ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ
ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೂ 5 ದಿನ ಮಳೆ
Team Udayavani, Jul 6, 2022, 2:05 AM IST
ಬೆಂಗಳೂರು/ಹುಬ್ಬಳ್ಳಿ: ಮುಂಗಾರು ಮಳೆ ರಾಜ್ಯದ ವಿವಿಧೆಡೆ ಬಿರುಸಾಗಿ ಸುರಿಯುತ್ತಿದೆ. ಮಹಾರಾಷ್ಟ್ರದಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ. ಮಳೆ, ಪ್ರವಾಹದ ಪ್ರಕೋಪದಿಂದ ಹಲವೆಡೆ ಗುಡ್ಡ ಕುಸಿದು ರಸ್ತೆ ಸಂಪರ್ಕ ಕಡಿದು ಹೋಗಿದೆ. ವಿದ್ಯುತ್, ದೂರವಾಣಿ ಸಂಪರ್ಕ ವ್ಯತ್ಯಯಗೊಂಡಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಗಾ ನದಿ ನೀರು ಅಪಾಯ ಮಟ್ಟ ಮೀರಿದೆ.
ಕಾಫಿ ತೋಟದಲ್ಲಿ ಹಳ್ಳ ದಾಟುವಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿರುವ 7 ವರ್ಷದ ಬಾಲಕಿಗಾಗಿ ಶೋಧ ಮುಂದುವರಿದಿದೆ. ಹೊಸಪೇಟೆ ಗ್ರಾಮದ ಸುಪ್ರೀತಾ ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಮರಳುವ ವೇಳೆ ಕಾಲು ಜಾರಿ ಹಳ್ಳಕ್ಕೆ ಬಿದ್ದಿದ್ದಳು.
ನದಿಗಳು ಅಪಾಯದ ಮಟ್ಟದಲ್ಲಿ
ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ನದಿಗಳಾದ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಶೃಂಗೇರಿ ಶಾರದಾ ದೇವಸ್ಥಾನ ಬಳಿ ಇರುವ ಕಪ್ಪೆಶಂಕರ ನೀರಿನಲ್ಲಿ ಮುಳುಗಿದೆ. ಕುದುರೆಮುಖ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ, ಬಾಳೆಹೊನ್ನೂರು ಸುತ್ತಮುತ್ತ ನಿರಂತರ ಮಳೆಯಾಗುತ್ತಿದ್ದು, ಭದ್ರಾ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಕಳಸ-ಹೆಬ್ಟಾಳೆ ಸೇತುವೆ ಭದ್ರಾ ನದಿ ನೀರಿನಲ್ಲಿ ಮುಳುಗಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ವಿದ್ಯಾರ್ಥಿಗಳ ಸುರಕ್ಷೆಯ ದೃಷ್ಟಿಯಿಂದ ಶೃಂಗೇರಿ, ಮೂಡಿಗೆರೆ, ಕಳಸ ತಾಲೂಕು ವ್ಯಾಪ್ತಿಯಲ್ಲಿ ಬುಧವಾರವೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕುಗಳಲ್ಲಿ ಕೂಡ ಬುಧವಾರ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಮಧೂರು ದೇಗುಲ ಜಲಾವೃತ
ಕಾಸರಗೋಡು: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಮಧುವಾಹಿನಿ ನದಿಯ ಪ್ರವಾಹವು ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಅಂಗಣದಲ್ಲಿ ಉಕ್ಕಿ ಹರಿಯಿತು..
ಹಳಿ ಮೇಲೆ ಬಿದ್ದ ಮರ: ರೈಲು ಸಂಚಾರ ಸ್ಥಗಿತ
ಪಣಜಿ: ಗೋವಾ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾವರ್ಡೆ ಬಳಿ ರೈಲ್ವೇ ಹಳಿ ಮೇಲೆ ಬೃಹತ್ ಮರ ಬಿದ್ದು ವಾಸ್ಕೊ-ಕುಳೆ ರೈಲು ಸಂಚಾರ ಹಲವು ತಾಸುಗಳ ಕಾಲ ಸ್ಥಗಿತಗೊಂಡಿತ್ತು. ಅನಂತರ ರೈಲ್ವೇ ಸಿಬಂದಿ ಕಾರ್ಯಾಚರಣೆ ನಡೆಸಿ ಮರವನ್ನು ತೆರವುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು: ಸಿಎಂ ಬೊಮ್ಮಾಯಿ
ಸ್ವಾತಂತ್ರ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಚಿತ್ರ ಹಾಕಿದ್ದಕ್ಕೆ ಎಸ್ ಡಿಪಿಐ ಆಕ್ರೋಶ
ಪ್ರೇಮ ಪ್ರಕರಣ; ತಿರುಗಲು ಬಂದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಚೂರಿ ಇರಿತ: ಆರೋಪಿ ವಶಕ್ಕೆ
ಸಾಮಾಜಿಕ ಜಾಲತಾಣದಲ್ಲಿ ಹರ್ ಘರ್ ತಿರಂಗ ಟ್ರೆಂಡಿಂಗ್, ಗಣ್ಯರ ಮನೆಗಳಲ್ಲಿ ಹಾರಿದ ತ್ರಿವರ್ಣ
ಮೋದಿ ನಾಯಕತ್ವದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಪ್ರತಿಷ್ಠಿತ ಸ್ಥಾನಮಾನ: ಜೈಶಂಕರ್