ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ: ಶೋಭಾ ಕರಂದ್ಲಾಜೆ
Team Udayavani, Mar 2, 2021, 2:23 PM IST
ಚಿಕ್ಕಮಗಳೂರು :ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ. ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚುತ್ತಿದೆ. ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ಬ್ರಿಟಿಷರನ್ನು ಓಡಿಸಿದವರಿಗೆ ಮೋದಿಯನ್ನು ಓಡಿಸುವುದು ಕಷ್ಟವಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಪದೇ-ಪದೇ ಸೋಲುವುದರಿಂದ ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ನನಗೆ ಅನ್ನಿಸುತ್ತೆ. ಕಾಂಗ್ರೆಸ್ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗಿಯೂ ಉಳಿದಿಲ್ಲ. 4 ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ಸಿಗೆ ಸೋಲು ಕಟ್ಟಿಟ್ಟಬುತ್ತಿ ಎಂದು ನುಡಿದರು.
ಇದನ್ನೂ ಓದಿ:ಭರ್ಜರಿ ಟ್ರೋಲ್ ಆಗುತ್ತಿದೆ ರೋಹಿತ್ ಶರ್ಮಾರ ಈ ಫೋಟೋ..!
ವಂಶಾಡಳಿತ, ದುರಾಡಳಿತ, ಭ್ರಷ್ಟಾಚಾರದಿಂದ ನೀವು ಜನರಿಂದಲೇ ನಾಶವಾಗಿದ್ದೀರಾ. ಮತ್ತೆ ಸರ್ವನಾಶವಾಗುತ್ತಿರಿ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡುತ್ತಾರೆ. ಪಾರ್ಲಿಮೆಂಟ್ ಚುನಾವಣೆ ನಡೆದಾಗ ವಿದೇಶಕ್ಕೆ ಓಡಿ ಹೋಗುತ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡೋದು, ಡ್ಯಾನ್ಸ್ ಮಾಡೊದನ್ನು ನೋಡಬಹುದಾಗಿದೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಕೋಟ್ಯಾಂತರ ಆಸ್ತಿ ಮಾಡಿದ್ದು ಹೇಗೆ? ಕಾಂಗ್ರೆಸ್
ಸಿಬಿಎಸ್ಇ ಪರೀಕ್ಷೆ ರದ್ದತಿಯಿಂದ SSLC ಬಗ್ಗೆ ಗೊಂದಲ! ಸ್ಪಷ್ಟನೆ ನೀಡಿದ ಸುರೇಶ್ ಕುಮಾರ್
ರಾಹುಲ್ ಗಾಂಧಿ ಸಿಂಹವೋ, ನರಿಯೋ, ಇಲಿಯೋ ಎಂದು ಉಪಚುನಾವಣೆ ಬಳಿಕ ತಿಳಿಯಲಿದೆ: ಈಶ್ವರಪ್ಪ
ಜಗದೀಶ್ ಶೆಟ್ಟರ್ ಗೆ ಮಾತನಾಡುವುದು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ: ಸತೀಶ್ ಜಾರಕಿಹೊಳಿ
ಚಂದನವನದ ನವದಂಪತಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್’ಗೆ ಕೋವಿಡ್ ಸೋಂಕು ದೃಢ