ಮಸ್ಕಿಯಲ್ಲಿ ಮುದುಡಿದ ಕಮಲ : ಸೋಲಿನ ಹತಾಶೆಯಿಂದ ಹೊರನಡೆದ ಪ್ರತಾಪಗೌಡ
Team Udayavani, May 2, 2021, 11:09 AM IST
ರಾಯಚೂರು: ಮಸ್ಕಿ ಉಪಚುನಾವಣೆ ಮತ ಎಣಿಕೆಯ 16 ಸುತ್ತುಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಸೋಲಿನ ಹತಾಷೆಯಿಂದ ಹೊರ ನಡೆದರು.
ಪ್ರತಿ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಸೋಲಿನ ಭೀತಿ ಶುರುವಾಗಿದೆ. ಅಲ್ಲದೇ ಬಿಜೆಪಿ ಬೆಂಬಲಿತ ಭಾಗದಲ್ಲೇ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರಿಂದ ಪ್ರತಾಪ ಗೌಡ ಸೋಲೊಪ್ಪಿಕೊಂಡು ಹೊರ ನಡೆದರು. ಈ ವೇಳೆ ಮಾತನಾಡಿದ ಪ್ರತಾಪಗೌಡ, ಸೋಲು ಗೆಲುವು ಏನೆ ಆಗಲಿ ಅದರ ಹೊಣೆ ನಾನೆ ಹೊರುತ್ತೇನೆ.
ಕ್ಷೇತ್ರದ ಜನತೆಗೆ ಅಭಿವೃದ್ಧಿ ಬೇಕಾಗಿಲ್ಲ. ಸಾಕಷ್ಟು ಅಭಿವೃದ್ಧಿ ಮಾಡಿದ್ದರೂ ಮತದಾರರು ಕೈ ಹಿಡಿದಿಲ್ಲ. ನಮ್ಮವರೇ ನಮ್ಮ ಕೈ ಹಿಡಿಯಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಮುಂದೆ ಸ್ಥಾನಮಾನ ನೀಡುವ ವಿಚಾರ ಪಕ್ಷ ನಿರ್ಧರಿಸಲಿದೆ ಎಂದರು.
ಮಸ್ಕಿಯಲ್ಲಿ ನಾನು ಸೋಲುವುದಿಲ್ಲ ಎಂದು ಭಾವಿಸಿದ್ದೆ. ಆದ್ರೆ ಜನ ಹೊಸಬರನ್ನು ಬಯಸಿದ್ದಾರೆ. ಜನ ಕ್ಷೇತ್ರದಲ್ಲಿ ಬದಲಾವಣೆ ಬಯಸಿ ಮತ ಹಾಕಿದ್ದಾರೆ ಎಂದು ಪ್ರತಾಪ್ ಗೌಡ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…