ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ: ರಾಜ್ಯಕ್ಕೆ 642 ಕೋ. ರೂ. ಮಂಜೂರು: ಬಿಸಿಪಿ

Team Udayavani, Jan 14, 2022, 6:12 AM IST

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ: ರಾಜ್ಯಕ್ಕೆ  642 ಕೋ. ರೂ. ಮಂಜೂರು: ಬಿಸಿಪಿ

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಕೃಷಿ ಇಲಾಖೆ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 642.26 ಕೋಟಿ ರೂ. ಮಂಜೂರಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮಾಹಿತಿ ನೀಡಿದರು.

ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ  ಜರಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಯಡಿ ಕೇಂದ್ರದಿಂದ ಶೇ.60 ರಾಜ್ಯದಿಂದ ಶೇ.40ರ ಅನುಪಾತದಲ್ಲಿ ಯೋಜನೆಯ ವೆಚ್ಚವನ್ನು ಭರಿಸಲಾಗುತ್ತಿದ್ದು, ಸಮತಟ್ಟಾದ ಪ್ರದೇಶದ ಪ್ರತಿ ಹೆಕ್ಟೇರ್‌ ಜಲಾನಯನಗಳ ನಿರ್ವಹಣೆಗೆ 22 ಸಾ. ರೂ. ಗುಡ್ಡಗಾಡು ಪ್ರದೇಶದ ನಿರ್ವಹಣೆಗೆ 28 ಸಾವಿರ ರೂ.ವರೆಗೆ ಅನುದಾನ  ಲಭ್ಯವಾಗಲಿದೆ. ಈ ಯೋಜನೆಯನ್ನು ರಾಜ್ಯದ 2.75 ಲಕ್ಷ ಹೆಕ್ಟೇರ್‌ ಮಳೆಯಾಶ್ರಿತ ಪ್ರದೇಶವನ್ನು ನಿರ್ವಹಿಸಲು ಅನುಮೋದನೆ ನೀಡಲಾಗಿದೆ ಎಂದರು.

ಯೋಜನೆಯ ಮುಖ್ಯ ಉದ್ದೇಶಗಳನ್ನು ವಿವರಿಸಿದ ಸಚಿವರು, ಮಳೆ ನೀರು ಕೊಯ್ಲು ಮೂಲಕ ಮಣ್ಣಿನ ತೇವಾಂಶ ಸಂರಕ್ಷಿಸುವುದು, ಪರ್ಯಾಯ ಬೆಳೆ ವ್ಯವಸ್ಥೆಗಳು, ಹವಾಮಾನ ವೈಪರೀತ್ಯ ಮತ್ತು ಬರಗಾಲದ ಅಪಾಯಗಳನ್ನು ಎದುರಿಸಲು ಹಾಗೂ ಅಂತರ್ಜಲ ಹೆಚ್ಚಿಸಲು ಅನುಕೂಲವಾಗುತ್ತದೆ.  ಆಸ್ತಿರಹಿತರಿಗೆ ಸ್ವಸಹಾಯ ಗುಂಪುಗಳನ್ನು ರಚಿಸಿ ಉತ್ತೇಜಿಸುವುದು. ವಿಕಲಚೇತನರು ಮತ್ತು ಮಹಿಳೆಯರಿಗೆ ಅಭಿವೃದ್ಧಿಪಡಿಸಿದ ಭೂಮಿ, ನೀರು ಮತ್ತು ಜೀವರಾಶಿ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಪ್ರವೇಶ ಮತ್ತು ಅವಕಾಶ ಹಾಗೂ ಎಫ್.ಪಿ.ಒ. ಬಳಕೆದಾರರ ಗುಂಪುಗಳು ಮುಂತಾದ ವಿವಿಧ ಸಮುದಾಯ ಸಂಸ್ಥೆಗಳಲ್ಲಿ ಈ ವರ್ಗಗಳ ಜನರಿಗೆ ಸದಸ್ಯತ್ವ ನೀಡಲು ಉತ್ತೇಜಿಸುವುದಾಗಿದೆ ಎಂದರು.

ದೇಶದಲ್ಲೇ ಕರ್ನಾಟಕ ಕೃಷಿ ಇಲಾಖೆಯ ಜಲಾನಯನ ಇಲಾಖೆಯು ಇತರ ರಾಜ್ಯಗಳಿಗೆ ತಾಂತ್ರಿಕ ಸಲಹೆ ನೀಡಲು ಮಾದರಿಯಾಗಿದ್ದು, ಕರ್ನಾಟಕ ರಾಜ್ಯವನ್ನು ಕೇಂದ್ರ ಸರಕಾರ ಲೈಟ್‌ ಹೌಸ್‌ ಎಂದು ಗುರುತಿಸಿರುವುದು ನಮಗೆ ಹೆಮ್ಮೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ರಿವಾರ್ಡ್‌ ಯೋಜನೆಯಡಿ ಕೈಗೊಳ್ಳುವ ಪ್ರಮುಖ ಚಟುವಟಿಕೆ :

ಈಗಾಗಲೇ ರಾಜ್ಯದ 14 ಲಕ್ಷ ಹೆಕ್ಟೇರ್‌  ಪ್ರದೇಶದಲ್ಲಿ 11 ಜಿಲ್ಲೆಗಳಲ್ಲಿ ಭೂ ಸಂಪನ್ಮೂಲ ಸಮೀಕ್ಷೆ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಪ್ರಸ್ತುತ ಹೊಸದಾಗಿ 9 ಜಿಲ್ಲೆಗಳು ಸಹಿತ 19.41 ಲಕ್ಷ ಹೆ. ಮಳೆಯಾಶ್ರಿತ ಪ್ರದೇಶದಲ್ಲಿ ಭೂ ಸಂಪನ್ಮೂಲ ಸಮೀಕ್ಷೆ  ಕೈಗೊಳ್ಳಲಾಗುವುದು.

  • ಭೂ ಸಂಪನ್ಮೂಲ ಸಮೀಕ್ಷೆ ಕಾರ್ಡ್‌ ಬಳಸುವುದರಿಂದ ರೈತರಿಗೆ ಹಿಡುವಳಿವಾರು ಮಣ್ಣಿನ ಪೋಷಕಾಂಶಗಳ ಅನ್ವಯ ನಿರ್ದಿಷ್ಟ ತಾಂತ್ರಿಕತೆಗಳ ಶಿಪಾರಸನ್ನು ಕೊಡಲು ಸಹಕಾರಿಯಾಗುತ್ತದೆ.
  • 1 ಲಕ್ಷ ಹೆ. ಜಲಾನಯನ ಪ್ರದೇಶದಲ್ಲಿ (20 ಉಪಜಲಾನಯನಗಳು) ಭೂ-ಸಂಪನ್ಮೂಲ (ಎಲ್‌ಆರ್‌ಐ) ಮತ್ತು ಜಲವಿಜ್ಞಾನ ಅಧ್ಯಯನದ (ಹೈಡ್ರಾಲಜಿ) ಶಿಫಾರಸುಗಳನ್ನು ಆಧರಿಸಿ ವೈಜ್ಞಾನಿಕವಾಗಿ ಸಂಪೂರ್ಣ ಜಲಾನಯನದ ಉಪಚಾರ ಕೈಗೊಳ್ಳುವುದು.
  • ರೈತ ಉತ್ಪಾದಕ ಸಂಸ್ಥೆಗಳ ಬಲವರ್ಧನೆ ಮತ್ತು ಮೌಲ್ಯ ಸರಪಳಿ ಅಭಿವೃದ್ಧಿ.
  • ರೈತರಿಗೆ ಸುಧಾರಿತ ಕೃಷಿ-ಹವಾಮಾನ ಸಲಹಾ ಸೇವೆ ಒದಗಿಸುವುದು.
  • ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯ ಸಂಸ್ಥೆಯಲ್ಲಿ ಜಲಾನಯನ ನಿರ್ವಹಣೆ ಕುರಿತು ಅತ್ಯುನ್ನತ ಮಟ್ಟದ ಅಧ್ಯಯನ ಮತ್ತು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗಿದೆ.

250 ಅಮೃತ ರೈತ ಉತ್ಪಾದಕರ ಸಂಸ್ಥೆ ರಚನೆ :

75- ಅಮೃತ ರೈತ, ಮೀನುಗಾರರ, ನೇಕಾರರ ಉತ್ಪಾದಕರ ಸಂಸ್ಥೆಗಳನ್ನು ರಚಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದಂತೆ  ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಸಕ್ತ ಸಾಲಿನಲ್ಲಿ 250 ಅಮೃತ ರೈತ ಉತ್ಪಾದಕರ ಸಂಸ್ಥೆಗಳನ್ನು ರಚಿಸುವ ಗುರಿ ಹೊಂದಿದೆ. ಇಲ್ಲಿಯವರೆಗೆ ವಿವಿಧ ಇಲಾಖೆಗಳ ವತಿಯಿಂದ 178 ಅಮೃತ ಉತ್ಪಾದಕರ ಸಂಸ್ಥೆಗಳನ್ನು ಅಲ್ಪ ಸಮಯದಲ್ಲಿಯೇ ಕ್ರಮ ವಹಿಸಿ ಪ್ರಗತಿ ಸಾಧಿಸಲಾಗಿದೆ. ಪ್ರತಿ ಅಮೃತ ಉತ್ಪಾದಕರ ಸಂಸ್ಥೆಗೆ 30 ಲಕ್ಷ ರೂ.ನಂತೆ ಒಟ್ಟು 225 ಕೋ. ರೂ. ವೆಚ್ಚದಲ್ಲಿ ಮೂರು ವರ್ಷಗಳಲ್ಲಿ ವೆಚ್ಚ ಭರಿಸಲಾಗುವುದು. ಕೇಂದ್ರ ವಲಯದ 10 ಸಾವಿರ ರೈತ ಉತ್ಪಾದಕರ ಸಂಸ್ಥೆಗಳ ರಚನೆ ಯೋಜನೆಯಡಿ ಇಲಾಖೆಗೆ ನಿಗದಿಪಡಿಸಿರುವ 100 ಉತ್ಪಾದಕರ ಸಂಸ್ಥೆಗಳು ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 130 ರೈತ ಉತ್ಪಾದಕರ ಸಂಸ್ಥೆಗಳನ್ನು ರಚಿಸಿ ಪ್ರಗತಿ ಸಾಧಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.