ಪ್ರಶಸ್ತಿಯನ್ನು ಪಡೆದ ಮೊದಲ ಭಾರತೀಯ ನಿರ್ಮಾಣವಾಗಿದೆ. ಸಾಕ್ಷ್ಯಚಿತ್ರವು ದಂಪತಿಗಳು ಮತ್ತು ಅನಾಥ ಮರಿ ಆನೆಗಳಾದ ರಘು ಮತ್ತು ಅಮ್ಮು ಜೊತೆಗಿನ ಅವರ ಬಂಧದ ಕುರಿತಾಗಿದೆ. ಸಾಕ್ಷ್ಯಚಿತ್ರವು ಈಗ ನೆಟ್ಫ್ಲಿಕ್ಸ್ನಲ್ಲಿ ಪ್ರಸಾರವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು