ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಸಿದ್ಧತೆ
Team Udayavani, Apr 20, 2017, 3:45 AM IST
ಬೆಂಗಳೂರು: 2018 ರ ವಿಧಾನಸಭೆ ಚುನಾವಣೆಯನ್ನು ಮುಖ್ಯಮಂತ್ರಿಗಳ ವರ್ಚಸ್ಸು ಬಳಸಿಕೊಂಡು ಸಾಮೂಹಿಕ
ನಾಯಕತ್ವದಲ್ಲಿ ಎದುರಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಡಾ. ನಿರಂತರ ಗಣೇಶ್
ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎರಡು ಉಪ ಚುನಾವಣೆ ಗೆಲುವಿನ ನಂತರ ಮುಂದಿನ ಚುನಾವಣೆ ಎದುರಿಸುವ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಸಮಾಲೋಚನೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಮುಖ್ಯ ಮಂತ್ರಿಯ ವರ್ಚಸ್ಸು ಬಳಸಿಕೊಂಡು ಚುನಾವಣೆಯನ್ನು ಎದುರಿಸುತ್ತೇವೆ. ಅವಧಿಗೂ ಮುನ್ನ ಚುನಾವಣೆಗೆ ಹೋಗುವ ಬಗ್ಗೆ ಆಲೋಚನೆ ನಡೆಸಿಲ್ಲ ಎಂದು ಹೇಳಿದರು.
ರಾಜಕೀಯ ಕುಟುಂಬದಿಂದ ಬಂದಿರುವ ಡಾ. ನಿರಂತರ ಗಣೇಶ್ ಮೊದಲಿನಿಂದಲೂ ಸಾಮಾಜಿಕ ಕಾರ್ಯಗಳಲ್ಲಿ
ತೊಡಗಿಸಿಕೊಂಡಿದ್ದರು. 6 ತಿಂಗಳಿಂದಲೂ ಸಕ್ರಿಯ ರಾಜಕೀಯಕ್ಕೆ ಬರುವ ಕುರಿತು ಮಾತುಕತೆ ನಡೆಸಲಾಗಿತ್ತು. ಅದಕ್ಕೆ ಈಗ ಸಮಯ ಕೂಡಿ ಬಂದಿದೆ. ಎಸ್.ಎಂ.ಕೃಷ್ಣ ಪಕ್ಷ ತೊರೆದಿರುವುದಕ್ಕೂ ಡಾ.ನಿರಂತರ ಗಣೇಶ್ ಕಾಂಗ್ರೆಸ್ ಸೇರ್ಪಡೆಗೂ ಸಂಬಂಧ ಇಲ್ಲ. ಕಡೂರು ಕ್ಷೇತ್ರದಲ್ಲಿ ಟಿಕೆಟ್ ನೀಡುವ ಕುರಿತಂತೆ ಯಾವುದೇ ಭರವಸೆಯನ್ನೂ ನೀಡಿಲ್ಲ ಎಂದು ಅವರು ಹೇಳಿದರು. ಸುಮಾರು 40 ವೈದ್ಯರೊಂದಿಗೆ ಕಾಂಗ್ರೆಸ್ ಸೇರಿದ ಡಾ. ನಿರಂತರ ಗಣೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಿದ್ದಾಂತ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಆಡಳಿತ ಮೆಚ್ಚಿ ಸೇರ್ಪಡೆಯಾಗುತ್ತಿದ್ದೇನೆ. ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಹರೀಶ್ ಸಾಂತ್ವನ ಯೋಜನೆಗಳು ಗ್ರಾಮೀಣ ಪ್ರದೇಶದ ಜನರಿಗೆ ಸಾಕಷ್ಟು ಅನುಕೂಲ ವಾಗಿವೆ ಎಂದು ಹೇಳಿದರು.
ತಾವು ಕಡೂರು ಕ್ಷೇತ್ರದಲ್ಲಿ 2 ವರ್ಷಗಳಿಂದ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಮಾಡುತ್ತಿದ್ದು, ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸುವ ಕಾರ್ಯ ಮಾಡುತ್ತಿದ್ದೇನೆ. ಕಡೂರು ಕ್ಷೇತ್ರದ ಟಿಕೆಟ್ ನೀಡುವ ಬಗ್ಗೆ ಯಾವುದೇ ಭರವಸೆ
ನೀಡಿಲ್ಲ. ನನ್ನ ಕೆಲಸ ನಾನು ಮಾಡುತ್ತೇನೆ ಟಿಕೆಟ್ ನೀಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ