ವಿಷ ಪ್ರಸಾದ ದುರ್ಘಟನೆ:ಮತ್ತೊಂದು ಬಲಿ;ಸಾವಿನ ಸಂಖ್ಯೆ 16ಕ್ಕೆ!
Team Udayavani, Dec 21, 2018, 11:14 AM IST
ಮೈಸೂರು: ಚಾಮರಾಜನಗರ ಜಿಲ್ಲೆಯ ಸುಳುವಾಡಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವನೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಶುಕ್ರವಾರ 16ಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹನೂರಿನ ಮಾರ್ಟಳ್ಳಿ ನಿವಾಸಿ ನಾಗೇಶ್(45) ಕೊನೆಯುಸಿರೆಳೆದಿದ್ದಾರೆ.
ಮೇಕೆ ಮೇಯಿಸಲು ಹೋಗುತ್ತಿದ್ದ ವೇಳೆ ಮಾರಮ್ಮ ದೇವಾಲಯದಲ್ಲಿ ಪ್ರಸಾದ ನೀಡುತ್ತಿದ್ದಾರೆ ಎಂದು ತೆರಳಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದರು. ಚಿಂತಾಜನಕ ಸ್ಥಿತಿಯಲ್ಲೇ ಇದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಮಕ್ಕಳು ಸೇರಿದಂತೆ 31 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 44 ಮಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಮಾರಮ್ಮ ದೇವಾಲಯದ ಗೋಪುರ ನಿರ್ಮಾಣ ಸಂಬಂಧ ಮತ್ತು ಟ್ರಸ್ಟಿಗಳ ನಡುವಿನ ಹಣಕಾಸು ವ್ಯವಹಾರದ ಮೈಮನಸ್ಸಿನಿಂದಾಗಿ ಕಳೆದ ಶುಕ್ರವಾರ (ಡಿ.14)ರಂದು ಪ್ರಸಾದಕ್ಕೆ ವಿಷ ಬೆರೆಸಲಾಗಿತ್ತು.
ಪ್ರಸಾದಕ್ಕೆ ವಿಷ ಬೆರೆಸಿದ ಪ್ರಮುಖ ಆರೋಪಿಗಳಾದ ಇಮ್ಮಡ ಮಹದೇವ ಸ್ವಾಮಿ, ಮಾದೇಶ,ದೊಡ್ಡಯ್ಯ ಮತ್ತು ಅಂಬಿಕಾ ಎನ್ನುವ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ತೀವ್ರಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?