ಪ್ರಿಯಾಂಕಾಗೆ ಪ್ರ. ಕಾರ್ಯದರ್ಶಿ ಹುದ್ದೆ?
Team Udayavani, Dec 16, 2017, 8:54 AM IST
ಬೆಂಗಳೂರು: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರುವ ಬೆನ್ನಲ್ಲೇ ಬಹುದಿನಗಳ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಗೆ ಮನ್ನಣೆ ಸಿಗುವ ಲಕ್ಷಣಗಳು ಕಾಣುತ್ತಿವೆ. ಗಾಂಧಿ ಕುಟುಂಬದ ಪ್ರಿಯಾಂಕಾ ಗಾಂಧಿಗೆ ಅಧಿಕೃತ ಪಕ್ಷದ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ರಾಹುಲ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಜನವರಿಯಲ್ಲಿ ಎಐಸಿಸಿ ಪುನಾರಚನೆ ಆಗಲಿದ್ದು, ಈ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆ ಇದೆ. ಅಲ್ಲದೆ, 2019ರ ಲೋಕಸಭೆ ಚುನಾವಣೆಗೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿಯೂ ಅವರನ್ನು ನೇಮಕ ಮಾಡಲಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.
ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕೀಯಕ್ಕೆ ಬರಬೇಕೆಂಬ ಬೇಡಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆಯುತ್ತಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತಂದು ಪಕ್ಷ ಸಂಘಟನೆ ಜವಾಬ್ದಾರಿ ಮತ್ತು ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸುವ ನಿರ್ಧಾರ ಕೈಗೊಳ್ಳುವ ಮೂಲಕ ಪಕ್ಷಕ್ಕೆ ಮತ್ತಷ್ಟು ಹುಮ್ಮಸ್ಸು ತುಂಬುವ ಕೆಲಸ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ