ಪಿಎಸ್ಐ ಅಕ್ರಮ: ಸರಕಾರಕ್ಕೆ ನೋಟಿಸ್
Team Udayavani, Feb 3, 2023, 6:45 AM IST
ಬೆಂಗಳೂರು: ಭಾರೀ ಸಂಚಲನ ಉಂಟು ಮಾಡಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್’ (ಪಿಎಸ್ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಈವರೆಗೆ ದಾಖಲಾಗಿರುವ ಎಫ್ಐಆರ್ ಮತ್ತು ದೂರುಗಳ ತನಿಖಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸು ವಂತೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ರಾಜ್ಯ ಸರಕಾರ ಹಾಗೂ ಸಿಐಡಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಿರಿಯ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾ| ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಕೆಲವು ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಹಾಗೂ ಸಿಐಡಿಗೆ ನೋಟಿಸ್ ಜಾರಿಗೊಳಿಸಲು ಆದೇ ಶಿಸಿ, ಪ್ರಕರಣದ ಬಗ್ಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡಿತು.
ಅಲ್ಲದೆ, ಪಿಎಸ್ಐ ನೇಮ ಕಾತಿ ಹಗರಣ ಮತ್ತು ದಾಖ ಲಾದ ಪ್ರಕರಣಗಳಿಂದ ಸಂಬಂಧಿಸಿದ ಈವರೆಗಿನ ವಸ್ತುಸ್ಥಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆಯೂ ನ್ಯಾಯಪೀಠ ಸೂಚಿಸಿತು. ಅರ್ಜಿದಾರರ ಪರ ವಕೀಲ ಅಭಿಷೇಕ್ ಕುಮಾರ್ ವಾದ ಮಂಡಿಸಿದರು.
ಅರ್ಜಿದಾರರ ಮನವಿ :
ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೆ ವಿವಿಧೆಡೆ ದಾಖಲಾಗಿರುವ ಎಫ್ಐಆರ್ ಮತ್ತು ದೂರುಗಳಿಗೆ ಸಂಬಂಧಿಸಿದ ಸಂಪೂರ್ಣ ತನಿಖಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಿಐಡಿಗೆ ಆದೇಶಿಸಬೇಕು. ಪ್ರಕರಣದ ತನಿಖೆ ನಡೆಸಿರುವ ಸಿಐಡಿಗೆ ಪೊಲೀಸ್ ನೇಮಕಾತಿ ವಿಭಾ
ಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಮೃತ್ ಪೌಲ್ ಬಂಧನದ ಬಳಿಕದ ಸ್ಥಿತಿಗತಿಯ ಕುರಿತು ಮಾಹಿತಿ ನೀಡಲು ನಿರ್ದೇಶಿಸಬೇಕು. ನ್ಯಾಯಯುತ, ಸ್ವಾತಂತ್ರ ಮತ್ತು ಪಾರದರ್ಶಕವಾಗಿ ತನಿಖೆ ನಡೆಸಲು ರಾಜ್ಯ ಸರಕಾರ ಮತ್ತು ಸಿಐಡಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ