ಶಾಸಕರ ಪುತ್ರಿ ವಿವಾಹ ಆರತಕ್ಷತೆ ಮುಂದೂಡಿಕೆ
Team Udayavani, Mar 15, 2020, 3:02 AM IST
ಚಿಕ್ಕೋಡಿ: ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಮಾ.15ರಂದು ಸಂಜೆ ಹಾಗೂ 17ರಂದು ಚಿಕ್ಕೋಡಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಪುತ್ರಿಯ ಮದುವೆ ಸಮಾರಂಭದ ಆರತಕ್ಷತೆ ಮುಂದೂಡಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾನುವಾರ ಬೆಳಗ್ಗೆ 10 ಗಂಟೆಗೆ ಮಗಳ ಮದುವೆ ಕುಟುಂಬದವರೊಂದಿಗೆ ಸರಳವಾಗಿ ನೆರವೇರಲಿದೆ.
ತಮ್ಮ ಸ್ಥಳಗಳಿಂದಲೇ ವಧು-ವರರನ್ನು ಆಶೀರ್ವದಿಸಬೇಕೆಂದು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸೂಚನೆ ಮೇರೆಗೆ ರಾಜ್ಯ ಸರ್ಕಾರವು ಸಾರ್ವಜನಿಕ ಹಿತದೃಷ್ಟಿಯಿಂದ ಹೆಚ್ಚು ಜನ ಸೇರುವ ಸಭೆ-ಸಮಾರಂಭಗಳನ್ನು ನಿರ್ಬಂಧಿ ಸಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು