ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ
Team Udayavani, May 17, 2022, 3:12 PM IST
ಬೆಂಗಳೂರು: ರಾಜಕೀಯ ಬೆಳವಣಿಗೆಯಲ್ಲಿ ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ಬಿಜೆಪಿಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಿಸಲಾಗಿದೆ. ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾಗಲಿರುವ ಕಾರಣದಿಂದ ರಾಜೀನಾಮೆ ನೀಡಿದ್ದರು.
ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅವರು ಇಂದು ಸಂಜೆ ವಿಧಾನಸೌಧದ ಕೊಠಡಿ ಸಂಖ್ಯೆ 117 ರಲ್ಲಿ ಅಧಿಕಾರ ಸ್ವೀಕರಿಸಿದರು.
ಇದನ್ನೂ ಓದಿ:ಅಮರನಾಥ ಯಾತ್ರೆ ಭದ್ರತಾ ವ್ಯವಸ್ಥೆ: 2 ಮಹತ್ವದ ಸಭೆ ನಡೆಸಿದ ಅಮಿತ್ ಶಾ
ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ತಾಂತ್ರಿಕ ಅಡ್ಡಿ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಹಂಗಾಮಿ ಸಭಾಪತಿ ನೇಮಕಕ್ಕೆ ಬಿಜೆಪಿ ನಿರ್ಧರಿಸಿದೆ. ಹಂಗಾಮಿ ಸಭಾಪತಿ ನೇಮಕ ಸಂಬಂಧ ಸೋಮವಾರ ಸಂಜೆ ರಾಜ್ಯಪಾಲರ ಜೊತೆ ಮಾತುಕತೆ ನಡೆಸಲಾಗಿತ್ತು. ಇಂದು ಈ ಬಗ್ಗೆ ಮುಖ್ಯಮಂತ್ರಿಗಳು ಶಿಫಾರಸ್ಸು ಕಳುಹಿಸಿದ್ದು, ರಾಜ್ಯಪಾಲರು ಅನುಮೋದಿಸಿದ್ದಾರೆ.
ಏನಿದು ತಾಂತ್ರಿಕ ಅಡ್ಡಿ: ಮೇಲ್ಮೆನೆ ಸದಸ್ಯರು ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ಸಭಾಪತಿ ಅಥವಾ ಉಪ ಸಭಾಪತಿಗೆ ಸಲ್ಲಿಸಬೇಕು. ಆದರೆ ಹೊರಟ್ಟಿಯವರೇ ಸಭಾಪತಿಯಾದ ಕಾರಣ ಸಭಾಪತಿಗೆ ರಾಜೀನಾಮೆ ನೀಡಲು ಆಗುವುದಿಲ್ಲ. ಉಪ ಸಭಾಪತಿ ಸ್ಥಾನ ಖಾಲಿಯಿದೆ. ಹೀಗಾಗಿ ಹೊರಟ್ಟಿ ಬಿಜೆಪಿ ಸೇರ್ಪಡೆ ತಡವಾಗುತ್ತಿದೆ.
ಹಂಗಾಮಿ ಸಭಾಪತಿ ನೇಮಕದ ಬಳಿಕ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕಾರವಾಗಲಿದ್ದು, ಬಳಿಕ ಇಂದು ಸಂಜೆ ಅಥವಾ ನಾಳೆ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪದವಿ ಕಾಲೇಜು ಶುಲ್ಕ ನಿಗದಿ ಮಾಡಿದ ಕಾಲೇಜು ಶಿಕ್ಷಣ ಇಲಾಖೆ
ಅಗ್ನಿಪಥ ಯೋಜನೆ ಜಾರಿ ವಿರೋಧಿಸಿ ರಾಜಭವನ ಮುತ್ತಿಗೆಗೆ ಯುವ ಕಾಂಗ್ರೆಸ್ ಯತ್ನ
ಪೊಲೀಸ್ ಕಾನ್ಸ್ಟೇಬಲ್ : ಕನಿಷ್ಠ ಸೇವೆ 6ರಿಂದ 5 ವರ್ಷಕ್ಕೆ ಇಳಿಕೆ: ಡಿಸಿಪಿ ನಿಶಾ ಜೇಮ್ಸ್
ರಾಜ್ಯದಲ್ಲಿಂದು 816 ಕೋವಿಡ್ ಪಾಸಿಟಿವ್ : ಸಕ್ರಿಯ ಪ್ರಕರಣ 5,180
ಹೊಸಪೇಟೆ: ಏಕಾಏಕಿ ಹೊತ್ತಿ ಉರಿದ ಕಾರು ; ಪ್ರಯಾಣಿಕರು ಪಾರು