ಹಿಜಾಬ್‌ ಪ್ರಕರಣ: ಅಂತಾರಾಷ್ಟ್ರೀಯ ಷಡ್ಯಂತ್ರ: ತನಿಖೆಗೆ ರಘುಪತಿ ಭಟ್‌ ಆಗ್ರಹ

Team Udayavani, Mar 24, 2022, 7:35 AM IST

ಹಿಜಾಬ್‌ ಪ್ರಕರಣ: ಅಂತಾರಾಷ್ಟ್ರೀಯ ಷಡ್ಯಂತ್ರ: ತನಿಖೆಗೆ ರಘುಪತಿ ಭಟ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌ ಪ್ರಕರಣದ ಹಿಂದೆ ದೊಡ್ಡ ಮಟ್ಟದ ಅಂತಾರಾಷ್ಟ್ರೀಯ ಸಂಚಿದೆ. ಈ ಬಗ್ಗೆ ವಿಸ್ತೃತ ತನಿಖೆ ನಡೆಯಬೇಕು ಎಂದು ಬಿಜೆಪಿ ಶಾಸಕ ಕೆ. ರಘುಪತಿ ಭಟ್‌ ಆಗ್ರಹಿಸಿದರು.

ವಿಧಾನಸಭೆಯಲ್ಲಿ ನಿಯಮ 69ರ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಂದು ಅತ್ಯಾಚಾರ ಪ್ರಕರಣದ ವಿರುದ್ಧ ಎಬಿವಿಪಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಆ ಪ್ರತಿಭಟನೆಯಲ್ಲಿ ಕೆಲವು ಮುಸ್ಲಿಂ ಯುವತಿಯವರು ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಒಂದು ಮತೀಯ ಸಂಘಟನೆ ಸಿಎಫ್ಐ ಮಕ್ಕಳ ಪಾಲಕರನ್ನು ಸಂಪರ್ಕಿಸಿ ತಮ್ಮ ಮಕ್ಕಳಿಗೆ ಹಿಜಾಬ್‌ ಕಡ್ಡಾಯವಾಗಿ ಹಾಕಿಕೊಳ್ಳಲು ಅವಕಾಶ ನೀಡುವಂತೆ ಒತ್ತಡ ಹೇರುವಂತೆ ಮಾಡಿದ್ದರು. ಅವರ ಒತ್ತಾಯದಂತೆ 12 ಮಕ್ಕಳು ಹಿಜಾಬ್‌ ಹಾಕಲು ಅವಕಾಶ ನೀಡಬೇಕು ಎಂದು ಪ್ರಾಂಶುಪಾಲರಿಗೆ ಮನವಿ ಮಾಡಿದ್ದರು. ಅವರ ಮನವೊಲಿಕೆ ಪ್ರಯತ್ನ ನಡೆಸಿದ ಅನಂತರ ಆರು ಮಕ್ಕಳು ಹಿಜಾಬ್‌ ಇಲ್ಲದೆ ಬರಲು ಒಪ್ಪಿದ್ದರು ಎಂದರು.

ಸಿಎಫ್ಐ ಸಂಘಟನೆ ಕುಮ್ಮಕ್ಕು
ಆರು ಜನ ಮಕ್ಕಳು ಹಿಜಾಬ್‌ ಹಾಕಲು ಅವಕಾಶ ನೀಡುವಂತೆ ಲಿಖಿತವಾಗಿ ಬೇಡಿಕೆ ಸಲ್ಲಿಸಿದ್ದರು. ಅವರ ಮನವೊಲಿಸಲು ಮುಸ್ಲಿಂ ಮುಖಂಡರು ಪ್ರಯತ್ನ ನಡೆಸಿದ್ದರು. ಆದರೂ, ಆರು ಮಕ್ಕಳು ಹಾಗೂ ಅವರ ಕುಟುಂಬದವರು ಯಾರ ಮಾತನ್ನೂ ಕೇಳಿಲ್ಲ. ಸಿಎಫ್ಐನವರು ಉಡುಪಿಯಲ್ಲಿ ಯಶಸ್ವಿಯಾಗದಿ¨ªಾಗ ಕುಂದಾಪುರಕ್ಕೆ ಹೋಗಿ ಅಲ್ಲಿನ ಪ್ರಥಮ ದರ್ಜೆ ಕಾಲೇಜಿನ ಅಲ್ಲಿನ ಹೆಣ್ಣುಮಕ್ಕಳಿಗೆ ಹಿಜಾಬ್‌ ಹಾಕಿಕೊಂಡು ಬರಲು ಕುಮ್ಮಕ್ಕು ನೀಡಿದ್ದರು. ಅದನ್ನು ನೋಡಿದ ಹಿಂದೂ ಯುವಕರು ತಮಗೂ ಕೇಸರಿ ಶಾಲು ಹಾಕಿಕೊಳ್ಳಲು ಅವಕಾಶ ನೀಡಬೇಕೆಂದು ಕೋರಿದರು. ಅವರೇ ಶಾಲು ಹಾಕಿಕೊಂಡು ಕಾಲೇಜಿಗೆ ಬಂದರು. ಅನಂತರ ಅದು ಎಲ್ಲ ಕಡೆ ಹರಡಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಯಿತು ಎಂದರು.

ಮಣಿಪಾಲದಲ್ಲಿ ನಡೆದಿತ್ತು ತರಬೇತಿ
12 ಮಂದಿ ವಿದ್ಯಾರ್ಥಿನಿಯರಿಗೆ ಸಿಎಫ್ಐನವರು ಮಣಿಪಾಲದ ಬಳಿ ತರಬೇತಿ ನೀಡಿದ್ದಾರೆ ಎಂದು ಅದರಲ್ಲಿ ವಾಪಸ್‌ ಬಂದ ಆರು ಜನ ವಿದ್ಯಾರ್ಥಿನಿಯರು ಪಾಲಕರ ಮುಂದೆ ಹೇಳಿದ್ದಾರೆ. ಆ ವಿದ್ಯಾರ್ಥಿನಿಯರೇ ತರಬೇತಿ ಪಡೆದ ಅನಂತರ ತಮ್ಮ ಪಕ್ಕದಲ್ಲಿಯೇ ಕುಳಿತುಕೊಳ್ಳುವ ಹಿಂದೂ ಯುವತಿಯರ ಮೇಲೆ ದ್ವೇಷ ಹುಟ್ಟಲು ಕಾರಣವಾಗಿತ್ತು ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರ ಬಳಿ ಹೆಚ್ಚಿನ ಮಾಹಿತಿ ಇದೆ ಎಂದು ರಘುಪತಿ ಭಟ್‌ ತಿಳಿಸಿದರು.

ಹೊರಗಿನವರಿಂದ ಗಲಾಟೆ
ಉಡುಪಿ ಜಿಲ್ಲೆಯಲ್ಲಿ ಯಾವಾಗಲೂ ಸೌಹಾರ್ದತೆ ಇದೆ. ಹಿಜಾಬ್‌ ವಿಚಾರದಲ್ಲಿಯೂ ಸ್ಥಳೀಯರು ಯಾರೂ ಗಲಾಟೆ ಮಾಡಿಲ್ಲ. ಹೊರಗಿನವರು ಬಂದು ಗಲಾಟೆ ಮಾಡಿದ್ದಾರೆ. ಈಗಲೂ ಉಡುಪಿಯಲ್ಲಿ ಹಿಂದೂ-ಮುಸ್ಲಿಮರು ಅನ್ಯೋನ್ಯವಾಗಿಯೇ ಇದ್ದೇವೆ. ಹಿಜಾಬ್‌ ವಿಚಾರದ ಹಿಂದೆ ಅಂತಾರಾಷ್ಟ್ರೀಯ ಷಡ್ಯಂತ್ರವಿದೆ. ಈ ಬಗ್ಗೆ ದೊಡ್ಡ ಮಟ್ಟದ ತನಿಖೆ ನಡೆಯಬೇಕು ಎಂದು ರಘುಪತಿ ಭಟ್‌ ಆಗ್ರಹಿಸಿದರು.

ಆರ್ಕಿಟೆಕ್ಟ್ ಗಳಿಗೆ ಅವಕಾಶ ಕೊಡುವಂತೆ ಆಗ್ರಹ
ಬೆಂಗಳೂರು: ಭೂ ಪರಿವರ್ತಿತ ಜಮೀನುಗಳಲ್ಲಿ 1 ಎಕ್ರೆವರೆಗೆ 11ಎ ನಕ್ಷೆಗಾಗಿ ಬಡಾವಣೆಗಾಗಿ ವಿನ್ಯಾಸ ಅನುಮೋದನೆ ಪಡೆಯಲು ಈ ಹಿಂದಿನಂತೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಜಿ.ಪಂ.ನಿಂದ ನೇಮಿಸಲ್ಪಟ್ಟ ಸ್ಥಳೀಯ ನೊಂದಾಯಿತ ಆರ್ಕಿಟೆಕ್ಟ್ ಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಕೆ. ರಘುಪತಿ ಭಟ್‌ ಅವರು ಸದನದಲ್ಲಿ ಸರಕಾರವನ್ನು ಆಗ್ರಹಿಸಿದರು.

ಪ್ರಸ್ತುತ ಸ್ಥಳೀಯ ಪ್ರಾಧಿಕಾರವು ಅನುಮತಿ ನೀಡುವ ಮೊದಲು ಪಟ್ಟಣ ಮತ್ತು ಗ್ರಾಮಾಂತರ ಯೋಜನ ನಿರ್ದೇಶಕರ ಅಥವಾ ನಗರ ಯೋಜನೆ ಸಹಾಯಕ ನಿರ್ದೇಶಕರ ಪೂರ್ವಾನುಮೋದನೆ ಪಡೆಯಬೇಕೆಂದು ಹೊರಡಿಸಿರುವ ಅಧಿಸೂಚನೆಯಿಂದ ಸಾರ್ವಜನಿಕ ಸೇವೆಗಳು ವಿಳಂಬವಾಗುತ್ತಿದೆ. ನೂರಾರು ಕಡತಗಳು ಬಾಕಿ ಇರುವಂತಾಗಿದ್ದು, ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದರು.

ಗೋಡೆ ಬರೆಹ - ಪ್ರಸ್ತಾವ
ಉಡುಪಿ: ದೇವಸ್ಥಾನಗಳ ಉತ್ಸವ, ಜಾತ್ರೆ ಸಂದರ್ಭದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬಾರದು ಎಂಬಂತಹ ಭಿತ್ತಿ ಪತ್ರಗಳನ್ನು ಹಾಕಿರುವವರ ಮೇಲೆ ಕ್ರಮ ಕೈಗೊಳ್ಳುವ ಕುರಿತು ಸದನದಲ್ಲಿ ಕಾಂಗ್ರೆಸ್‌ ಶಾಸಕರು ವಿಷಯ ಪ್ರಸ್ತಾವಿಸಿದಾಗ ಹಿಜಾಬ್‌ ಪರವಾದ ಗೋಡೆ ಬರೆಹ, ಭಿತ್ತಿ ಪತ್ರಗಳನ್ನು ಹಾಕಿರುವವರ ಮೇಲೂ ಕ್ರಮ ಕೈಗೊಳ್ಳುವ ಬಗ್ಗೆ ಸದನದಲ್ಲಿ ಶಾಸಕ ರಘುಪತಿ ಭಟ್‌ ಧ್ವನಿಯೆತ್ತಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.