ಬಿಜೆಪಿ ಸರ್ಕಾರದಿಂದ ದ್ವೇಷದ ರಾಜಕೀಯ: ಡಿಕೆಶಿ ಆರೋಪ


Team Udayavani, Apr 23, 2022, 7:45 AM IST

ಬಿಜೆಪಿ ಸರ್ಕಾರದಿಂದ ದ್ವೇಷದ ರಾಜಕೀಯ: ಡಿಕೆಶಿ ಆರೋಪ

ಬೆಂಗಳೂರು:ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದು, ರೈತರು ಹಾಗೂ ನೀರಿಗಾಗಿ ಹೋರಾಟ ಮಾಡಿದರೂ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿಯೊಂದು ಪ್ರಕರಣದಲ್ಲೂ ನಮ್ಮ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ. ಮೇಕೆದಾಟು ಪಾದಯಾತ್ರೆ ಸಂಬಂದ ರಾಮನಗರ, ಕನಕಪುರ, ಬೆಂಗಳೂರಲ್ಲಿ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಮಗೆ ತೊಂದರೆ ನೀಡಿ, ಕೋರ್ಟ್‌ ಗೆ ಅಲೆಸಬೇಕು ಎಂದು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.

ನಾವು ದೇಶದ ರೈತರ ಪರವಾಗಿ ಹೋರಾಟ ಮಾಡಿದ ವಿಚಾರವಾಗಿ ನಮ್ಮ ಮೇಲೆ ದೂರು ದಾಖಲಾಗಿದ್ದು, ಜನ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಾರೆಂಟ್‌ ಆಗಿತ್ತು. ಕಾನೂನು ಗೌರವಿಸಿ ಜಾಮೀನು ಪಡೆದು ಬಂದಿದ್ದೇವೆ ಎಂದು ಹೇಳಿದರು.

ಫ್ರೀಡಂ ಪಾರ್ಕ್‌ ನಲ್ಲಿ 10 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಮಾಡಿದ್ದು, ವಿಪತ್ತು ನಿರ್ವಹಣೆ ಕಾಯ್ದೆ ಅಡಿಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೊದಲ ಆರೋಪಿ ನಾನಾಗಿದ್ದು, ಉಳಿದಂತೆ ಸಲೀಂ ಅಹ್ಮದ್‌, ಈಶ್ವರ್‌ ಖಂಡ್ರೆ, ಮಂಜುನಾಥ್‌, ಶಫಿವುಲ್ಲಾ ಹಾಗೂ ಬಸನಗೌಡ ಬಾದರ್ಲಿ ಅವರ ಹೆಸರನ್ನು ಸೇರಿಸಲಾಗಿತ್ತು.

ಪ್ರತಿಭಟನೆಯಲ್ಲಿ 10 ಸಾವಿರ ಜನ ಸೇರಿದ್ದರೂ ಕೇವಲ ನಮ್ಮ ಮೇಲೆ ಉದ್ದೇಶ ಪೂರ್ವಕವಾಗಿ ಪ್ರಕರಣ ದಾಖಲಿಸಿದ್ದಾರೆ ಎಂದು ದೂರಿದರು.

ಈಶ್ವರಪ್ಪ ಹಾಗೂ ರಾಘವೇಂದ್ರ ಅವರು ಸೆಕ್ಷನ್‌ 144 ಉಲ್ಲಂಘನೆ ಮಾಡಿದ್ದರಲ್ಲ, ಅಲ್ಲಿ ನ್ಯಾಯಾಲಯ, ಕಾನೂನು ಇರಲಿಲ್ಲವೇ? ಅಲ್ಲಿ ಕಾನೂನು ಉಲ್ಲಂಘನೆ ಆಗಿಲ್ಲವೇ.

ನಾವು ಹೋರಾಟ ಮಾಡಿದ ಪರಿಣಾಮದಿಂದ ಪ್ರಧಾನಮಂತ್ರಿಗಳು ಕರಾಳ ಕೃಷಿ ಕಾಯ್ದೆಗಳನ್ನು ಹಿಂಪಡೆದರು. ರಾಜ್ಯದಲ್ಲಿ ಇನ್ನೂ ಕಾಯ್ದೆ ಹಿಂಪಡೆದಿಲ್ಲ. ರೈತರ ಪರ ಧ್ವನಿ ಎತ್ತುವ ಕಾಂಗ್ರೆಸ್‌ ಧ್ವನಿ ಅಡಗಿಸುವ ಪ್ರಯತ್ನ ಇದಾಗಿದೆ ಎಂದರು.

ಬೆಳಕಿಗೆ ತಂದಿದ್ದೇ ಕಾಂಗ್ರೆಸ್‌
ಪಿಎಸ್‌ ಐ ನೇಮಕಾತಿ ಹಗರಣದಲ್ಲಿ ಯಾರೇ ಭಾಗಿಯಾಗದ್ದರೂ ಕ್ರಮ ಕೈಗೊಳ್ಳಲಿ. ಪ್ರಕರಣದ ಪ್ರಮುಖ ರೂವಾರಿ ಬಿಜೆಪಿ ನಾಯಕಿ ನಾಪತ್ತೆಯಾಗಿದ್ದು ಇನ್ನೂ ಯಾಕೆ ಬಂಧಿಸಿಲ್ಲ. ಈ ಹಗರಣ ಬೆಳಕಿಗೆ ತಂದಿದ್ದೇ ಕಾಂಗ್ರೆಸ್‌. ಮೊದಲು ಮಾತಾಡಿದ್ದು ಪ್ರಿಯಾಂಕ್‌ ಖರ್ಗೆ . ಹಗರಣ ನಡೆದ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಗೃಹ ಸಚಿವರ ಜತೆ ಉತ್ತಮ ಒಡನಾಟ ಇಟ್ಟುಕೊಂಡಿರುವ ಫೋಟೋಗಳು ಬಂದಿವೆ. ಪರೀಕ್ಷೆ ಬರೆದ 52 ಸಾವಿರ ಅಭ್ಯರ್ಥಿಗಳಿಗೆ ಮೋಸ ಆಗಿದೆ. ಪ್ರತಿಯೊಬ್ಬರಿಂದ 70-80 ಲಕ್ಷ ರೂ. ಪಡೆದಿರುವ ಮಾಹಿತಿಯಿದೆ.
– ಡಿ.ಕೆ.ಶಿವಕುಮಾರ್‌

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.