
ರಾಜ್ಯದ ಎಲ್ಲಾ ಡೀಸಿ ಕಚೇರಿ ಮುಂದೆ ನಾಳೆ ಪ್ರತಿಭಟನೆ
Team Udayavani, Aug 25, 2019, 3:00 AM IST

ಬೆಂಗಳೂರು: ಕೇಂದ್ರ ಸರ್ಕಾರ ಒಂದು ಲಕ್ಷ ಕೋಟಿ ರೂ.ನೆರೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಆ.26ರಂದು ಬೆಳಗ್ಗೆ 10.30ಕ್ಕೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ನಿರ್ಧರಿಸಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯದಲ್ಲಿನ ನೆರೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. 4,394 ಹಳ್ಳಿಗಳು ಜಲಪ್ರಳಯಕ್ಕೆ ತುತ್ತಾಗಿದ್ದು, ಒಂದು ಲಕ್ಷ ಕೋಟಿ ರೂ.ಗೂ ಅಧಿಕ ನಷ್ಟ ಉಂಟಾಗಿದೆ. ಆದರೆ, ಕೇಂದ್ರ ಸರ್ಕಾರ ಈವರೆಗೂ ಒಂದು ರೂಪಾಯಿ ಪರಿಹಾರ ನೀಡಿಲ್ಲ.
ಕೇರಳ ಮತ್ತು ತಮಿಳುನಾಡಿಗೆ ಸಾವಿರಾರು ಕೋಟಿ ರೂ. ನೀಡುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ಹಣ ನೀಡದೆ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಬೆಳೆ ಮತ್ತು ಆಸ್ತಿ ನಷ್ಟದ ಬಗ್ಗೆ ವೈಜ್ಞಾನಿಕವಾಗಿ ಲೆಕ್ಕ ಹಾಕಿ ಸಹಾಯಹಸ್ತ ನೀಡುವುದು ಸರ್ಕಾರದ ಆದ್ಯ ಕರ್ತವ್ಯ. ಆದರೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 40 ಸಾವಿರ ಕೋಟಿ ರೂ.ನಷ್ಟ ಸಂಭವಿಸಿದೆ. 10 ಸಾವಿರ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ನೀಡುವ ನಿರೀಕ್ಷೆಯಿದೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಲಬಾದೆಗೆ ಹೆದರಿ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನ: ಮಹಿಳೆ ಸಾವು, ಆರು ಮಂದಿ ಗಂಭೀರ

ಫೆ. 17ರಂದು ಸಿಎಂ ಬೊಮ್ಮಾಯಿ ಬಚಾವೋ ಬಜೆಟ್: ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಮದುವೆ ಬಳಿಕ ಆಸ್ತಿ ಹಂಚಿಕೆ ಅಂದಿದ್ದಕ್ಕೆ ಒಡಹುಟ್ಟಿದ ಅಣ್ಣನನ್ನೇ ಹತ್ಯೆಗೈದ ತಮ್ಮ

ಹಳ್ಳಕ್ಕೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತ್ಯು… ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಒಂದೇ ವಾರದಲ್ಲಿ ಕಿತ್ತೋಯ್ತು; ಗ್ರಾಮಸ್ಥರ ಆಕ್ರೋಶ
MUST WATCH

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
