ಪ್ರಚಾರಕ್ಕಾಗಿ ಬಿಜೆಪಿಯಿಂದಜಾರ್ಜ್ ವಿರುದ್ಧ ಪ್ರತಿಭಟನೆ
Team Udayavani, Sep 21, 2017, 7:49 AM IST
ಬೆಂಗಳೂರು: ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ನಾಯಕರು ಎಷ್ಟೇ ದಿನ ಅಹೋರಾತ್ರಿ ಧರಣಿ ನಡೆಸಿದರೂ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯವರು ಜಾರ್ಜ್ ವಿರುದ್ಧ ಪ್ರಚಾರಕ್ಕಾಗಿ ಪ್ರತಿಭಟಿಸುತ್ತಿದ್ದಾರೆ. ಡಿ.ಕೆ. ರವಿ ಸಾವಿನ ಸಂದರ್ಭದಲ್ಲಿಯೂ ಅವರ ರಾಜೀನಾಮೆಗೆ ಆಗ್ರಹಿಸಿದ್ದರು. ಆಗ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ನಂತರ ಡಿ.ಕೆ.ರವಿ ಸಾವಿನ ಪ್ರಕರಣದಲ್ಲಿ ಜಾರ್ಜ್ ಪಾತ್ರವಿಲ್ಲ ಎಂದು ಗೊತ್ತಾಗಿದೆ.
ಈಗ ಡಿವೈಎಸ್‌ಪಿ ಗಣಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೊರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ. ಅದರಲ್ಲಿ ಜಾರ್ಜ್ ಪಾತ್ರದ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸಿಲ್ಲ. ರಾಜ್ಯ ಬಿಜೆಪಿಯವರು ಕಾರಣವಿಲ್ಲದೇ ಜಾರ್ಜ್ ವಿರುದ್ಧ ಹೋರಾಟ ಮಾಡುವ ಬದಲು ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಮೇಲಿನ ಪ್ರಕರಣಗಳಿಂದ ಮುಕ್ತರಾಗಿ ಬಂದು ಹೋರಾಡಲಿ. ಕೇಂದ್ರದಲ್ಲಿ ಅನೇಕ ಸಚಿವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಅವರಿಂದ ರಾಜೀನಾಮೆ ಪಡೆಯುವಂತೆ ಕೇಂದ್ರದ ಮೇಲೆ ಒತ್ತಡ ಹೇರಲಿ ಎಂದು ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ