ಲೋಕಾ ಚುನಾವಣೆಯಲ್ಲಿ 25 ಸ್ಥಾನ ಗೆಲ್ಲಲು ಗುರಿ

Team Udayavani, Feb 22, 2019, 1:45 AM IST

7.jpg

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ 25 ಸ್ಥಾನ ಗೆಲ್ಲುವಂತೆ ಗುರಿ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, 25 ಸ್ಥಾನ ಗೆದ್ದರೆ ಮರುದಿನ ರಾಜ್ಯದಲ್ಲಿ ಮೈತ್ರಿ ಸರ್ಕಾರವೇ ಇರುವುದಿಲ್ಲ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ ಎನ್ನಲಾಗಿದೆ.

ಯಲಹಂಕದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ರಾತ್ರಿ ರಾಜ್ಯ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರೊಂದಿಗೆ ಸಭೆ ನಡೆಸಿದ ಅವರು, ಲೋಕ ಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಕೆಲ ನಿರ್ದೇಶನ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದರೂ ಆತಂಕ ಪಡುವ ಅಗತ್ಯವಿಲ್ಲ. ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೆ ಬಿಜೆಪಿಗೆ ಅನುಕೂಲವಾಗುವ ಅಂಶಗಳೇ ಹೆಚ್ಚಾಗಿವೆ. ಪಕ್ಷದ ಸಂಘಟನೆ ಉತ್ತಮವಾಗಿದ್ದು, ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದರು.

ಭಿಕ್ಷೆ ಬೇಡುವುದರಿಂದ, ಒತ್ತಡ ಹೇರುವುದರಿಂದ ಸರ್ಕಾರ ರಚಿಸಲು ಸಾಧ್ಯವಿಲ್ಲ. ಲೋಕಸಭಾ ಚುನಾವಣೆ ಯಲ್ಲಿ 25 ಸ್ಥಾನ ಗೆದ್ದರೆ ಮರುದಿನ ರಾಜ್ಯದಲ್ಲಿ ಮೈತ್ರಿ ಸರ್ಕಾರವಿರುವುದಿಲ್ಲ. ಹಾಗಾಗಿ, ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಶ್ರಮಿಸಬೇಕು. ಅಭ್ಯರ್ಥಿ ಯಾರೇ ಇದ್ದರೂ ಪಕ್ಷದ ಗೆಲುವಿಗೆ ಶಾಸಕರು ಶ್ರಮ ವಹಿಸಬೇಕು. ಶಾಸಕರು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸದಿದ್ದರೆ ಒಂದೊಮ್ಮೆ ಆಗಸ್ಟ್‌ನಲ್ಲಿ ವಿಧಾನಸಭೆ ಚುನಾವಣೆ ಎದುರಾದರೆ ಸಮಸ್ಯೆಗೆ ಸಿಲುಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು ಎನ್ನಲಾಗಿದೆ.

ವಂಶಾಧಾರಿತ ಪಕ್ಷವಲ್ಲ: ಬಿಜೆಪಿ ವಂಶಾಧಾರಿತ ಪಕ್ಷವಲ್ಲ.ರಾಜ್ಯದ ಪ್ರಮುಖ ನಾಯಕರ ತಂದೆಯ ಹೆಸರು ಎಷ್ಟು ಮಂದಿಗೆ ಗೊತ್ತು ಹೇಳಿ. ಪಕ್ಷದಲ್ಲಿ ಎಲ್ಲರೂ ವೈಯಕ್ತಿಕ ಶ್ರಮ, ಹೋರಾಟ, ಸಂಘಟನೆಯಿಂದ ಈ ಹಂತಕ್ಕೆ ಬಂದಿದ್ದಾರೆ. ಹಾಗಾಗಿ ಸಂಘಟನೆಗೆ ಒತ್ತು ನೀಡಬೇಕು ಎಂದು ಕಿವಿಮಾತು ಹೇಳಿದರು. ಪ್ರತಿ ಚುನಾವಣೆಯಲ್ಲೂ ಬೂತ್‌ಮಟ್ಟದ ಕಾರ್ಯಕರ್ತರ ಪರಿಶ್ರಮದಿಂದ ಗೆಲ್ಲುತ್ತಿದ್ದೇವೆ. ಈ ಬಾರಿಯೂ ಅದೇ ಕಾರ್ಯ ಮುಂದುವರಿಸಬೇಕು. ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಯಡಿಯೂರಪ್ಪ, ಅನಂತ ಕುಮಾರ್‌ ಅವರ ವಿಶೇಷ ಶ್ರಮವಿದೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಪಕ್ಷಕ್ಕೆ ಉತ್ತಮ ಫ‌ಲಿತಾಂಶವೇ ಬಂದಿದೆ. ಹಾಗಾಗಿ ಈ ಬಾರಿಯೂ ಹೆಚ್ಚು ಸ್ಥಾನ ಗೆಲ್ಲಲು ಶ್ರಮಿಸಬೇಕೆಂದು ಕರೆ ನೀಡಿದರು ಎಂದು ರಾಜ್ಯ ನಾಯಕರೊಬ್ಬರು ತಿಳಿಸಿದರು

ರಾಹುಲ್‌ ಬಾಬಾಗೆ ಗಣಿತ ಗೊತ್ತಿಲ್ಲ: ಲೇವಡಿ

ಬೆಂಗಳೂರು: ಕೇಂದ್ರ ಸರ್ಕಾರವು ಬಡ, ಮಧ್ಯಮ ರೈತರಿಗೆ ವಾರ್ಷಿಕ 6000 ರೂ.ನೆರವು ನೀಡುವ ಯೋಜನೆ ಬಗ್ಗೆ ರಾಹುಲ್‌ ಗಾಂಧಿ ಅಪಹಾಸ್ಯ ಮಾಡಿದ್ದಾರೆ. ಕರ್ನಾಟಕದಲ್ಲಿ ರೈತರಿಗೆ ನೀಡಿರುವ ಭರವಸೆಯಂತೆ 48,000 ಕೋಟಿ ರೂ.ಸಾಲ ಮನ್ನಾ ಮಾಡಿದ ನಂತರ ರಾಹುಲ್‌ ಗಾಂಧಿ ಮಾತನಾಡಲಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸವಾಲೆಸೆದರು.

ದೇವನಹಳ್ಳಿಯಲ್ಲಿ ನಡೆದ ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಯುಪಿಎ ಸರ್ಕಾರದ 10 ವರ್ಷದ ಆಡಳಿತದಲ್ಲಿ ದೇಶದ 3 ಕೋಟಿ ರೈತರಿಗೆ 50,000 ಕೋಟಿ ರೂ.ಸಾಲ ಮನ್ನಾ ಮಾಡಲಾಗಿತ್ತು. ಆದರೆ, ಕೇಂದ್ರ ಸರ್ಕಾರದ ಹೊಸ ಯೋಜನೆಯಿಂದ ಒಂದು ವರ್ಷಕ್ಕೆ 13ರಿಂದ 15 ಕೋಟಿ ರೈತರಿಗೆ 75,000 ಕೋಟಿ ರೂ.ನೆರವು ಸಿಗಲಿದೆ. 10 ವರ್ಷಗಳಲ್ಲಿ 7.5 ಲಕ್ಷ ಕೋಟಿ ರೂ.ರೈತರಿಗೆ ನೇರವಾಗಿ ತಲುಪುತ್ತದೆ. ಆದರೆ, ರಾಹುಲ್‌ಬಾಬಾಗೆ ಗಣಿತ ಗೊತ್ತಿಲ್ಲ. ಅದರಲ್ಲಿ ಅವರ ತಪ್ಪಿಲ್ಲ. ಏಕೆಂದರೆ ಅವರಿಗೆ ಆಲೂಗಡ್ಡೆ ಭೂಮಿಯ ಒಳಗೆ ಬೆಳೆಯುತ್ತದೆಯೋ, ಭೂಮಿಯ ಮೇಲಿರುತ್ತದೆಯೋ ಅಥವಾ ಫ್ಯಾಕ್ಟರಿಯಲ್ಲಿರುತ್ತದೆಯೋಎಂಬುದು ಗೊತ್ತಿಲ್ಲ. ಉತ್ತರ ಪ್ರದೇಶದಲ್ಲಿ ಆಲೂಗಡ್ಡೆ ಫ್ಯಾಕ್ಟರಿ ಮಾಡುವುದಾಗಿ ಘೋಷಿಸಿದ್ದಾರೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್‌ ದೇಶದ ಸುರಕ್ಷತೆ ಬಗ್ಗೆ ಯೋಚನೆ ಮಾಡುತ್ತಿರಲಿಲ್ಲ. ಮುಂದಿನ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಕರ್ನಾಟಕ ಸೇರಿ ದೇಶಾದ್ಯಂತ ಅಕ್ರಮವಾಗಿ ನೆಲೆಸಿರುವ ನುಸುಳುಕೋರರನ್ನು ಹುಡುಕಿ ಹುಡುಕಿ ಹೊರಗಟ್ಟಲಾಗುವುದು. ಎಚ್‌.ಡಿ.ದೇವೇಗೌಡರು ಮಮತಾ ಬ್ಯಾನರ್ಜಿ ಅವರು ಒಪ್ಪಲಿ, ಬಿಡಲಿ. ರಾಹುಲ್‌ ಗಾಂಧಿ, ಚಂದ್ರಬಾಬು ನಾಯ್ಡು ಏನೇ ಹೇಳಲಿ ಮುಂದಿನ ಬಾರಿ ಮೋದಿ ಸರ್ಕಾರ ಬಂದ ಬಳಿಕ ಮೂಲೆ ಮೂಲೆಯಲ್ಲಿರುವ ಅಕ್ರಮ ನುಸುಳು ಕೋರರನ್ನು ಹುಡುಕಿ ಹೊರಗಟ್ಟಲಾಗುವುದು ಎಂದು ವಾಗ್ಧಾನ ನೀಡಿದರು.

ಪುಲ್ವಾಮದಲ್ಲಿ ಇತ್ತೀಚೆಗೆ ಹುತಾತ್ಮ ರಾದ ಭಾರತೀಯ ಯೋಧರಿಗೆ ಬಿಜೆಪಿ ಶ್ರದ್ದಾಂಜಲಿ ಸಲ್ಲಿಸುತ್ತದೆ ಎನ್ನುತ್ತಲೇ ಅಮಿತ್‌ ಶಾ ಭಾಷಣ ಆರಂಭಿಸಿದರು. ಆವತಿ ಗ್ರಾಮದ ತಿಮ್ಮರಾಯಸ್ವಾಮಿ ಪಾದಕ್ಕೆ ನಮಿಸುತ್ತೇನೆ. ನಾಡಪ್ರಭು ಕೆಂಪೇಗೌಡರು ಜನಿಸಿದ ಗ್ರಾಮಕ್ಕೆ ಆಗಮಿಸಿದ್ದು, ಅವರಿಗೂ ನಮಿಸುತ್ತೇನೆ ಎಂದು ಹೇಳಿದರು.

ಹಿನ್ನಡೆ ಬಗ್ಗೆ ಪ್ರಸ್ತಾಪ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನ ಬೆಂಬಲಿಸಿದ್ದರು. ಯಡಿಯೂರಪ್ಪನೇತೃತ್ವದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನವನ್ನು ಗೆದ್ದರೂ ಅಪವಿತ್ರ, ಸ್ವಾರ್ಥದ ಘಟಬಂಧನದಿಂದ ಕಡಿಮೆ ಸ್ಥಾನ ಪಡೆದವರು ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 2014ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಶ್ರಮ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಶಾ ಕರೆ ನೀಡಿದರು.

ಮನೆ ಸೇರುವ ಮಾತಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, ಶುಕ್ರವಾರದಿಂದ ಮೋದಿ ವಿಜಯ ಸಂಕಲ್ಪ ಯಾತ್ರೆ ಆರಂಭಿಸುತ್ತಿದ್ದು, ಚುನಾವಣೆ ಮುಗಿಯುವವರೆಗೆ ಮನೆ ಸೇರುವ ಮಾತಿಲ್ಲ. ಪ್ರಧಾನಿ ಮೋದಿ ಪರ ಶೇ.84ರಷ್ಟು ಮಂದಿಯಿದ್ದಾರೆ ಎಂಬುದು ಸಮೀಕ್ಷೆಯೊಂದರಿಂದ ಗೊತ್ತಾಗಿದೆ. ಇಡೀ ದೇಶವೇ ಪ್ರಧಾನಿ ಯವರೊಂದಿಗೆ ಇರುವಾಗ ಇನ್ಯಾವ ಅನುಮಾನ? ಪ್ರಧಾನಿಯವರು ಒಂದು ದಿನವೂ ವಿಶ್ರಾಂತಿ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಬೈಕ್‌ ರ್ಯಾಲಿಯ ನಂತರ ರಾಜಕೀಯ ವಿರೋಧಿಗಳ ಮೈ ನಡುಗುತ್ತದೆ. ಅವರ ಭವಿಷ್ಯದ ಬಗ್ಗೆ ಯೋಚಿಸಬೇಕಾದ ದುಸ್ಥಿತಿಗೆ ತಲುಪಲಿದ್ದಾರೆ ಎಂದು ಹೇಳಿದರು.

ಗೆಲುವಿಗೆ ಶಾ ಸೂತ್ರ
ಮಹಾಘಟಬಂಧನ್‌ ಸರ್ಕಾರ ಬಂದರೆ ಆಡಳಿತ ಹೇಗಿರಲಿದೆ, ಮೋದಿ ಹಾಗೂ ಮಹಾ ಘಟಬಂಧನ್‌ನೊಂದಿಗಿನ ಹೋಲಿಕೆ ಹಾಗೂ ಮೋದಿ ಸರ್ಕಾರ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದನ್ನು ಜನರಿಗೆ ತಿಳಿಸಿ. ಇದು ಬಿಜೆಪಿ ಕಾರ್ಯಕರ್ತರಿಗೆ ಅಮಿತ್‌ ಶಾ ಅವರು ಲೋಕಸಭಾ ಚುನಾವಣೆ ಗೆಲುವಿಗೆ ನೀಡಿರುವ ಮೂರು ಅಂಶಗಳ ಸೂತ್ರ. ಸಭೆ ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ಚುನಾವಣೆ ಗೆಲುವಿಗೆ ಕಾರ್ಯಕರ್ತರು ಅನುಸರಿಸ ಬೇಕಾದ 3 ಅಂಶಗಳ ಬಗ್ಗೆ ಅಮಿತ್‌ ಶಾ, 3 ಅಂಶದ ಸೂತ್ರಗಳನ್ನು ತಿಳಿಸಿದ್ದಾರೆ.

ಮೊದಲಿಗೆ ಮಹಾಘಟಬಂಧನ್‌ ಸರ್ಕಾರ ರಚನೆಯಾದರೆ ಯಾವ ರೀತಿಯ ಆಡಳಿತ ನೀಡಬಹುದೆಂಬ ಕಲ್ಪನೆಯನ್ನು ಜನರ ಮುಂದಿಡಬೇಕು. ಪ್ರಧಾನಿ ಮೋದಿ, ಮಹಾಘಟ ಬಂಧನ್‌ಗೆ ಹೋಲಿಕೆ ಮಾಡಿ ಜನರಿಗೆತಿಳಿಸು ವುದು. ಮೋದಿ ಸರ್ಕಾರ ಸ್ಪಷ್ಟ ಬಹುಮ ತದೊಂದಿಗೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬು ದನ್ನು ಮನವ ರಿಕೆ ಮಾಡಿಕೊಡಬೇಕೆಂಬ ಅಂಶಗಳನ್ನು ತಿಳಿಸಿದ್ದಾರೆ ಎಂದು ಹೇಳಿದರು.

ಕಾರ್ಯಕರ್ತರು ಚುನಾವಣೆ ಕಾರ್ಯಕ್ಕೆ ಪೂರ್ಣ ಸಮಯ ವಿನಿ ಯೋಗಿಸಬೇಕು. ಕನಿಷ್ಠ 40 ಲಕ್ಷ ಧ್ವಜ,
50 ಲಕ್ಷ ದೀಪ ಬೆಳಗುವುದು, ಸಂಘಟನಾ ಸಂವಾದ ದಂತಹ ಐದು ಕಾರ್ಯ ಕ್ರಮಗಳನ್ನು ಮಾ.2ರೊಳಗೆ ಪೂರ್ಣಗೊ ಳಿಸಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.