ಪಿಎಸ್‌ಐ ಅಕ್ರಮ ಪರೀಕ್ಷೆ: 11 ಕಡೆ ಇ.ಡಿ. ದಾಳಿ
Team Udayavani, Nov 11, 2022, 6:39 AM IST
ಬೆಂಗಳೂರು: ಪಿಎಸ್‌ಐ ಅಕ್ರಮ ಪರೀಕ್ಷೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಮೃತ್ ಪೌಲ್, ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಹಾಗೂ ಇತರ ಆರೋಪಿಗಳಿಗೆ ಸೇರಿದ ಮನೆ ಹಾಗೂ ಅವರ ಸಂಬಂಧಿಕರ ಮನೆಗಳು ಸಹಿತ 11 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ಶೋಧಿಸಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಆಗಮಿಸಿ ಸುಮಾರು 25 ಮಂದಿ ಅಧಿಕಾರಿಗಳು ತಡರಾತ್ರಿವರೆಗೂ ದಾಳಿ ನಡೆಸಿದರು. ಸಹಕಾರ ನಗರದಲ್ಲಿರುವ ಅಮೃತ್ ಪೌಲ್ ಮನೆ, ಚಿಕ್ಕಬಳ್ಳಾಪುರದಲ್ಲಿರುವ ತೋಟದ ಮನೆ, ಆಡುಗೋಡಿ ಪೊಲೀಸ್ ಕ್ವಾಟ್ರಸ್‌ನಲ್ಲಿರುವ ಡಿವೈಎಸ್ಪಿ ಶಾಂತಕುಮಾರ್ ಮನೆ, ನಾಗರಬಾವಿಯಲ್ಲಿರುವ ನೇಮಕಾತಿ ವಿಭಾಗದ ಸಿಬಂದಿ ಶ್ರೀನಿವಾಸ್ ಮನೆ, ಕಾಮಾಕ್ಷಿಪಾಳ್ಯದಲ್ಲಿ ಶ್ರೀಧರ್ ಮನೆ, ನಂದಿನಿ ಲೇಔಟ್‌ನ ಹರ್ಷನ ಮನೆ ಹಾಗೂ ಇತರ ಆರೋಪಿಗಳಿಗೆ ಸೇರಿದ ಬಸವೇಶ್ವರನಗರ, ರಾಜಾಜಿನಗರ ಹಾಗೂ ಇತರೆ ಕಡೆ ದಾಳಿ ನಡೆಸಲಾಗಿದೆ.
ದಾಳಿಯಲ್ಲಿ ಚಿನ್ನಾಭರಣ, ಸಣ್ಣ ಪ್ರಮಾಣದಲ್ಲಿ ನಗದು ಪತ್ತೆಯಾಗಿದೆ. ಜತೆಗೆ ಕೆಲ ದಾಖಲೆಗಳು ಸಿಕ್ಕಿವೆ ಎಂದು ಇ.ಡಿ. ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೇಂದ್ರ ಗುತ್ತಿಗೆ ಪ್ರಕಟಿಸಿದ ಬಿಸಿಸಿಐ: ಜಡೇಜಾಗೆ ಬೋನಸ್, ರಾಹುಲ್ ಗೆ ಭಾರೀ ಹಿನ್ನಡೆ
“ನೀವು ಯಾರನ್ನಾದರೂ ಡೇಟ್ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್
ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್, ಲಾಂಗ್ ಪತ್ತೆ
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ