ಜುಲೈ 5ರವರೆಗೆ ಕರಾವಳಿ ಜಿಲ್ಲೆಗಳ ಎಲ್ಲ ಸ್ಥಳಗಳಲ್ಲಿ ಮಳೆ
Team Udayavani, Jul 1, 2021, 11:12 PM IST
ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕಡಿಮೆ ಒತ್ತಡ ಇರುವ ವಿಸ್ತರಿಸಿದ ಪ್ರದೇಶ ಇದೆ. ಇದರ ಪ್ರಭಾವದಿಂದ ಜುಲೈ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 5ರವರೆಗೆ ಕೆಲವು ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಹಾಗೂ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ನೈರುತ್ಯ ಮುಂಗಾರು ರಾಜ್ಯದಲ್ಲಿ ಗುರುವಾರ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಮಾತ್ರ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಪ್ರಮುಖವಾಗಿ ಬೆಂಗಳೂರು ಹಾಗೂ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 2 ಸೆಂ.ಮೀ. ಹಾಗೂ ಕಾರವಾರದಲ್ಲಿ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ