ಪಾಕ್ ಪರ ಘೋಷಣೆ: 3 ವಿದ್ಯಾರ್ಥಿಗಳು ಹಿಂಡಲಗಾಕ್ಕೆ
Team Udayavani, Feb 19, 2020, 3:04 AM IST
ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಹುಬ್ಬಳ್ಳಿ ಕೆಎಲ್ಇ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳನ್ನು ಮಂಗಳವಾರ ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.ಕಾಶ್ಮೀರ ಮೂಲದ ಅಮೀರ್ವೊಯಿದ್ದಿನ್, ಬಾಸಿತ್ ಆಸೀಫ್ ಸೋಫಿ ಹಾಗೂ ತಾಲೀಬ್ ಮಜೀದ್ರನ್ನು ಪೊಲೀಸ್ ಕಣ್ಗಾವಲಿನಲ್ಲಿ ಹುಬ್ಬಳ್ಳಿಯಿಂದ ಕರೆತಂದು ಹಿಂಡಲಗಾ ಜೈಲಿನಲ್ಲಿಡಲಾಗಿದೆ.
ಜೈಲಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಮೂವರೂ ವಿದ್ಯಾರ್ಥಿಗಳನ್ನು ಅಂಧೇರಿ ಕೋಣೆಯಲ್ಲಿ ಇರಿಸಲಾಗಿದೆ. ಸಹ ಕೈದಿಗಳಿಂದ ಹಲ್ಲೆ ಆಗುವ ಸಾಧ್ಯತೆ ಇರುವುದರಿಂದ ಪೊಲೀಸರು ಕಣ್ಗಾವಲು ಹಾಕಿದ್ದು, ಈ ಮೂವರನ್ನೂ ಒಂದೇ ಕೋಣೆ ಯಲ್ಲಿ ಇರಿಸಲಾಗಿದೆ.
ಹಿಂಡಲಗಾ ಜೈಲಿಗೆ ಪಾಲಕರು ಹಾಗೂ ಸ್ನೇಹಿತರು ಭೇಟಿ ಕೊಟ್ಟಿದ್ದಾರೆಂಬ ಮಾಹಿತಿ ಇದ್ದು, ನ್ಯಾಯಾಂಗ ವಶದಲ್ಲಿರುವ ಈ ಮೂವರು ವಿದ್ಯಾರ್ಥಿಗಳು ಜಾಮೀನು ಪಡೆಯಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಪೊಲೀಸರು ಇದನ್ನು ನಿರಾಕರಿಸಿದ್ದಾರೆ. ಸದ್ಯದ ಮಟ್ಟಿಗೆ ಇವರನ್ನು ಭೇಟಿ ಮಾಡಿಸಲು ಅವಕಾಶ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್