ಕೈದಿಗಳಿಗೆ ಭೈರಪ್ಪ, ಲೋಹಿಯಾ, ಕುವೆಂಪು ಸಾಹಿತ್ಯದ ಆಸಕ್ತಿ


Team Udayavani, Feb 10, 2019, 1:56 AM IST

16.jpg

ಬೆಂಗಳೂರು: ಕತ್ತಲೆಯಿಂದ ಬೆಳಕಿನೆಡೆಗೆ ಸಾಗಲು ಜೈಲು ಕೈದಿಗಳು ಪ್ರಯತ್ನಿಸುತ್ತಿದ್ದಾರೆ. ಪುಸ್ತಕ ಓದಿನ ಮೂಲಕ ಹೊಸ ಬದುಕು ಕಟ್ಟಿಕೊಳ್ಳುವುದರ ಜತೆಗೆ ನವ್ಯ ಚಿಂತನೆಯನ್ನು ಅಳವಡಿಸಿಕೊಳ್ಳಲು ಹವಣಿಸುತ್ತಿದ್ದಾರೆ.

ಆ ಹಿನ್ನೆಲೆಯಲ್ಲಿಯೇ ರಾಜ್ಯದ ಹಲವು ಜೈಲುಗಳಲ್ಲಿರುವ ಕೈದಿಗಳು ಇದೀಗ ಸ್ವಾತಂತ್ರ್ಯ ಹೋರಾಟಗಾರರ, ಚಿಂತಕರ ಬದುಕು ಬರಹದ ಪುಸ್ತಕಗಳು, ಜ್ಞಾನಪೀಠ ಪುರಸ್ಕೃತ ಸಾಹಿತಿಗಳ ಕೃತಿಗಳನ್ನು ನೀಡುವಂತೆ ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ಕೋರಿಕೆ ಸಲ್ಲಿಸಿದ್ದಾರೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ಡಾ.ರಾಮ್‌ ಮನೋಹರ್‌ ಲೋಹಿಯಾ, ಜ್ಞಾನಪೀಠ ಪುರಸ್ಕೃತ ರಾಷ್ಟ್ರಕವಿ ಕುವೆಂಪು, ಯು.ಆರ್‌.ಅನಂತಮೂರ್ತಿ, ಪೂರ್ಣಚಂದ್ರ ತೇಜಸ್ವಿ, ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ , ಕವಿ ಸಿದ್ಧಲಿಂಗಯ್ಯ ಸೇರಿ ಹಲವು ಹೆಸರಾಂತ ಸಾಹಿತಿಗಳ ಕೃತಿಗಳು ಕಾರಾಗೃಹಗಳ ಗ್ರಂಥ ಭಂಡಾರದಲ್ಲಿಲ್ಲ. ಆ ಹಿನ್ನೆಲೆಯಲ್ಲಿ ಅವುಗಳನ್ನು ಕಾರಾಗೃಹದ ಗ್ರಂಥಾಲಯಕ್ಕೆ ನೀಡಿ ಎಂದು ಪ್ರಾಧಿಕಾರಕ್ಕೆ ಮೌಖೀಕವಾಗಿ ಮನವಿ ಮಾಡಿದ್ದಾರೆ. ಜೈಲು ಕೈದಿಗಳಲ್ಲಿರುವ ಪುಸ್ತಕ ಓದಿನ ಆಸಕ್ತಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೈದಿಗಳು ಇಟ್ಟಿರುವ ಬೇಡಿಕೆ ಪೂರೈಸಲು ಮುಂದಾಗಿದೆ.

ತೇಜಸ್ವಿ ಪುಸ್ತಕ ನೀಡಿ: ಪ್ರಾಧಿಕಾರ ಈ ಹಿಂದೆ ಬೆಂಗಳೂರು, ಮೈಸೂರು ಮತ್ತು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ನಿಮ್ಮ ಮನೆಗೆ ಪುಸ್ತಕ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಆ ವೇಳೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಲವು ಕೈದಿಗಳು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಮತ್ತು ಡಾ.ರಾಮ್‌ ಮನೋಹರ್‌ ಲೋಹಿಯಾ ಅವರ ಪುಸ್ತಕಗಳಿಗೆ ಬೇಡಿಕೆ ಇಟ್ಟಿದ್ದರು. ಮೈಸೂರು ಮತ್ತು ಕಲಬುರಗಿ ಕಾರಾಗೃಹಗಳಲ್ಲಿ ಪ್ರಾಧಿಕಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜ್ಞಾನಪೀಠ ಪುರಸ್ಕೃತ ಸಾಹಿತಿಗಳಾದ ಕುವೆಂಪು, ಯು.ಆರ್‌.ಅನಂತ ಮೂರ್ತಿ ಪುಸ್ತಕಕ್ಕಾಗಿ ಮನವಿ ಮಾಡಿದ್ದರು. ಪೂರ್ಣಚಂದ್ರ ತೇಜಸ್ವಿ ಅವರ ಬರಹಗಳಿಗೆ ಮಾರು ಹೋಗಿರುವ ಇನ್ನೂ ಕೆಲವು ಕೈದಿಗಳು ತೇಜಸ್ವಿ ಅವರ ಕೃತಿಗಳಿಗೆ ಕೋರಿಕೆ ಸಲ್ಲಿಸಿದ್ದರು.

ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ ಅವರ ಪುಸ್ತಕಗಳತ್ತಲೂ ಕೈದಿಗಳು ಆಸಕ್ತಿ ತೋರಿದ್ದರು. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಮೊಬೈಲ್‌ ಗೀಳಿನಲ್ಲಿ ಮುಳುಗಿರುವ ಹಿನ್ನೆಲೆಯಲ್ಲಿ ಅಕ್ಷರ ಸಂಸ್ಕೃತಿ ಅಭಿರುಚಿ ಕಡಿಮೆಯಾಗುತ್ತಿದು,್ದ ಇಂತಹ ಸಂದರ್ಭದಲ್ಲಿ ಜೈಲು ಕೈದಿಗಳ ಹಂಬಲ ಖುಷಿ ಪಡುವ ವಿಚಾರವಾಗಿದೆ ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋಳಿ ಸಾಕಾಣಿಕೆ ಪುಸ್ತಕಕ್ಕೂ ಬೇಡಿಕೆ: ಜೈಲಿನಿಂದ ಹೊರ ಬಂದ ಮೇಲೆ ಸ್ವಾವಲಂಬನೆ ಜೀವನ ರೂಪಿಸಿಕೊಳ್ಳುವ ಹಂಬಲವನ್ನು ಹಲವು ಕೈದಿಗಳು ಹೊಂದಿದ್ದಾರೆ. ಆ ಹಿನ್ನೆಲೆಯಲ್ಲಿ ಕೃಷಿ ಜತೆಗೆ ಕೋಳಿ, ಹಂದಿ ಮತ್ತು ಮೊಲ ಸಾಕಾಣಿಕೆ ಸೇರಿ ಹಲವು ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಪುಸ್ತಕಗಳನ್ನೂ ನೀಡಿ ಎಂದು ವಿನಂತಿಸಿಕೊಂಡಿ ದ್ದಾರೆ. ಅಲ್ಲದೆ ಮಾನಸಿಕ ವ್ಯಾಧಿಯಿಂದ ಹೊರ ಬರುವ ಪುಸ್ತಕಗಳಿಗೂ ಆದ್ಯತೆ ನೀಡಿ ಎಂದು ಕೋರಿದ್ದಾರೆ.

ಜೈಲು ಕೈದಿಗಳಲ್ಲಿರುವ ಅಕ್ಷರಾಸಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿ, ಈಗಾಗಲೇ ಕೈದಿಗಳು ಕೇಳಿರುವ ಹಲವು ಪುಸ್ತಕಗಳು ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿವೆ. ಆದರೆ ಕೆಲವೇ ಕೆಲವು ಪುಸ್ತಕಗಳು ಪ್ರಾಧಿಕಾರದಲ್ಲಿಲ್ಲ. ಅಂತಹ ಪುಸ್ತಕಗಳನ್ನು ಖರೀದಿಸಿ ಆಯಾ ಕಾರಾಗೃಹದ ಗ್ರಂಥಾಲಯಗಳಿಗೆ ಸದ್ಯದಲ್ಲೆ ತಲುಪಿಸಲಾಗುವುದು ಎಂದು ಹೇಳಿದ್ದಾರೆ. ‘ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, ಕೈದಿಗಳಲ್ಲಿರುವ ಪುಸ್ತಕ ಓದುವ ಆಸಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೈಲು ಕೈದಿಗಳಲ್ಲಿ ಮತ್ತಷ್ಟು ಓದಿನ ಅಭಿರುಚಿ ಬೆಳೆಸಲು ರಾಜ್ಯದ ಹಲವು ಕೇಂದ್ರ ಕಾರಾಗೃಹಗಳಲ್ಲಿ ‘ನಿಮ್ಮ ಮನೆಗೆ ನಮ್ಮ ಪುಸ್ತಕ’ ಕಾರ್ಯಕ್ರಮವನ್ನು ಪ್ರಾಧಿಕಾರ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

1-ewrwe

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

1-rrr

ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.