ಔರಾದ್ ನಲ್ಲಿ 90 ಕೋಟಿ ವೆಚ್ಚದಲ್ಲಿ ಸಿಪೆಟ್ ಕೇಂದ್ರ ಆರಂಭ : ಸಚಿವ ಪ್ರಭು ಚವ್ಹಾಣ್


Team Udayavani, May 12, 2022, 6:16 PM IST

ಔರಾದ್ ನಲ್ಲಿ 90 ಕೋಟಿ ವೆಚ್ಚದಲ್ಲಿ ಸಿಪೆಟ್ ಕೇಂದ್ರ ಆರಂಭ : ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಬೀದರ್ ಜಿಲ್ಲೆಯ ಔರಾದ್ ವಿಧಾನಸಭಾ ಕ್ಷೇತ್ರದ ಬಲ್ಲೂರ್(ಜೆ) ಗ್ರಾಮದಲ್ಲಿ 90 ಕೋಟಿ ವೆಚ್ಚದಲ್ಲಿ ಸಿಪೆಟ್ ಕೇಂದ್ರ ಆರಂಭಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 50:50 ಅನುಪಾತದಲ್ಲಿ ಸ್ಥಾಪನೆಯಾಗಲಿರುವ ಸೆಂಟ್ರಲ್ ಇನ್ಸಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಹಾಗೂ ಟೆಕ್ನಾಲಜಿ (ಸಿಪೆಟ್) ಕೇಂದ್ರ ಆರಂಭಕ್ಕೆ ಅನುವು ಮಾಡಿಕೊಟ್ಟ ಪ್ರಧಾನಮಂತ್ರಿ ನರೇಂದ್ರಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹಾಗೂ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಪ್ರಭು ಚವ್ಹಾಣ್ ಪತ್ರಿಕಾ ಪ್ರಕಟಣೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

ಹಿಂದುಳಿದ ತಾಲ್ಲೂಕಾಗಿರುವ ಔರಾದ್ ತಾಲ್ಲೂಕು ಅಭಿವೃದ್ಧಿಗೆ 2008ರಿಂದ ಸಂಕಲ್ಪ ಮಾಡಿದ್ದೆ. 2009ರಿಂದ ನಿರಂತರ ಪ್ರಯತ್ನ ಮಾಡಿದ್ದರಿಂದ ಸಿಪೆಟ್ ಕೇಂದ್ರ ಔರಾದ್ ತಾಲ್ಲೂಕಿಗೆ ಬಂದಿರುವುದು ಈ ದಿನ ಸಾಕಾರಗೊಂಡಿದೆ. ಸಿಪೆಟ್ ಕೇಂದ್ರ ಸ್ಥಾಪನೆಯಿಂದ‌ ವಾರ್ಷಿಕ 2000 ಉದ್ಯೋಗ ಸೃಷ್ಠಿಗೆ ತರಬೇತಿ ನೀಡುವುದರಿಂದ ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿನ ಯುವ ಜನತೆಗೆ ಸ್ವಯಂ ಉದ್ಯೋಗಪ್ರಾರಂಭಿಸಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

ಮುಂದಿನ ದಿನಗಳಲ್ಲಿ ವಾರ್ಷಿಕವಾಗಿ 180 ಡಿಪ್ಲೋಮಾ ಕೋರ್ಸ್ ನಡೆಸಲು ಉದ್ದೇಶಿಸಲಾಗಿದೆ. ಸ್ಥಳೀಯವಾಗಿ ಉದ್ಯೋಗ ಸೃಷ್ಠಿಯಾಗುವುದರಿಂದ ಹೈದಾರಾಬಾದ್, ಗೋವಾ, ಬೆಂಗಳೂರಿಗೆ ಉದ್ಯೋಗ ಹರಸಿ ಗುಳೆ ಹೋಗುವುದನ್ನು ತಡೆಗಟ್ಟುವುದರಿಂದ ಸ್ಥಳೀಯವಾಗಿ ಉದ್ಯೋಗ ಸೃಷ್ಠಿಯಾಗಲಿದೆ ಎಂದು ಸಚಿವ ಪ್ರಭು ಚವ್ಹಾಣ್ ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ. ಪ್ಲಾಸ್ಟಿಕ್, ಪೆಟ್ರೋ ಕೆಮಿಕಲ್ಸ್ ಕೈಗಾರಿಕೆಗಳಿಗೆ ನುರಿತ ಮಾನವ ಸಂಪನ್ಮೂಲ ಅಭಿವೃದ್ಧಿಪಡಿಸಲು ಯುವ ಜನಾಂಗಕ್ಕೆ ಅತ್ಯಾಧುನಿಕ‌ ತರಬೇತಿ ಮೂಲಕ ತಾಂತ್ರಿಕ ನೈಪುಣ್ಯತೆ ಒದಗಿಸಲಿದೆ.

ಔರಾದ್ ವಿಧಾನಸಭಾ ಕ್ಷೇತ್ರ‌ ವ್ಯಾಪ್ತಿಯ‌ ಬಲ್ಲಾರ(ಜೆ) ಗ್ರಾಮದಲ್ಲಿ 10 ಎಕರೆ ಜಮೀನು ಕಾಯ್ದಿರಿಸಿ, ಈ ಭಾಗ ಅಭಿವೃದ್ಧಿಯಾಗಲು ಸಹಕರಿಸಿದ ಜಿಲ್ಲಾಡಳಿತಕ್ಕೆ ಪ್ರಭು ಚವ್ಹಾಣ್ ಧನ್ಯವಾದ ಹೇಳಿದ್ದಾರೆ.

ಬಸವಣ್ಣನ ಜನ್ಮಭೂಮಿ ಬಸವಕಲ್ಯಾಣವು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಹೊಂದುತ್ತಿದೆ. ಬೀದರ್ ಜಿಲ್ಲೆ ಐತಿಹಾಸಿಕ ಜಿಲ್ಲೆ ಆಗುತ್ತಿರುವುದು ಸಂತೋಷದಾಯಕವಾಗಿದೆ. ಅನುಭವ ಮಂಟಪ ಮತ್ತು ಇತರೆ ಕಾಮಗಾರಿಗಳಿಗಾಗಿ ಒಟ್ಟಾರೆ ರೂ.612 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ರೂ.10 ಕೋಟಿಯನ್ನು ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಒದಗಿಸಿರುವುದಕ್ಕೆ ಸಚಿವ ಪ್ರಭು ಚವ್ಹಾಣ್ ಮಂತ್ರಿ ಮಂಡಲಕ್ಕೆ ಧನ್ಯವಾದ ತಿಳಿಸಿದ್ದಾರೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.