ಸೋಂಕು ನಿಯಂತ್ರಣಕ್ಕೆ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿದೆ: ಆರ್ ಅಶೋಕ್

Team Udayavani, May 20, 2021, 8:30 PM IST

ಸೋಂಕು ನಿಯಂತ್ರಣಕ್ಕೆ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿದೆ: ಆರ್ ಅಶೋಕ್

ಬೆಂಗಳೂರು : ಕಳೆದ ಕೆಲವೇ ತಿಂಗಳಲ್ಲಿ ಸರ್ಕಾರವು ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಆರೋಗ್ಯ ಸೌಲಭ್ಯಗಳನ್ನ ಗಣನೀಯ ಪ್ರಮಾಣದಲ್ಲಿ ಏರಿಕೆ ಮಾಡಿದ್ದು, ಸೋಂಕಿತರ ಜೀವ ರಕ್ಷಣೆಗಾಗಿ ಸಮರೋಪಾದಿಯಲ್ಲಿ ಕ್ರಮಗಳನ್ನ ಕೈಗೊಳ್ಳುತ್ತಿದ್ದೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು.

ಸರ್ಕಾರದ ಜನಪರ ಕಾರ್ಯಗಳ ಕುರಿತಂತೆ ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಿದ ಸಚಿವ ಅಶೋಕ ಅವರು,”ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಕೋವಿಡ್ ವಿರುದ್ಧ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿವೆ. ರಾಜ್ಯ ಸರ್ಕಾರ ಕಳೆದ ಕೆಲವೇ ತಿಂಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿನ ಸೌಲಭ್ಯಗಳನ್ನ ಗಣನೀಯ ಪ್ರಮಾಣದಲ್ಲಿ ಏರಿಕೆ ಮಾಡಿದ್ದು, ಶೇ.10-15ರಷ್ಟು ಹೆಚ್ಚಿಸಿದೆ. ಸಧ್ಯ 1970 ಆಕ್ಸಿಜೆನ್ ಹಾಸಿಗೆಗಳು, 1445 ಐಸಿಯೂ ಹಾಗೂ 2059 ವೆಂಟಿಲೇಟೆಡ್ ಹಾಸಿಗೆಗಳು ರೂಪಿಸಲಾಗಿದೆ ಎಂದರು

“ಈ ಮೊದಲು ಈ ಪ್ರಮಾಣದಲ್ಲಿ ಸೌಲಭ್ಯಗಳಿರಲಿಲ್ಲ. ಅತೀ ಕಡಿಮೆ ಸಮಯದಲ್ಲಿ ಈ ಪ್ರಮಾಣದಲ್ಲಿ ನಾವು ಸೌಕರ್ಯಗಳನ್ನ ರೂಪಿಸಿದ್ದೇವೆ. ಈಗಾಗಲೇ ಮೂರನೇ ಅಲೆಗೂ ಕೂಡಾ ಸರ್ಕಾರ ಅಗತ್ಯ ಸೌಕರ್ಯಗಳನ್ನ ಸಿದ್ಧಪಡಿಸುತ್ತಿದೆ. ಜಿಲ್ಲೆಗೆ ಒಂದರಂತೆ ಒಟ್ಟು 32 ಆಕ್ಸಿಜನ್ ಘಟಕಗಳನ್ನ ಸ್ಥಾಪನೆ ಮಾಡಲು ಸಿದ್ಧತೆ ನಡೆಯುತ್ತಿದೆ. ಪ್ರಸ್ತುತ 1015 ಮೆಟ್ರಿಕ್ ಟನ್ ನಷ್ಟು ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಲಭ್ಯವಿದೆ. ಈ ವಿಷಯದಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಮುತುವರ್ಜಿ ವಹಿಸಿ ಕೇಂದ್ರ ಸರ್ಕಾರವನ್ನ ಒಪ್ಪಿಸಿ ಇಲ್ಲೇ ಸಿದ್ಧಗೊಳ್ಳುವ ಆಕ್ಸಿಜನ್‍ನ್ನು ರಾಜ್ಯವೇ ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆಯೇ 45ಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ನೀಡುತ್ತಿರುವ ಲಸಿಕೆಯಲ್ಲಿ ಯಾವುದೇ ಅಭಾವ ಉಂಟಾಗಿಲ್ಲ. ಈಗಾಗಲೇ 10.9ಲಕ್ಷ ಕೋವ್ಯಾಕ್ಸಿನ್ ಡೋಸ್‍ಗಳು ರಾಜ್ಯಕ್ಕೆ ಬಂದಿವೆ,” ಎಂದರು.

ಇದನ್ನೂ ಓದಿ : ಉಚಿತ ಸೇವಾ ಅವಧಿ ವಿಸ್ತರಣೆ ಮಾಡಿದ ‘ಈ’ ಕಾರು ತಯಾರಕ ಕಂಪೆನಿಗಳು

ಆಂಬ್ಯೂಲೆನ್ಸ್ ಚಾಲಕರು ತಮ್ಮಿಷ್ಟದ ಸ್ಥಳಗಳಲ್ಲಿ ಕರ್ತವ್ಯ ನಿಯೋಜನೆಗೆ ಒತ್ತಡ ಹಾಗೂ ಲಾಬಿ ಮಾಡುತ್ತಿದ್ದಾರೆ. ಸೋಂಕಿತರ ಕುಟುಂಬದವರು ಕೇಳುವ ಸ್ಥಳಗಳಿಗೆ ತೆರಳದೆ ತೊಂದರೆ ಮಾಡುತ್ತಿದ್ದಾರೆ. ಇದನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಈ ನಿಟ್ಟಿನಲ್ಲಿ ದೂರುಗಳು ಕೇಳಿಬಂದರೆ ಅಂಥಹ ಚಾಲಕರ ಪರವಾನಗಿಯನ್ನ ಮೂರು ವರ್ಷಗಳ ಕಾಲ ರದ್ದು ಮಾಡಲಾಗುತ್ತದೆ”, ಎಂದು ಎಚ್ಚರಿಕೆ ನೀಡಿದರು.

ಮೂರನೇ ಅಲೆಗೆ ಸಂಬಂಧಿಸಿದಂತೆ ಸರ್ಕಾರ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಅದರಲ್ಲೂ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಹೀಗಾಗಿ ಎಲ್ಲಾ ತಾಲ್ಲೂಕುಗಳಲ್ಲಿಯೂ ಮಕ್ಕಳಿಗಾಗಿ ಆಸ್ಪತ್ರೆ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಈಗಾಗಲೇ ಅವರ ಪಿಡಿ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ’, ಎಂದು ತಿಳಿಸಿದರು.

ಕೋವಿಡ್ ಪರೀಕ್ಷೆಗಳನ್ನ ಸರ್ಕಾರ ಕಡಿಮೆ ಮಾಡಿದೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಉತ್ತರಿಸಿದ ಸಚಿವರು,”ಆ ರೀತಿಯಲ್ಲಿ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ. ಮೊದಲೆಲ್ಲ ಸಾರ್ವಜನಿಕ ಸ್ಥಳಗಳಲ್ಲಿ, ಕಮ್ಯೂನಿಟಿಗಳಲ್ಲಿ ಪರೀಕ್ಷೆ ಮಾಡಲಾಗುತ್ತಿತ್ತು. ಲಾಕ್ ಡೌನ್ ಕಾರಣ ಈಗ ಆ ಪರೀಕ್ಷೆಗಳು ನಡೆಯುತ್ತಿಲ್ಲ. ಮೊದಲಿನಂತೆ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರಿಗೆ, ಲಕ್ಷಣ ಉಳ್ಳವರಿಗೆ, ಗರ್ಭಿಣಿಯರಿಗೆ ಕಡ್ಡಾಯವಾಗಿ ಪರೀಕ್ಷೆ ಮಾಡಲಾಗುತ್ತಿದೆ”, ಎಂದರು.

ಇದನ್ನೂ ಓದಿ : ಕೋವಿಡ್ ಸ್ವ ಪರೀಕ್ಷೆ ಮಾಡಿಕೊಳ್ಳುವ ಕಿಟ್ ಗಳು 3-4 ದಿನಗಳಲ್ಲಿ ಲಭ್ಯ.? : ಐಸಿಎಂಆರ್

ವಿರೋಧ ಪಕ್ಷಗಳ ಆರೋಪಗಳ ಕುರಿತಂತೆ ಉತ್ತರ ನೀಡಿದ ಸಚಿವರು,”ಸರ್ಕಾರ ಕಾಲ, ಕಾಲಕ್ಕೆ ಸೂಕ್ತ ನಿರ್ಧಾರಗಳನ್ನ ತೆಗೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರ ಕೂಡಾ ಸಂಪೂರ್ಣವಾಗಿ ನಮ್ಮ ಬೆಂಬಲಕ್ಕಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ನಾಯಕತ್ವದಲ್ಲಿ ನಮ್ಮ ಸರ್ಕಾರ ಸಮರ್ಥವಾಗಿ ಸಂಕಷ್ಟವನ್ನ ಎದುರಿಸುತ್ತಿದ್ದೇವೆ. ಆದರೆ ವಿರೋಧ ಪಕ್ಷದವರು ರಾಜಕೀಯ ದುರುದ್ದೇಶದಿಂದ ಟೀಕೆಗಳನ್ನ ಮಾಡುತ್ತಿದ್ದಾರೆ. ಪ್ಯಾಕೇಜ್ ಘೋಷಣೆ ಮಾಡುವವರಿಗೂ ಮಾಡಿಲ್ಲ ಎಂದು ಆರ್ಭಟಿಸುತ್ತಿದ್ದರೂ. ಘೋಷಣೆ ಮಾಡಿದ ನಂತರ ಪಲಾನುಭವಿಗೆಳಿಗೆ ಈ ನೆರವು ಸಿಕ್ಕುವುದೇಯಿಲ್ಲ ಎನ್ನುತ್ತಿದ್ದಾರೆ. ಕಾರ್ಮಿಕ ಕಲ್ಯಾಣ ನಿಧಿಯಿಂದ ಹಣ ಬಳಸಿದ್ದರ ಬಗ್ಗೆ ಪ್ರಶ್ನಿಸುತ್ತಿದ್ದಾರೆ.

ಇದರಲ್ಲಿ ತಪ್ಪೇನಿದೆ. ಕಾರ್ಮಿಕರ ಹಣವನ್ನ ಕಾರ್ಮಿಕರಿಗಾಗಿ ಬಳಸುತ್ತಿದ್ದೇವೆ. ಸಿದ್ದರಾಮಯ್ಯ ಮತ್ತವರ ನಾಯಕರಿಗೆ ಇದೊಂದು ಪ್ರಶ್ನೆ ಕೇಳುತ್ತೇನೆ. ರೂ.100 ಕೋಟಿ ಹಣ ಅವರು ಸಂಗ್ರಹಿಸಿದ್ದು ಹೇಗೆ? ಅದೇನು ಕಾಂಗ್ರೆಸ್ ಪಕ್ಷದ ನಿಧಿಯೇ. ಅವರು ಕೇವಲ ಅಧಿಕಾರದ ಆಸೆಗಾಗಿ ಟೀಕೆಗಳನ್ನ ಮಾಡುತ್ತಾರೆ. ನಾವು ದೇಶ ಮತ್ತು ದೇಶವಾಸಿಗಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದೇವೆ”, ಎಂದು ತಿಳಿಸಿದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.