Vishwa Karma ವಿಶ್ವಕರ್ಮರ ಸಾಂಪ್ರದಾಯಿಕ ಕೆಲಸಕ್ಕೆ ತಾಂತ್ರಿಕ ಬೆಂಬಲ: ಶೋಭಾ ಕರಂದ್ಲಾಜೆ

Team Udayavani, Sep 18, 2023, 5:59 PM IST

Vishwa Karma ವಿಶ್ವಕರ್ಮರ ಸಾಂಪ್ರದಾಯಿಕ ಕೆಲಸಕ್ಕೆ ತಾಂತ್ರಿಕ ಬೆಂಬಲ: ಶೋಭಾ ಕರಂದ್ಲಾಜೆ

ಬೆಂಗಳೂರು: ದೇಶಾದ್ಯಂತ ವಿಶ್ವಕರ್ಮರು ಮಾಡುವ ಸಾಂಪ್ರದಾಯಿಕ ಕೆಲಸಗಳಿಗೆ ತಾಂತ್ರಿಕ ಬೆಂಬಲವನ್ನು ನೀಡುವುದು ಪ್ರಧಾನಿಯವರ ದೂರದೃಷ್ಟಿಯಾಗಿದ್ದು ವಿಶ್ವಕರ್ಮ ಜನಾಂಗದವರು ಯೋಜನೆಯ ಗರಿಷ್ಟ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಎಂದು ತಿಳಿಸಿದರು.

ನಗರದ ನಿಮ್ಹಾನ್ಸ್ ಕನ್ವೆನ್ಷನ್‌ ಸೆಂಟರ್‌ನಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಯೋಜನೆಯು ಸಾಂಪ್ರದಾಯಿಕ ಕರಕುಶಲತೆಯಲ್ಲಿ ತೊಡಗಿರುವ ಜನರನ್ನು ಬೆಂಬಲಿಸುವ ಮತ್ತು ಕೌಶಲ್ಯಗೊಳಿಸುವ ಪ್ರಧಾನಮಂತ್ರಿಯವರ ಆಶಯದಿಂದ ಸ್ಫೂರ್ತಿ ಪಡೆದಿದೆ, ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸರ್ಕಾರವು 13,000 ಕೋಟಿ ರೂಗಳ ಸಂಪೂರ್ಣ ಧನಸಹಾಯ ನೀಡಲಿದೆ ಎಂದರು.

ಕುಶಲಕರ್ಮಿಗಳನ್ನು ಆರ್ಥಿಕವಾಗಿ ಬೆಂಬಲಿಸುವುದು ಮಾತ್ರವಲ್ಲದೆ ಸ್ಥಳೀಯ ಉತ್ಪನ್ನಗಳು, ಕಲೆ ಮತ್ತು ಕರಕುಶಲ ವಸ್ತುಗಳ ಮೂಲಕ ಪ್ರಾಚೀನ ಸಂಪ್ರದಾಯ, ಸಂಸ್ಕೃತಿ ಮತ್ತು ವೈವಿಧ್ಯಮಯ ಪರಂಪರೆಯನ್ನು ಜೀವಂತವಾಗಿರಿಸುವ ಹಾಗೂ ಪ್ರವರ್ಧಮಾನಕ್ಕೆ ತರುವ ಬಯಕೆಯೊಂದಿಗೆ ಈ ಉಪಕ್ರಮ ಕೈಕೊಳ್ಳಲಾಗಿದೆ ಎಂದು ತಿಳಿಸಿದರು.

ಪಿಎಂ ವಿಶ್ವಕರ್ಮ ಯೋಜನೆಯಡಿ, ಬಯೋಮೆಟ್ರಿಕ್‌ ಆಧಾರಿತ ಪಿಎಂ ವಿಶ್ವಕರ್ಮ ಪೋರ್ಟಲ್‌ ಬಳಸಿ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ವಿಶ್ವಕರ್ಮರು ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಅವರಿಗೆ ಪಿಎಂ ವಿಶ್ವಕರ್ಮ ಪ್ರಮಾಣಪತ್ರ ಮತ್ತು ಗುರುತಿನ ಚೀಟಿ ನೀಡಲಾಗುವುದು. ಜೊತೆಗೆ, ಮೂಲ ಮತ್ತು ಸುಧಾರಿತ ತರಬೇತಿಯನ್ನು ಒಳಗೊಂಡ ಕೌಶಲ್ಯ ಉನ್ನತೀಕರಣ, 15,000 ರೂ.ಗಳ ಟೂಲ್‌ಕಿಟ್‌ ಪ್ರೋತ್ಸಾಹಧನ, ಮೊದಲ ಕಂತಿನಲ್ಲಿ 1 ಲಕ್ಷ ರೂ.ಗಳವರೆಗೆ ಸಾಲ ಬೆಂಬಲ ಹಾಗೂ ಎರಡನೇ ಕಂತಿನಲ್ಲಿ 2 ಲಕ್ಷ ರೂ.ಗಳವರೆಗೆ ಶೇ.5 ರ ರಿಯಾಯಿತಿ ಬಡ್ಡಿದರದಲ್ಲಿ ಸಾಲ, ಡಿಜಿಟಲ್‌ ವಹಿವಾಟುಗಳಿಗೆ ಪ್ರೋತ್ಸಾಹ ಮತ್ತು ಮಾರ್ಕೆಟಿಂಗ್‌ ಬೆಂಬಲವನ್ನು ನೀಡಲಾಗುವುದು ಎಂದರು.

ಕರ್ನಾಟಕದಲ್ಲಿ ಬೆಂಗಳೂರು ಹೊರತುಪಡಿಸಿ ಮಂಗಳೂರು ಮತ್ತು ಹುಬ್ಬಳ್ಳಿಯ ಇತರ ಎರಡು ಜಿಲ್ಲೆಗಳಲ್ಲಿ ಈ ಯೋಜನೆಯನ್ನು ವಾಸ್ತವಿಕವಾಗಿ ಪ್ರಾರಂಭಿಸಲಾಗಿದೆ. ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಗೋಪಿನಾಥ ರೆಡ್ಡಿ, ಉದಯ ಗರುಡಾಚಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.