ಮಾ.13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆ ಸಾಧ್ಯತೆ : ಹವಾಮಾನ ಇಲಾಖೆ
Team Udayavani, Mar 11, 2021, 11:06 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅರಬ್ಬಿ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಾಗಿರುವ ಹಿನ್ನೆಲೆಯಲ್ಲಿ ಮಾ.13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಶುಕ್ರವಾರ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರ ಬೆಳಗ್ಗೆ8.30ಕ್ಕೆಅಂತ್ಯಗೊಂಡ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕಲಬುರಗಿಯಲ್ಲಿ ರಾಜ್ಯದಲ್ಲೇ ಅತೀ ಗರಿಷ್ಠ ತಾಪಮಾನ 38.5ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ದಾಖಲಾದ ಗರಿಷ್ಠ ತಾಪಮಾನ ಇದಾಗಿದೆ. ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 15.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಉಳಿದಂತೆ ರಾಜ್ಯದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್