ಪಿಎಸ್ಐ ಮರು ಪರೀಕ್ಷೆ: ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್
Team Udayavani, Oct 10, 2022, 11:15 PM IST
ಬೆಂಗಳೂರು: ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ 545 ಪಿಎಸ್ಐ ಹುದ್ದೆಗಳಿಗೆ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ಸರಕಾರ ಹೊರಡಿಸಿದ್ದ ಆದೇಶಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಅ.19ರ ವರೆಗೆ ವಿಸ್ತರಿಸಿದೆ.
ಸರಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ| ಜಿ. ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ತಡೆ ವಿಸ್ತರಿಸಿ ಆದೇಶಿಸಿ, ವಿಚಾರಣೆಯನ್ನು ಮುಂದೂಡಿತು.
ನ್ಯಾಯಾಲಯದ ಮುಂದಿನ ಆದೇಶದವರೆಗೆ ಪಿಎಸ್ಐ ನೇಮಕಾತಿಗಾಗಿ ಮರು ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಬಾರದು ಎಂದು ಸರ್ಕಾರಕ್ಕೆ ಸೂಚಿಸಿ 2022ರ ಸೆ.28ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಅ.19ರವರೆಗೂ ವಿಸ್ತರಿಸಿ ವಿಭಾಗೀಯಪೀಠ ಇದೇ ವೇಳೆ ಆದೇಶಿಸಿತು.
ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಪಿಎಸ್ಐ ನೇಮಕಾತಿಗೆ ನಡೆಸಲಾಗಿದ್ದ ಲಿಖೀತ ಪರೀಕ್ಷೆ ರದ್ದುಪಡಿಸಿದ್ದ ಸರ್ಕಾರ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಆದೇಶಿಸಿತ್ತು. ಈ ಆದೇಶ ರದ್ದುಪಡಿಸುವಂತೆ ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿ 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ