ಪಿಯುಸಿ ಪರೀಕ್ಷೆ ಮೂವರು ಡಿಬಾರ್
Team Udayavani, Mar 10, 2019, 1:14 AM IST
ಬೆಂಗಳೂರು: ಶನಿವಾರ ನಡೆದ ದ್ವಿತೀಯ ಪಿಯುಸಿ ಸಂಖ್ಯಾಶಾಸ್ತ್ರ ಹಾಗೂ ರಾಜ್ಯಶಾಸ್ತ್ರ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ. ರಾಜ್ಯಶಾಸ್ತ್ರ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 1,84,643 ವಿದ್ಯಾರ್ಥಿಗಳಲ್ಲಿ 13,444 ವಿದ್ಯಾರ್ಥಿಗಳು ಗೈರಾಗಿದ್ದಾರೆ. ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿಯಲ್ಲಿ ತಲಾ ಒರ್ವ
ವಿದ್ಯಾರ್ಥಿ ಪರೀಕ್ಷಾ ಅಕ್ರಮದಡಿ ಡಿಬಾರ್ ಆಗಿದ್ದಾರೆ. ಸಂಖ್ಯಾಶಾಸ್ತ್ರ ಪರೀಕ್ಷೆಗೆ 44,646 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 889 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.