ಕೋವಿಡ್ ಚಿಕಿತ್ಸೆಗೆ ಹಾಸಿಗೆ ನೀಡದ ಖಾಸಗಿ ಆಸ್ಪತ್ರೆ ಪರವಾನಗಿ ರದ್ದು: ಸಿಎಂಗೆ ಡಿಸಿಎಂ ಸಲಹೆ

Team Udayavani, Jul 13, 2020, 4:28 PM IST

ಕೋವಿಡ್ ಚಿಕಿತ್ಸೆಗೆ ಹಾಸಿಗೆ ನೀಡದ ಖಾಸಗಿ ಆಸ್ಪತ್ರೆ ಪರವಾನಗಿ ರದ್ದು: ಸಿಎಂಗೆ ಡಿಸಿಎಂ ಸಲಹೆ

ಬೆಂಗಳೂರು: ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಇದುವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು‌‌ ಜಿಲ್ಲಾಧಿಕಾರಿಗಳ ಜತೆ ಸೋಮವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಕಾಲಕ್ಕೆ ಸರಕಾರಕ್ಕೆ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳು ಹಾಸಿಗೆಗಳನ್ನು ಹಸ್ತಾಂತರ ಮಾಡದೇ ಇರುವುದರಿಂದ ಸಮಸ್ಯೆಯಾಗುತ್ತಿದೆ. ಅವರು ನಿರ್ಲಕ್ಷ್ಯ ಧೋರಣೆ ತಾಳುತ್ತಿದ್ದಾರೆಂದು ದೂರಿದರು.

ಸರಕಾರ ಸೇರಿ ಪ್ರತಿಯೊಬ್ಬರೂ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿರುವಾಗ ಕೆಲವರು ಮಾತ್ರ ಹಾಸಿಗೆಗಳನ್ನು ನೀಡದೇ ಸತಾಯಿಸುತ್ತಿರುವುದು ಸರಿಯಲ್ಲ. ಇವರಿಗೆ ಕಾನೂನಿನ ಬಿಸಿ ಮುಟ್ಟಿಸಬೇಕಾಗಿದೆ ಎಂದ ಅವರು, ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರಹಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ. ಅದರಲ್ಲೂ ಉಸಿರಾಟದ ತೊಂದರೆ, ಮತ್ತಿತರೆ ತುರ್ತು ಸಮಸ್ಯೆಗಳಿರುವ ಹಿರಿಯ ನಾಗರಿಕರಿಗೆ ಅಂಥ ಕಡೆ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂಬ ಅಂಶವನ್ನು ಡಿಸಿಎಂ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ವೈದ್ಯರ ಕೊರತೆ

ಬೆಂಗಳೂರಿನಂಥ ಮಹಾನಗರದಲ್ಲಿ ವೈದ್ಯರು, ನರ್ಸ್ ಗಳು ಹಾಗೂ ಪೂರಕ ಸಿಬ್ಬಂದಿಯ ಕೊರತೆ ಕಂಡುಬರುತ್ತಿದೆ. ಭಾರೀ ಪ್ರಮಾಣದಲ್ಲಿ ವೈದ್ಯರು ವಾಸ ಮಾಡುತ್ತಿರುವ ಈ ನಗರದಲ್ಲೇ ಈ ಸಮಸ್ಯೆ ಆಗಬಾರದಿತ್ತು. ಕೂಡಲೇ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿ ಇತ್ತ ಗಮನ ಹರಿಸಿ ತುರ್ತು ಕ್ರಮ ಕೈಗೊಂಡರೆ ಅನುಕೂಲವಾಗುತ್ತದೆ. ಇಲ್ಲವಾದರೆ ಸೋಂಕಿತರ ಸಂಖ್ಯೆ ಏಕಾಎಕಿ ಹೆಚ್ಚಾದರೆ ಮುಂದೆ ಸಮಸ್ಯೆಯಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಎಚ್ಚರಿಸಿದರು.

ಟೆಸ್ಟ್ ಫಲಿತಾಂಶ ಬೇಗ ಸಿಗಲಿ

ಸದ್ಯಕ್ಕೆ ಕೋವಿಡ್ ಟೆಸ್ಟ್  ಫಲಿತಾಂಶ ಬರುತ್ತಿರುವುದು ಕೊಂಚ ತಡವಾಗುತ್ತಿದೆ. ಪಶ್ಚಿಮ ವಿಭಾಗದಲ್ಲಿ ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಐಸಿಎಂಆರ್ ಪೋರ್ಟಲ್ ನಿಂದ ಬರುವ ಫಲಿತಾಂಶಗಳನ್ನು ಟ್ರ್ಯಾಕ್ ಮಾಡಿ ಆ ಪೋರ್ಟಲ್ಲಿನಿಂದಲೇ ಫಲಿತಾಂಶವನ್ನು ಪಡೆಯಬೇಕು. ಇದರಿಂದ ಸೋಂಕಿತರಿಗೆ ಬೇಗ ಮಾಹಿತಿ ತಿಳಿಯುತ್ತದೆ. ಈ ವಿಷಯವನ್ನು ಪಾಲಿಕೆ ಆಯುಕ್ತರ ಗಮನಕ್ಕೂ ತಂದಿದ್ದೇನೆ. ಹೀಗೆ ಮಾಡುವುದರಿಂದ ಸಮಯ ವ್ಯರ್ಥವಾಗುವುದು ತಪ್ಪುತ್ತದೆ. ಪಾಸಿಟಿವ್ ರೋಗಿಗಳನ್ನು ತಕ್ಷಣ ಸಂಪರ್ಕಿಸಿ ಅವರಿಗೆ ರಿಸಲ್ಟ್ ತಿಳಿಸುವ ಕೆಲಸ ಸುಲಭವಾಗುತ್ತದೆ. ಅವರನ್ನು ಕೋವಿಡ್ ಕೇರಿಗೆ ಶಿಫ್ಟ್ ಮಾಡಬೇಕೆ ಅಥವಾ ಆಸ್ಪತ್ರೆಗೆ ಕಳಿಸಬೇಕೆ ಎಂಬುದು ತಿಳಿಯುತ್ತದೆ ಎಂದು ಡಿಸಿಎಂ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಹೋಮ್ ಕೇರ್ ಹೆಲ್ಪ್ ಲೈನ್

ಬೆಂಗಳೂರು ತುಂಬಾ ದೊಡ್ಡ ನಗರ. ಹೀಗಾಗಿ ಹೋಮ್ ಕೇರಿನಲ್ಲಿರುವ ರೋಗಿಗಳಿಗೆ ಪ್ರತ್ಯೇಕ ಹೆಲ್ಪ್ ಲೈನ್ ಆರಂಭಿಸಬೇಕಾದ ಅಗತ್ಯವಿದೆ. ಇದು ತಕ್ಷಣ ಆರಂಭವಾದರೆ ಸೋಂಕಿತರನ್ನು ಹುಡುಕುವುದು, ಗುರುತಿಸುವುದು  ಸುಲಭ. ಇದು ವೇಗವಾಗಿ ಆಗುವುದರಿಂದ ಸೋಂಕು ಮತ್ತಷ್ಟು ಜನರಿಗೆ ಹರಡುವುದು ತಪ್ಪುತ್ತದೆ. ಜತೆಗೆ ಕೋವಿಡ್ ಸೌಲಭ್ಯಗಳ ಸ್ಟೇಟಸ್ ಅನ್ನು ತೋರಿಸುವ ವ್ಯವಸ್ಥೆಯೂ ಆಗಬೇಕು. ಎಲ್ಲಿ ಹಾಸಿಗೆಗಳಿವೆ, ಎಲ್ಲಿ ತುಂಬಿವೆ ಎಂಬ ಮಾಹಿತಿ ಜನರಿಗೆ ಕ್ಷಣಕ್ಷಣಕ್ಕೂ ಗೊತ್ತಾಗಬೇಕು. ಆ ನಿಟ್ಟಿನಲ್ಲಿ ಈ ಹೆಲ್ಪ್ ಲೈನ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಡಿಸಿಎಂ ಸಲಹೆ ನೀಡಿದರು.

ಕೋವಿಡ್ ರಹಿತ ರೋಗಿಗಳಿಗೆ ತೊಂದರೆ

ಕೆಲ ಆಸ್ಪತ್ರೆಗಳು ಕೋವಿಡ್ ರಹಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ. ಅದನ್ನು ನಿವಾರಿಸುವ ನಿಟ್ಟಿನಲ್ಲಿ ತೀವ್ರ ತುರ್ತುನಿಗಾ ಘಟಕಗಳನ್ನು ಸ್ಥಾಪಿಸುವ ಅಗತ್ಯವಿದೆ. ಪಶ್ಚಿಮ ವಿಭಾಗದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಈಗಾಗಲೇ ನಾವು 100 ಹಾಸಿಗೆಗಳ ವ್ಯವಸ್ಥೆಯನ್ನು ಹೊಸದಾಗಿ ಮಾಡುತ್ತಿದ್ದೇವೆ. ಅದೇ ರೀತಿ ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲೂ 50 ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತಿದೆ. ಇದರೊಂದಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲೂ 50 ಹಾಸಿಗೆಗಳ ತೀವ್ರ ತುರ್ತು ನಿಗಾ ವ್ಯವಸ್ಥೆ ಮಾಡಿದರೆ ಹೆಚ್ಚು ಅನುಕೂಲವಾಗುತ್ತದೆ. ಹಾಗೆಯೇ, ಆರೋಗ್ಯ ಕರ್ನಾಟಕ, ಆಯುಷ್ಮಾನ್ ಭಾರತ್ ಕಾರ್ಡುಗಳಿರುವ ರೋಗಿಗಳಿಗೆ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಸಿಗುವಂತಾಗಬೇಕು ಎಂದು ಡಿಸಿಎಂ ಅವರು ಮುಖ್ಯಮಂತ್ರಿಗೆ ಸಲಹೆ ಮಾಡಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.