ಸರಕಾರಿ ಶಾಲೆಗಳ ಮಕ್ಕಳ ಬಗ್ಗೆ ಖಾಸಗಿ ಶಾಲೆಗಳು ಚಿಂತಿಸಬೇಕು: ಅಶ್ವತ್ಥನಾರಾಯಣ

Team Udayavani, Mar 17, 2022, 3:46 PM IST

17school

ಬೆಂಗಳೂರು: ಸರಕಾರಿ ಶಾಲೆಗೆಳಲ್ಲಿ ಓದುತ್ತಿರುವ ಆರ್ಥಿಕ ದುರ್ಬಲ ವರ್ಗಗಳ ಮತ್ತು ಮೊದಲ ತಲೆಮಾರಿನ ವಿದ್ಯಾರ್ಥಿಗಳ ಸಬಲೀಕರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳೂ ಕಳಕಳಿಯಿಂದ ಯೋಚಿಸಿ, ಕೈಜೋಡಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ಹೇಳಿದ್ದಾರೆ.

ಮಲ್ಲೇಶ್ವರಂನ ವಿದ್ಯಾ ಮಂದಿರ ಶಿಕ್ಷಣ ಸಂಸ್ಥೆಯು ದತ್ತು ತೆಗೆದುಕೊಂಡಿರುವ ಕೋದಂಡರಾಮಪುರದ ಬಿಬಿಎಂಪಿ ಸರಕಾರಿ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾದಾನಕ್ಕಿಂತ ಹಿರಿದಾದ ಪುಣ್ಯದ ದಾನ ಇನ್ನೊಂದಿಲ್ಲ, ಈ ಸೇವೆಗೆ ಯಾರೂ ಬೆಲೆ ಕಟ್ಟುವುದು ಸಾಧ್ಯವಿಲ್ಲ ಎಂದರು.

ಮಲ್ಲೇಶ್ವರಂ ಎಂದರೆ ವಿದ್ಯಾ ಮಂದಿರ ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳು ಥಟ್ಟನೆ ನೆನಪಾಗುತ್ತವೆ. ಈ ಶಿಕ್ಷಣ ಸಂಸ್ಥೆಗಳಲ್ಲಿ ಓದಿದವರು ಇಂದು ಜಗತ್ತಿನ ನಾನಾ ದೇಶಗಳಲ್ಲಿ ನೆಲೆ ನಿಂತು, ಹೆಸರು ಗಳಿಸಿದ್ದಾರೆ. ಸರಕಾರಿ ಶಾಲೆಯ ಸಬಲೀಕರಣಕ್ಕೆ ವಿದ್ಯಾ ಮಂದಿರವು ಮುಂದಾಗಿರುವುದು ಶ್ಲಾಘನೀಯ ಸಂಗತಿ ಎಂದು ಹೇಳಿದರು.

ಸರಕಾರಿ ಶಾಲೆಗಳನ್ನು ಉಳಿಸಿಕೊಂಡು, ಅಲ್ಲಿ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕೆನ್ನುವುದು ಸರಕಾರದ ಕಳಕಳಿಯಾಗಿದೆ. ಮಲ್ಲೇಶ್ವರಂ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸರಕಾರಿ ಶಾಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗಿದ್ದು, ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಜತೆಗೆ ಶಿಕ್ಷಕರಿಗೆ ತರಬೇತಿ, ಪ್ರಯೋಗಾಲಯ ಎಲ್ಲವೂ ಇರುವಂತೆ ನೋಡಿಕೊಳ್ಳಲಾಗಿದೆ ಎಂದು ನುಡಿದರು.

ಬೆಂಗಳೂರು ಇಂದು ವಿಜ್ಞಾನ-ತಂತ್ರಜ್ಞಾನಗಳಲ್ಲಿ ಜಗದ್ವಿಖ್ಯಾತವಾಗಿದೆ. ಜತೆಗೆ, ಇಲ್ಲಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗಗಳಿವೆ. ಸರಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೂ ಇಂತಹ ಉಜ್ವಲ ಅವಕಾಶಗಳು ಸಿಗುವಂತೆ ನೋಡಿಕೊಳ್ಳಬೇಕಾದ್ದು ಸಮಾಜದ ಕರ್ತವ್ಯವಾಗಿದೆ. ಗುಣಮಟ್ಟದ ಶಿಕ್ಷಣದಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವೆಂದು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾಮಂದಿರ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಬಾಬು ದೊರೆಸ್ವಾಮಿ, ಸವಿತಾ, ಭಾರತಿ, ಹನುಮಂತರಾಜು, ಸುಬ್ಬರಾಜ ಅರಸ್ ಮುಂತಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕೋದಂಡರಾಮಪುರ ಸರಕಾರಿ ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆದವು. ನಟ ದಿವಂಗತ ಪುನಿತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಕಾರಣಕ್ಕೆ ಅವರ ಹಾಡುಗಳಿಗೆ ಸಾಮೂಹಿಕ ನೃತ್ಯ ಪ್ರದರ್ಶನ ನೀಡಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.