ಬೊಮ್ಮಾಯಿ ಸಿಎಂ ಆಗಿರುವುದರಿಂದ ಪಿಎಸ್‌ಐ ಪ್ರಕರಣ ಬಯಲಿಗೆ ಬಂದಿದೆ: ಅಶೋಕ್‌

Team Udayavani, Jul 5, 2022, 6:58 PM IST

ಬೊಮ್ಮಾಯಿ ಸಿಎಂ ಆಗಿರುವುದರಿಂದ ಪಿಎಸ್‌ಐ ಪ್ರಕರಣ ಬಯಲಿಗೆ ಬಂದಿದೆ: ಅಶೋಕ್‌

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿರುವುದರಿಂದ ಪಿಎಸ್‌ಐ ನೇಮಕಾತಿ ಅಕ್ರಮ ಬಯಲಿಗೆ ಬಂದಿದೆ. ಹಿಂದೆ ಅನೇಕ ಅಕ್ರಮಗಳ ಬಗ್ಗೆ ಆರೋಪ ಬಂದಿದ್ದರೂ, ಅಂದಿನ ಸರ್ಕಾರಗಳು ಮುಚ್ಚಿ ಹಾಕಿದ್ದವು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಸ್‌ ಐ ಅಕ್ರಮ ನೇಮಕ ಕುರಿತು ಸಿಎಂ ಸ್ಪಷ್ಟವಾದ ನಿಲುವು ತೆಗೆದುಕೊಂಡಿದ್ದಾರೆ. ಹಿಂದೆ ಕೂಡ ಅನೇಕ ಸರ್ಕಾರದ ಮೇಲೆ ಆಪಾದನೆ ಬಂದಿತ್ತು. ಆದರೆ, ಅದನ್ನು ಮುಚ್ಚಿ ಹಾಕಿದ್ದರು.

ಬೊಮ್ಮಾಯಿಯವರು ಅಧಿಕಾರಿಗಳಿಗೆ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಹೀಗಾಗಿ ಎಡಿಜಿಪಿ ಬಂಧನವಾಗಿದೆ. ಬೇರೆ ಸರ್ಕಾರ ಇದ್ದಿದ್ದರೆ ಈ ಪ್ರಕರಣ ಹೊರಗೆ ಬರುತ್ತಿರಲಿಲ್ಲ ಎಂದು ಹೇಳಿದರು.

ವಿಪಕ್ಷ ನಾಯಕರು, ಕುಮಾರಸ್ವಾಮಿ ಕೂಡ ಎಡಿಜಿಪಿ ಹುದ್ದೆಯವರನ್ನೂ ಬಂಧನ ಮಾಡಿದ್ದಾರೆ ಎಂದು ಹೇಳುತ್ತಾರೆ. ಜೊತೆಗೆ ಟೀಕೆಯನ್ನೂ ಮಾಡಿದ್ದಾರೆ. ಈ ಪ್ರಕರಣದಲ್ಲಿ ಗೃಹಸಚಿವರ ರಾಜೀನಾಮೆ ಕೇಳಿದ್ದು ಹಾಸ್ಯಾಸ್ಪದ. ಯಾರು ತಪ್ಪು ಮಾಡಿದರೂ ಅವರಿಗೆ ಕಠಿಣ ಶಿಕ್ಷೆ ನೀಡುವ ಕೆಲಸ ಮಾಡಿದ್ದಾರೆ ಎಂದರು.

ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮದ್‌ ಮನೆ ಮೇಲೆ ಎಸಿಬಿ ದಾಳಿ ಮಾಡಿರುವುದನ್ನು ಸಮರ್ಥಿಸಿಕೊಂಡ ಅಶೋಕ್‌, ಹಿಂದೆಲ್ಲಾ ಬರೀ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಲಾಗುತ್ತಿದೆ ಅಂತ ಆರೋಪಿಸುತ್ತಿದ್ದರು. ಆದರೆ, ಈಗ ಜಮೀರ್‌ ಮನೆ ಮೇಲೆ ದಾಳಿ ಆದಾಗ ಕೂಗಾಡುತ್ತಿದ್ದಾರೆ. ರಾಹುಲ್‌ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಕರೆದಾಗ ಇಡೀ ದೇಶದಲ್ಲಿ ಪ್ರತಿಭಟನೆ ಮಾಡಿದರು. ರಾಹುಲ್‌ ಗಾಂಧಿ ಮೇಲೆ ಕ್ರಮ ಕೈಗೊಳ್ಳುವಾಗ, ಬೇರೆಯವರನ್ನು ಬಿಡುತ್ತಾರಾ ? ಹಿಂದೆ ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ದರು ಎಂದು ತಿರುಗಿ ನೋಡಲಿ. ತಪ್ಪು ಮಾಡಿದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದರು.

ಇನ್ನು ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಬಹಳ ನೋವಿನ ಸಂಗತಿ, ಚಂದ್ರಶೇಖರ ಗುರೂಜಿ ವಾಸ್ತು ಶಿಲ್ಪದ ಬಗ್ಗೆ ಪರಿಣಿತರು. ಬಡವರಿಗೂ ವಾಸ್ತು ಶಾಸ್ತ್ರದ ಬಗ್ಗೆ ಮಾಹಿತಿ ನೀಡುತ್ತಿದ್ದರು.ಅವರಿಗೆ ಯಾರೂ ವೈರಿಗಳಿರಲಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸ್‌ ಆಯುಕ್ತ ಲಾಬೂರಾಮ್‌ ಬಳಿ ಚರ್ಚೆ ಮಾಡಿದೆ. ಹೋಟೆಲ್‌ಗೆ ಬಂದವರು ಕಾಲಿಗೆ ಬಿದ್ದು ಬಳಿಕ ಕೃತ್ಯ ಮಾಡಿದ್ದಾರೆ. ಅವರಿಗೆ ಗೊತ್ತಿರುವವರೆ ಮಾಡಿರಬಹುದು. ಇದು ಪೂರ್ವ ನಿಯೋಜಿತ ಕೃತ್ಯ. ಈ ಘಟನೆಗೆ ವಿರೋಧ ವ್ಯಕ್ತಪಡಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದರು.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.