Udayavni Special

ಸಮಸ್ಯೆಗಳ ನಡುವೆಯೂ ಸಮಾಜಮುಖಿ ಬಜೆಟ್: ಗೋವಿಂದ ಕಾರಜೋಳ

Team Udayavani, Feb 1, 2021, 8:28 PM IST

Popular Budget in covid Hardship: Govinda Karajola

ಬೆಂಗಳೂರು: ಕೋವಿಡ್ ಸಂಕಷ್ಟದಲ್ಲೂ ಎಲ್ಲಾ ವರ್ಗಗಳ, ಸಮುದಾಯಗಳ, ವಲಯಗಳ ಅಭಿವೃದ್ಧಿಗಾಗಿ ದೂರದೃಷ್ಠಿಯುಳ್ಳ,  ಅತ್ಯುತ್ತಮವಾದ ಹಾಗೂ ಜನಪರವಾದ ಬಜೆಟ್‍ ಅನ್ನು ಕೇಂದ್ರ ಹಣಕಾಸು ಸಚಿವರಾದ  ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಈ ಬಜೆಟ್‍ ಅನ್ನು ಮುಕ್ತಕಂಠದಿಂದ ಸ್ವಾಗತಿಸುವುದಾಗಿ ಉಪ ಮುಖ್ಯಮಂತ್ರಿ  ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

ಬಡವರ, ಪರಿಶಿಷ್ಟರ, ಕೃಷಿಕರ, ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಒತ್ತು ನೀಡಲಾಗಿದೆ. ಹಲವಾರು ಅಭಿವೃದ್ಧಿ ಕ್ಷೇತ್ರಗಳಿಗೆ ಈ ಬಾರಿಯ ಬಜೆಟ್‍ನಲ್ಲಿ ಹೆಚ್ಚಿನ ಒತ್ತು ಕೊಡಲಾಗಿದೆ. ಎಲ್ಲವುದಕ್ಕಿಂತ ಮುಖ್ಯವಾಗಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನವನ್ನು ಮೀಸಲಿಡಲಾಗಿದೆ. ಕೋವಿಡ್ ಹೆಮ್ಮಾರಿಯನ್ನು ತಡೆಗಟ್ಟಲು ಈ ಬಾರಿಯ ಬಜೆಟ್ ವಿಶೇಷ ಗಮನ ನೀಡಿದೆ. 11,000 ಕಿಮೀ. ಹೆಚ್ಚುವರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, 650 ಕಿ.ಮೀ. ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಉನ್ನತೀಕರಿಸಲು ಅನುದಾನ ಮೀಸಲಿರಿಸಲಾಗಿದೆ. ವಿದ್ಯಾವಂತ ನಿರುದ್ಯೋಗಗಳಿಗೆ ಉದ್ಯೋಗ ನೀಡುವ ಸದುದ್ದೇಶದಿಂದ 7 ಹೊಸ ಟೆಕ್ಸ್‍ಟೈಲ್ಸ್ ಸ್ಥಾಪನೆ, ಹಾಗೂ ಕೌಶಲ್ಯಾಭಿವೃದ್ಧಿ ಯೋಜನೆಯಡಿ ತರಬೇತಿ ನೀಡಲು 3000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

ಶಿಕ್ಷಣಕ್ಕೂ ಆದ್ಯತೆ ನೀಡಲಾಗಿದ್ದು, 15000 ಶಾಲೆಗಳನ್ನು ಮೇಲ್ದರ್ಜೆಗೇರಿಸುವುದು, ಗಿರಿಜನ ಪ್ರದೇಶಗಳಲ್ಲಿ 750 ಏಕಲವ್ಯ ಮಾದರಿ ಶಾಲೆಗಳ ಸ್ಥಾಪನೆ, 100 ಹೊಸ ಸೈನಿಕ ಶಾಲೆಗಳ ಸ್ಥಾಪನೆಯ ಗುರಿ ಹೊಂದಿದ್ದು, ಐತಿಹಾಸಿಕ ವಿಷಯವಾಗಿದೆ ಎಂದರು.

ಕೃಷಿ ಕ್ಷೇತ್ರವನ್ನು ಸಬಲಗೊಳಿಸಲು ಹಾಗೂ ಕೃಷಿ ಉತ್ಪನ್ನಗಳಿಗೆ ಯೋಗ್ಯ ಮಾರುಕಟ್ಟೆ ದೊರಕಿಸುವ ಸಲುವಾಗಿ 1000 ಎ.ಪಿ.ಎಂ.ಸಿ.ಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ವ್ಯವಸ್ಥೆ ಹಾಗೂ ಬೆಂಬಲ ಬೆಲೆ (ಎಂ.ಎಸ್.ಪಿ.) ಅಡಿ ಸರ್ಕಾರದಿಂದಲೇ ಧಾನ್ಯಗಳ ಖರೀದಿಗೆ ನಿರ್ಧರಿಸಿದೆ. ಅಸಂಘಟಿತ ಕಾರ್ಮಿಕರಿಗೆ ಇ.ಎಸ್.ಐ. ಸೌಲಭ್ಯ, ಕನಿಷ್ಠ ವೇತನ ಕಾಯಿದೆ ಸೌಲಭ್ಯ ಜಾರಿಗೊಳಿಸುವ ಮೂಲಕ ಕಾರ್ಮಿಕ ಹಿತ ಕಾಯಲು ಗುರಿಹೊಂದಲಾಗಿದೆ ಎಂದರು.

ಇದನ್ನೂ ಓದಿ:ಕೇಂದ್ರ ಸರ್ಕಾರದಿಂದ ಜನಪರ ಬಜೆಟ್: ಸಚಿವ ಡಾ. ನಾರಾಯಣಗೌಡ

ಕ್ಷೇತ್ರ ಸಂಪರ್ಕ ವ್ಯವಸ್ಥೆ, ನಗರ ಪ್ರದೇಶಗಳ ಸಾರಿಗೆ ಸಂಪರ್ಕ ಅಭಿವೃದ್ಧಿ ಪಡಿಸಲು ಗಮನ ನೀಡಲಾಗಿದೆ. ಮೆಟ್ರೋ ವಿಸ್ತರಣೆಗೆ ಹೆಚ್ಚು ಒತ್ತು ನೀಡಲಾಗಿದೆ. ಬೆಂಗಳೂರು ನಗರಕ್ಕೆ ಇನ್ನೂ 2 ಮಾರ್ಗಗಳ ಮೆಟ್ರೋ ರೈಲು ಯೋಜನೆಗೆ ಅನುದಾನ ಒದಗಿಸಲಾಗಿದೆ. ಅತಿಮುಖ್ಯವಾಗಿ ಅಭಿವೃದ್ಧಿ ಅಂಶವೆಂದರೆ ವಸತಿ ಸೌಕರ್ಯಗಳ ವಿತರಣೆ, ಕರ್ನಾಟಕವೂ ಸೇರಿದಂತೆ ಈಗ ಕೈಗೊಳ್ಳಲಾಗಿರುವ ವಸತಿ ಕಾರ್ಯಯೋಜನೆಗಳಿಗೆ ಹೆಚ್ಚು ಅನುದಾನ ದೊರಕಲಿದೆ. ತೆರಿಗೆ ವಂಚನೆಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಜಿ.ಎಸ್.ಟಿ. ಯನ್ನು ಬಿಗಿಗೊಳಿಸಿ ಆದಾಯ ಹೆಚ್ಚಳಕ್ಕೆ ಕ್ರಮವಹಿಸಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ

ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಶಾಲೆಯನ್ನು ಹೊಸತನಕ್ಕೆ ತೆರೆಯೋಣ

ಶಾಲೆಯನ್ನು ಹೊಸತನಕ್ಕೆ ತೆರೆಯೋಣ

ಪಾಕಿಸ್ಥಾನ ವಿರುದ್ಧ ಪ್ರಭುತ್ವ; ಮೊದಲ ಪ್ರಶಸ್ತಿಯೇ ಭಾರತಕ್ಕೆ

ಪಾಕಿಸ್ಥಾನ ವಿರುದ್ಧ ಪ್ರಭುತ್ವ; ಮೊದಲ ಪ್ರಶಸ್ತಿಯೇ ಭಾರತಕ್ಕೆ

ಉಗ್ರರಿಗೂ ಮುನ್ನ ಪಾಕ್‌ ವಿರುದ್ಧ ತೀಕ್ಷ್ಣ ಕ್ರಮ ಅನಿವಾರ್ಯ

ಉಗ್ರರಿಗೂ ಮುನ್ನ ಪಾಕ್‌ ವಿರುದ್ಧ ತೀಕ್ಷ್ಣ ಕ್ರಮ ಅನಿವಾರ್ಯ

ಸೀ ವೀಡ್‌ ಕೃಷಿ ಯೋಜನೆಗೆ ಉತ್ತೇಜನ

ಸೀ ವೀಡ್‌ ಕೃಷಿ ಯೋಜನೆಗೆ ಉತ್ತೇಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾನಗರ ಪಾಲಿಕೆಗಳಿಗೆ “ಪೊಲೀಸ್‌ ಪವರ್‌’ ಪ್ರಸ್ತಾವನೆಗೆ ಮರು ಜೀವ?

ಮಹಾನಗರ ಪಾಲಿಕೆಗಳಿಗೆ “ಪೊಲೀಸ್‌ ಪವರ್‌’ ಪ್ರಸ್ತಾವನೆಗೆ ಮರು ಜೀವ?

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ

ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ

ನವಪಂಜಾಬ್‌ ನಿರ್ಮಾಣಕ್ಕೆ ಸಿಧು ಮನವಿ

ನವಪಂಜಾಬ್‌ ನಿರ್ಮಾಣಕ್ಕೆ ಸಿಧು ಮನವಿ

“ಕೋವಿಡ್ ಲಸಿಕೆ ಹಾಕಿಸಿ, ಟಿವಿ ಗೆಲ್ಲಿ’

“ಕೋವಿಡ್ ಲಸಿಕೆ ಹಾಕಿಸಿ, ಟಿವಿ ಗೆಲ್ಲಿ’

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಇಂದು ಭಾರತ-ಇಂಗ್ಲೆಂಡ್‌ ಅಭ್ಯಾಸ ಪಂದ್ಯ

ಇಂದು ಭಾರತ-ಇಂಗ್ಲೆಂಡ್‌ ಅಭ್ಯಾಸ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.