ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿರುವ ಪ್ರಧಾನಿ ನರೇಂದ್ರ ಮೋದಿ
Team Udayavani, Aug 8, 2020, 5:34 PM IST
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಹಲವೆಡೆ ಭೂಕುಸಿತ ಉಂಟಾಗಿದ್ದು, ಮಳೆಯ ಕಾರಣದಿಂದ ಸಾವು ನೋವುಗಳು ಉಂಟಾಗಿದೆ.
ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಮಾಹಿತಿಯನ್ನು ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ಸೋಮವಾರ ಪಡೆಯಲಿದ್ದಾರೆ. ಸಚಿವರಾದ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಮಳೆ ಹಾನಿ ಕುರಿತು ಮಾಹಿತಿ ನೀಡಿ ಸಚಿವರು ಪರಿಹಾರ ಕಾರ್ಯಗಳಿಗೆ ಮುಂಗಡ ನೆರವು ಕೊರಲಿದ್ದಾರೆ. ಸೋಮವಾರ ವಿಡಿಯೋ ಕಾನ್ಫರೆನ್ಸ್ ಇರುವ ಕಾರಣ ಸಚಿವರು ನಾಳೆ ಮಾಹಿತಿ ಸಂಗ್ರಹ ಮಾಡಲಿದ್ದಾರೆ.
ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಭೂಕುಸಿತ ಉಂಟಾಗಿ ಐವರು ನಾಪತ್ತೆಯಾಗಿದ್ದಾರೆ, ಚಿಕ್ಕಮಗಳೂರಿನಲ್ಲಿಯೂ ಮಳೆಯ ಕಾರಣದಿಂದ ಇದುವರೆಗೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ