ಬಿಜೆಪಿ ಸೇರ್ಪಡೆಯಾದ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್, ಸಂದೇಶ್ ನಾಗರಾಜ್
Team Udayavani, May 7, 2022, 5:13 PM IST
ಬೆಂಗಳೂರು: ವಿಧಾನಸಭೆ ಚುನಾವಣೆಗೆ ವರ್ಷವಷ್ಟೇ ಉಳಿದಿರುವ ಸಮಯದಲ್ಲಿ ರಾಜ್ಯದಲ್ಲಿ ಆಡಳಿತರೂಢ ಬಿಜೆಪಿಯು ಬಲವರ್ಧನೆ ಮಾಡಿಕೊಳ್ಳುತ್ತಿದೆ. ಇದರ ಅಂಗವಾಗಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್ ಸೇರಿ ಪ್ರಮುಖ ನಾಯಕರನ್ನು ಬಿಜೆಪಿ ತನ್ನತ್ತ ಸೆಳೆದುಕೊಂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ವರ್ತೂರು ಪ್ರಕಾಶ್, ಮಾಲೂರು ಮಂಜುನಾಥ್ ಗೌಡ, ಮಂಡ್ಯ ಭಾಗದ ಲಕ್ಷ್ಮೀ ಅಶ್ವಿನ್ ಗೌಡ, ಅಶೋಕ್ ಜಯರಾಮ್, ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ ಬಿಜೆಪಿ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ಎಸ್.ಟಿ ಸೋಮಶೇಖರ್, ನಾರಾಯಣಗೌಡ, ಗೋಪಾಲಯ್ಯ, ಮುನಿರತ್ನ, ಸುಧಾಕರ್, ಸಂಸದ ಮುನಿಸ್ವಾಮಿ, ಎಂಎಲ್ಸಿ ಸಿ.ಪಿ ಯೋಗೇಶ್ವರ್ ಉಪಸ್ಥಿತರಿದ್ದರು.
ಇದನ್ನೂ ಓದಿ:ಪಿಎಸ್ಐ ಅಕ್ರಮದಲ್ಲಿ ಭಾಗಿಯಾದವರ ಹೆಸರನ್ನು ಸಿಎಂ ಹೇಳಬೇಕು: ಡಿಕೆ ಶಿವಕುಮಾರ್
ಉಡುಪಿಯ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅವರು ಇಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಮಲ ಪಕ್ಷ ಸೇರ್ಪಡೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !