ರಾಜ್ಯದಲ್ಲಿ ಪ್ರಿಯಾಂಕಾ ಪ್ರಚಾರ ಇಲ್ಲ?
Team Udayavani, Feb 24, 2019, 12:39 AM IST
ಬೆಂಗಳೂರು: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆ ಅಲಂಕರಿಸಿ ರಾಜಕಾರಣಕ್ಕೆ ಕಾಲಿಟ್ಟಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಹೋದರಿ, ಪ್ರಿಯಾಂಕಾ ವಾದ್ರಾ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುವುದು ಅನುಮಾನ ಎಂದೇ ಹೇಳಲಾಗುತ್ತಿದೆ.
ಪ್ರಿಯಾಂಕಾ ವಾದ್ರಾರನ್ನು ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿಯಾಗಿ ನೇಮಿಸಿರುವ ರಾಹುಲ್ ಗಾಂಧಿ ಅವರು, ಬೇರೆ ರಾಜ್ಯಗಳಿಗೆ ಚುನಾವಣಾ ಪ್ರಚಾರಕ್ಕೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಿಯಾಂಕಾ ವಾದ್ರಾರನ್ನು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಕರೆತರಲು ರಾಜ್ಯ ನಾಯಕರು ರಾಹುಲ್ ಎದುರು ಮಾಡಿರುವ ಮನವಿಗೆ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ ಎನ್ನಲಾಗಿದೆ.
ರಾಜ್ಯದ ದೋಸ್ತಿ ಪಕ್ಷಗಳು ಜಂಟಿಯಾಗಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿರುವುದರಿಂದ ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿಯನ್ನು ಎದುರಿಸುವುದು ಕಷ್ಟವಾಗುವುದಿಲ್ಲ. ಆದರೆ, ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಪ್ರಬಲ ಪೈಪೋಟಿ ಇರುವುದರಿಂದ ಆ ಭಾಗದ ಜಿÇÉೆಗಳಲ್ಲಿ ಪ್ರಚಾರಕ್ಕೆ ಕರೆತಂದು ಕಮಲ ಪಕ್ಷಕ್ಕೆ ಶಾಕ್ ನೀಡಲು ರಾಜ್ಯ ಕಾಂಗ್ರೆಸ್ ನಾಯಕರು ಲೆಕ್ಕಾಚಾರ ಹಾಕಿಕೊಂಡಿದ್ದಾ ರೆ. ಸೋನಿಯಾ ಗಾಂಧಿಯವರ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವು ದಿಲ್ಲ ಎನ್ನಲಾಗುತ್ತಿದೆ. ಅವರು ಸ್ಪರ್ಧೆಯಿಂದ ಹಿಂದೆ ಸರಿದರೆ ಆ ಕ್ಷೇತ್ರದಲ್ಲಿ ಪ್ರಿಯಾಂಕಾ ಸ್ಪರ್ಧಿಸುವ ಸಾಧ್ಯತೆ ಇದೆ. ಅದೇ ಕಾರಣಕ್ಕೆ ಪ್ರಿಯಾಂಕಾ ವಾದ್ರಾ ಬೇರೆ ರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಿಲ್ಲ ಎಂದೇ ಹೇಳಲಾಗುತ್ತಿದೆ.
ರಾಹುಲ್ 3 ಬಾರಿ ಮಾತ್ರ ಪ್ರಚಾರ
ರಾಹುಲ್ ರಾಜ್ಯದಲ್ಲಿ ಕೇವಲ ಮೂರು ಬಾರಿ ಪ್ರಚಾರ ಕೈಗೊಳ್ಳುವ ಸಾಧ್ಯತೆ ಇದೆ. ಮಾ.9 ರಂದು ಹಾವೇರಿಯಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡುವ ಅವರು, ಮಾರ್ಚ್ ಕೊನೆಯ ವಾರದಲ್ಲಿ ಹೈದರಾಬಾದ್ ಕರ್ನಾಟಕದ ಕಲಬುರಗಿ ಅಥವಾ ಬಳ್ಳಾರಿಯಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಏಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ನಡೆ ಯುವ ಬೃಹತ್ ಸಮಾವೇಶದಲ್ಲಿ ರಾಜ್ಯದ ಅಂತಿಮ ಚುನಾವಣಾ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
40 ಜನ ಸ್ಟಾರ್ ಪ್ರಚಾರಕರು
ರಾಹುಲ್ ಗಾಂಧಿ ಸೇರಿ 40 ಸ್ಟಾರ್ ಪ್ರಚಾರಕರು ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಗುಲಾಮ ನಬಿ ಆಝಾದ್ ಸೇರಿ ಕೇಂದ್ರದ ಕಾಂಗ್ರೆಸ್ ನಾಯಕರು ಪ್ರಚಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ