ಮೃತರ ಕುಟುಂಬಕ್ಕೆ ಪರಿಹಾರ ನೀಡಿ
Team Udayavani, Dec 21, 2019, 3:05 AM IST
ಬೆಂಗಳೂರು: ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರ ಗೋಲಿಬಾರ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದಲ್ಲಿಯೂ ಶಾಂತಿಯುತ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಪೊಲೀಸರು ಗೋಲಿಬಾರ್ ನಡೆಸಿ ಉಗ್ರ ಸ್ವರೂಪ ಪಡೆಯುವಂತೆ ಮಾಡಿದ್ದಾರೆ. ಇತಿಹಾಸ ತಜ್ಞ ರಾಮಚಂದ್ರ
ಗುಹಾ ಹಾಗೂ ಯೋಗೇಂದ್ರ ಯಾದವ್ ಅವರನ್ನು ಅವಮಾನಿಸಲಾಗಿದೆ. ಈ ಪ್ರಕರಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.
ಯಾವುದೇ ಕಾರಣಕ್ಕೂ ಪೊಲಿಸರು ತಾಳ್ಮೆ ಕಳೆದುಕೊಳ್ಳದೇ ಕಾನೂನು ರೀತಿ ಕಾರ್ಯ ನಿರ್ವಹಿಸಬೇಕು. ಪ್ರತಿಭಟನಾ ನಿರತರು ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ ಪಾಸ್ತಿಗೆ ಹಾನಿಯಾಗದಂತೆ ಶಾಂತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ
ರಾಷ್ಟ್ರಗೀತೆಯನ್ನು ನಮಗೆ ಮುತಾಲಿಕ್ ಹೇಳಿ ಕೊಡಬೇಕಾ?: ಜಮೀರ್ ಅಹ್ಮದ್ ಕಿಡಿ
ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ
ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?
ಸೈದ್ದಾಂತಿಕ ಬದ್ಧತೆಯ ಬಗ್ಗೆ ರಾಹುಲ್ ಗಾಂಧಿ ಬಿಡಿಸಿ ಹೇಳಬೇಕು: ಕುಮಾರಸ್ವಾಮಿ