ಸಿಎಂ ಅವರಿಂದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಸಿಗಲಿದೆ: ಸಚಿವ ನಿರಾಣಿ ವಿಶ್ವಾಸ


Team Udayavani, Feb 21, 2021, 5:50 PM IST

programme held at bangalore

ಬೆಂಗಳೂರು: ಸಮಾಜದ  ಬಹುದಿನಗಳ ಬೇಡಿಕೆಯಂತೆ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನ್ಯಾಯ ಒದಗಿಸಿ ಕೊಡಲಿದ್ದು, ಎಲ್ಲರೂ ವಿಶ್ವಾಸವಿಡಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ್ ನಿರಾಣಿ  ವಿಶ್ವಾಸ ವ್ಯಕ್ತಪಡಿಸಿದರು.

ನಗರದ  ಅರಮನೆ ಮೈದಾನದಲ್ಲಿ  ನಡೆದ ಪಂಚಮಸಾಲಿ ಮಠ ಐತಿಹಾಸಿಕ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ನಾಯಕರಾದ ಯಡಿಯೂರಪ್ಪನವರು ಸಮುದಾಯಕ್ಕೆ ನ್ಯಾಯ ಒದಗಿಸಿಕೊಡುವ ಭರವಸೆ ಕೊಟ್ಟಿದ್ದಾರೆ. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕ ಎಂದು  ಬಣ್ಣಿಸಿದರು.

ಈಗಾಗಲೇ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದ್ದಾರೆ. ಆಯೋಗವು ಕೂಡ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಲಿದೆ ಎಂದರು.

ಸಮುದಾಯದ ಒತ್ತಾಸೆಯಂತೆ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಿಂದುಳಿದ ವರ್ಗವು ಘೋಷಿಸಿದ ನಂತರ ಕಾನೂನು ತೊಡಕಾಗಬಾರದೆಂಬ ಕಾರಣಕ್ಕಾಗಿ ಎಲ್ಲ ಪ್ರಕ್ರಿಯೆಗಳು ಮುಗಿದ ನಂತರ ಲಿಂಗಾಯತ ಪಂಚಮಸಾಲಿ  ಸಮಾಜವನ್ನು 2ಎಗೆ ಸೇರಿಸಬೇಕೆಂಬುದು ಅವರ ಉದ್ದೇಶವಾಗಿದೆ ಎಂದು ಹೇಳಿದರು.

ಲಿಂಗಾಯತ ಪಂಚಮಸಾಲಿ ಸಮುದಾಯವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಆರ್ಥಿಕವಾಗಿ ಹಿಂದುಳಿದಿದೆ ಎಂಬ ಒಂದೇ ಕಾರಣಕ್ಕೆ 2008ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಸಾಮಾನ್ಯವರ್ಗದಲ್ಲಿ ನಮ್ಮ ಸಮಾಜವನ್ನು 3ಬಿಗೆ ಸೇರ್ಪಡೆ ಮಾಡಿದರು. ಸಮುದಾಯದ ಒತ್ತಾಯದಂತೆ 2ಎ ವರ್ಗಕ್ಕೆ ಸೇರಿಸಲು ಸರ್ವ ಪ್ರಯತ್ನ ನಡೆಸಿದರೂ ಕೆಲವು ತಾಂತ್ರಿಕ ಕಾರಣದಿಂದ ಸಾಧ್ಯವಾಗಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಬೇಕೆಂದು ಮೂರು ದಶಕಗಳಿಂದಲೂ ಹೋರಾಟ ನಡೆಯುತ್ತಿದೆ. ಡಾ.ಹನುಮನಾಳ ಅವರಿಂದ ಆರಂಭವಾದ ಈ ಹೋರಾಟವನ್ನು ಇದೀಗ ಪರಮಪೂಜ್ಯ ಜಯಮೃತ್ಯುಂಜಯ ಮಹಾಸ್ವಾಮೀಜಿ ಹಾಗೂ  ವಚನಾನಂದ ಮಹಾಸ್ವಾಮಿಗಳು ಮುಂದುವೆರೆಸುತ್ತಿದ್ದು, ಅವರು ಸುಮಾರು 700 ಕಿ.ಮೀ ಪಾದಯಾತ್ರೆ ಮಾಡುವ  ಮೂಲಕ ಸಮಾಜದಲ್ಲಿ  ಜಾಗೃತಿ  ಉಂಟು ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಏಮ್ಸ್ ಬಂದರೆ ಉತ್ತಮ: ಸಚಿವ ಸುಧಾಕರ್

ಮುಂದಿನ ಪೀಳಿಗೆಯ ನಮ್ಮ ಮಕ್ಕಳಿಗೆ ಶೈಕ್ಷಣಿಕ ಮತ್ತು ಉದ್ಯೋಗಕ್ಕಾಗಿ ಅನುಕೂಲವಾಗಬೇಕೆಂಬ ಒಂದೇ ಕಾರಣಕ್ಕಾಗಿ ಈ ಬೃಹತ್ ಹೋರಾಟ ಆರಂಭವಾಗಿದೆಯೇ ಹೊರತು ನಾವೇನು ರಾಜಕೀಯ ಮೀಸಲಾತಿ ಕೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಅತಿದೊಡ್ಡ   ಸಮುದಾಯವಾದ ಲಿಂಗಾಯತ ಪಂಚಮಸಾಲಿ ಸಮುದಾಯವು  ಸ್ವಾತಂತ್ರ್ಯ ಹೋರಾಟದಲ್ಲಿ ತನ್ನದೇ ಆದ ಕೊಡುಗೆ ನೀಡಿದೆ. ವೀರರಾಣಿ  ಕಿತ್ತೂರು ಚನ್ನಮ್ಮ, ಬೆಳವಡಿ ಮಲ್ಲಮ್ಮ ಸೇರಿದಂತೆ ಅನೇಕರು ತಮ್ಮ ಜೀವವನ್ನೇ ತ್ಯಾಗ ಮಾಡಿದ್ದಾರೆ ಎಂದು ಸ್ಮರಿಸಿದರು.

ನಮ್ಮ ಸಮುದಾಯವು ಮೂಲತಃ ರೈತಾಪಿ ವರ್ಗಕ್ಕೆ ಸೇರಿದೆ. ಕೆಲವರು ಸರ್ಕಾರಿ, ಅರೆಸರ್ಕಾರಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬೆರಳಣಿಕೆಯಷ್ಟು  ಜನರು ಉದ್ಯಮಿದಾರರಾಗಿದ್ದು, 2ಎಗೆ ಸೇರ್ಪಡೆ ಮಾಡಬೇಕೆಂದು ನಡೆಸುತ್ತಿರುವ ಹೋರಾಟ ಕಾನೂನು ಬದ್ದವಾಗಿದೆ ಎಂದರು.

ಶ್ರೀಗಳು ನಡೆಸುತ್ತಿರುವ ಹೋರಾಟಕ್ಕೆ ಸಚಿವರು, ಶಾಸಕರು, ಇಡೀ ಸಮುದಾಯ ಅವರ ಬೆಂಬಲಕ್ಕೆ ನಿಂತಿದೆ. ನಮ್ಮ ಸಮುದಾಯದ ಬೇಡಿಕೆ ಈಡೇರಿಸಲು ತಾವು ಎಲ್ಲ ರೀತಿಯ ಹೋರಾಟ ಮಾಡುತ್ತೇವೆ ಎಂದು ನಿರಾಣಿ ಶಪಥ ಮಾಡಿದರು.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.